ಕಲಬುರಗಿ: ಚಹಾ ಹೋಟೆಲ್‌ನಲ್ಲಿ ಗ್ರಾಹಕರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳದಲ್ಲಿ ಜ್ಯೋತಿಷಿಯೊಬ್ಬ ಹಾಡುಹಗಲೇ ಕೊಲೆಯಾದ ಘಟನೆ ಶುಕ್ರವಾರ ಚಿತ್ತಾಪುರ ತಾಲೂಕಿನ ಹಳಕರ್ಟಿ ಗ್ರಾಮದಲ್ಲಿ ಸಂಭವಿಸಿದೆ.
ಹಳಕರ್ಟಿ ಗ್ರಾಮದ ಸುರೇಶ ಭೀಮರಾವ ವಾಸ್ಟರ್ (58) ಕೊಲೆಯಾದ ವ್ಯಕ್ತಿ. ರಾಜಕೋಟ್ ನಗರದಲ್ಲಿ ಜ್ಯೋತಿಷ್ಯ ಹೇಳಿ ಜೀವನ ನಡೆಸುತ್ತಿರುವ ಮೃತ ಸುರೇಶ ವಾಸ್ಟರ್, ಹಳಕರ್ಟಿ ಗ್ರಾಮದಲ್ಲಿ ಸ್ವಂತ ಜಮೀನು ಮತ್ತು ಮನೆ ಹೊಂದಿದ್ದಾರೆ. ಜಮೀನು ನೊಂದಣಿ ವಿಷಯಕ್ಕೆ ಸಂಬಂದಿಸಿದಂತೆ ಗುರುವಾರ ಕುಟುಂಬ ಸಮೇತ ಸ್ವಗ್ರಾಮಕ್ಕೆ ಆಗಮಿಸಿದ್ದಾರೆ.
ಈ ವೇಳೆ ಶುಕ್ರವಾರ ಗ್ರಾಮದ ಚೌಡೇಶ್ವರ ವೃತ್ತದ ಹೋಟೆಲ್‌ವೊಂದರಲ್ಲಿ ಕೊಲೆಯಾದ ಸುರೇಶ ಭಜಿ ತಿನ್ನಲು ಹೋಗಿದ್ದಾರೆ ಎನ್ನಲಾಗಿದ್ದು, ಈ ಸಂದರ್ಭದಲ್ಲಿ ಹೊಟೆನಲ್ಲಿದ್ದ ಗ್ರಾಹಕರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಮಾತಿಗೆ ಮಾತು ಬೆಳೆದು ಹೊಡೆದಾಟಕ್ಕೆ ಕಾರಣವಾಗಿದೆ. ಮಾರಾಮಾರಿಯಲ್ಲಿ ನೆಲಕ್ಕುರುಳಿದ ಸುರೇಶ ವಾಸ್ಟರ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಚಿತ್ತಾಪುರ ಸಿಪಿಐ ಕೃಷ್ಣಪ್ಪ ಕಲ್ಲದೇವರು ಹಾಗೂ ವಾಡಿ ಠಾಣೆ ಪಿಎಸ್‌ಐ ವಿಜಯಕುಮಾರ ಭಾವಗಿ, ಪರಿಶೀಲನೆ ನಡೆಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಗ್ರಾಮದ ಮಹೆಬೂಬಅಲಿ, ಸೈಯದ್ ಪಾಷಾ, ಸೈಯ್ಯದ್ ಮಝರ್, ಶೋಯಲ್, ಮಹ್ಮದ್ ಶಾರುಖ್, ಸೈಯ್ಯದ್ ಹಜಾರ್ ಸೇರಿದಂತೆ ಒಟ್ಟು ಆರು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಹಳಕರ್ಟಿ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಠಿಯಾಗಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…