ಸಿಡಿಲಿಗೆ ಬಲಿಯಾದ ಕುಟುಂಬಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಪರಿಹಾರ ಚಿಕ್ ವಿತರಣೆ

0
83

ಕಲಬುರಗಿ: ಜಿಲ್ಲೆಯ ಚಿತ್ತಾಪುರ ಮತಕ್ಷೇತ್ರದ  ಹಲಕರ್ಟಾ ಗ್ರಾಮದಲ್ಲಿ  ಇತ್ತೀಚಿಗೆ ಸಿಡಿಲು ಬಡಿದು ಸಾವನ್ನಪ್ಪಿದ ಲಚಮಯ್ಯಾ ತಂದೆ ನಾಗಪ್ಪ ಅವರ ಕುಟುಂಬದ ಸದಸ್ಯರಿಗೆ ಸಮಾಜಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಭೇಟಿ ಮಾಡಿ ಸಾಂತ್ವಾನ ಹೇಳಿದರು.

Contact Your\'s Advertisement; 9902492681

ಇದೇ ಸಂದರ್ಭದಲ್ಲಿ ಮೃತರ ಕುಟುಂಬ ವರ್ಗದವರಿಗೆ  ರೂ 5 ಲಕ್ಷ ಪರಿಹಾರದ ಚೆಕ್ ಗಳನ್ನು ವಿತರಿಸಿದರು.

ಮೃತರ ಕುಟುಂಬ ವರ್ಗದವರಿಗೆ  ಆಶ್ರಯ ಯೋಜನೆಯಡಿಯಲ್ಲಿ ಮನೆ ಮಂಜೂರು ಮಾಡುವಂತೆ ಸ್ಥಳದಲ್ಲಿ ಇದ್ದ ಚಿತ್ತಾಪುರ ತಹಸೀಲ್ದಾರ ಅವರಿಗೆ ಸಚಿವರು ಸುಚಿಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತ್ ಹಾಗೂ ಗ್ರಾಮ ಮಂಚಾಯತ್ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಸೇರಿದಂತೆ ಮುಂತಾದವರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here