ಬಿಸಿ ಬಿಸಿ ಸುದ್ದಿ

ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ 2020-21ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿಯಲ್ಲಿ (ಎಸ್.ಸಿ.ಪಿ./ ಟಿ.ಎಸ್.ಪಿ) ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಹಾಗೂ ವಿದ್ಯುನ್ಮಾನ ಮಾಧ್ಯಮ ಸ್ನಾತಕೋತ್ತರ ಪದವೀಧರರಿಗೆ ವೃತ್ತಿಯಲ್ಲಿ ಉತ್ತಮ ಕಾರ್ಯನಿರ್ವಹಿಸಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮೂರು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಪರಿಶಿಷ್ಟ ಜಾತಿಯ 25 ಮಂದಿ ಹಾಗೂ ಪರಿಶಿಷ್ಟ ಪಂಗಡದ 10 ಮಂದಿ ಅಭ್ಯರ್ಥಿಗಳನ್ನು ಗರಿಷ್ಠ ಅಂಕಗಳ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರಿಕಾಲಯ / ವಾಹಿನಿಗಳಲ್ಲಿ ತರಬೇತಿ ನೀಡಿ ಮಾಹೆಯಾನ 15,000 ರೂ. ಗಳ ಸ್ಟೈಫಂಡ್ ನೀಡಲಾಗುವುದು.

ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿದ್ದು ಕನ್ನಡ ಭಾಷೆಯಲ್ಲಿ ಪರಿಣಿತರಾಗಿರಬೇಕು. ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು.

ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರಗಳೊಂದಿಗೆ ಜಾತಿ ಪ್ರಮಾಣ ಪತ್ರ, ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಇನ್ನಿತರೆ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಇ-ಮೇಲ್ ವಿಳಾಸ traineekma2020@gmail.com ಮೂಲಕ ಅಥವಾ ಅಂಚೆ ಮೂಲಕ ದಿನಾಂಕ : 27-11-2020 ರ ಒಳಗೆ ತಲುಪುವಂತೆ ಕಳುಹಿಸಬೇಕು.

ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ ಸೇರಿದಂತೆ ಯಾವುದೇ ಸರ್ಕಾರಿ ಇಲಾಖೆ/ಸಂಸ್ಥೆಗಳಲ್ಲಿ ಫಲಾನುಭವಿಗಳಾಗಿದ್ದರೆ ಅಂತಹವರು ಅರ್ಜಿ ಸಲ್ಲಿಸುವಂತಿಲ್ಲ. ಸರ್ಕಾರದಿಂದ ಈಗಾಗಲೇ ಸೌಲಭ್ಯ ಪಡೆದ ಅಭ್ಯರ್ಥಿಗಳು ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದಲ್ಲಿ ಅವರ ಅರ್ಜಿಯನ್ನು ತಿರಸ್ಕರಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮ್ಮೆ ಹೂಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ :080-22860164 ಕಾರ್ಯದರ್ಶಿಗಳು, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು-560001 ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧಿಕೃತ ಪ್ರಕಟಣೆ ತಿಳಿಸಿದೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

22 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago