ಶಹಾಬಾದ:ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಲು ಬಿಜೆಪಿ ಸರಕಾರ ಬದ್ಧವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ ಅವರು ಹೇಳಿಕೆ ನೀಡಿರುವುದಕ್ಕೆ ಬಂಜಾರಾ ಸಮಾಜದ ಯುವ ಮುಖಂಡ ಕಿರಣಕುಮಾರ ಚವ್ಹಾಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿರಾದಲ್ಲಿ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಮಾದಿಗ ಸಮಾಜದ ಮತಗಳನ್ನು ಸೆಳೆಯಲು ಈ ರೀತಿಯ ಹೇಳಿಕೆ ನೀಡಿರುವುದು ನ್ಯಾಯಸಮ್ಮತವಲ್ಲ.ಈಗಾಗಲೇ ಸದಾಶಿವ ಆಯೋಗ ಜಾರಿಗೊಳಿಸಬಾರದೆಂದು ಇತರ ಸಮಾಜದವರು ಮುಖ್ಯಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.ಆದರೆ ಮತಗಳನ್ನು ಪಡೆಯಲು ಈ ರೀತಿಯ ಹೇಳಿಕೆ ನೀಡಿರುವುದು ನಾಚಿಕೆಗೇಡಿನ ಸಂಗತಿ.ಪಕ್ಷದ ಒಬ್ಬ ಜವಾಬ್ದಾರಿ ವ್ಯಕ್ತಿಯಾಗಿ ಈ ರೀತಿ ಹೇಳಿಕೆ ನೀಡಿ ಇತರ ಸಮಾಜದ ಭಾವನೆಗೆ ದಕ್ಕೆ ತರುವಂತ ಕೆಲಸ ಮಾಡುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಭ್ಯಥರ್ಿ ಗೆಲ್ಲಲ್ಲು ಬಂಜಾರಾ ಸಮಾಜದ ಮತಗಳು ಸೆಳೆಯಲು ಏನೆಲ್ಲಾ ಭರವಸೆಗಳನ್ನು ನೀಡಿದ ಬಿಜೆಪಿಗರು ಈಗ ಮರೆತು ಹೋದರಾ? ಅಲ್ಲದೇ ಈ ರೀತಿಯ ಹೇಳಿಕೆ ನೀಡಿದರೂ ಸಂಸದ ಡಾ.ಉಮೇಶ ಜಾಧವ ಹಾಗೂ ಬಂಜಾರಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ ಸುಮ್ಮನಾಗಿರುವುದು ಏತಕ್ಕೆ.ಕೂಡಲೇ ಈ ಹೇಳಿಕೆ ಬಗ್ಗೆ ಮಾತನಾಡಿ.ಇಲ್ಲದಿದ್ದರೇ ಬಂಜಾರಾ ಸಮಾಜದವರು ನಿಮ್ಮನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಹೇಳಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…