ಬಿಸಿ ಬಿಸಿ ಸುದ್ದಿ

ದೀಪಾವಳಿ ಹಬ್ಬ ಭಕ್ತಿ ಪೂರ್ವಕವಾಗಿ ಸರಳತೆಯಿಂದ ಆಚರಿಸಲು ಡಿಸಿ ಸೂಚನೆ

ಕಲಬುರಗಿ: ಕೋವಿಡ್-19 ವೈರಾಣು ಸೋಂಕು ನಿಯಂತ್ರಣಕ್ಕಾಗಿ ಹಾಗೂ ಸಾರ್ವಜನಿಕರು ಮತ್ತು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ 2020ನೇ ಸಾಲಿನ ದೀಪಾವಳಿ ಹಬ್ಬವನ್ನು ಸರಳ ಹಾಗೂ ಭಕ್ತಿ ಪೂರ್ವಕವಾಗಿ ಆಚರಿಸಬೇಕೆಂದು ಕಲಬುರಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ವಿ.ವಿ. ಜ್ಯೋತ್ಸ್ನಾ ಅವರು ತಿಳಿಸಿದ್ದಾರೆ.

ಈ ದೀಪಾವಳಿ ಹಬ್ಬ ಆಚರಣೆ ಸಂಬಂಧವಾಗಿ ಸರ್ಕಾರವು ದಿನಾಂಕ: 6-11-2020 ರಂದು ಪರಿಷ್ಕøತ ಮಾರ್ಗಸೂಚಿ ಹೊರಡಿಸಿದೆ. ಈ ಪರಿಷ್ಕøತ ಅದೇಶದಂತೆ ಈ ದೀಪಾವಳಿ ಹಬ್ಬ ಆಚರಣೆ ಮಾಡಬೇಕು. ರಾಜ್ಯಾದ್ಯಂತ ಈ ದೀಪಾವಳಿ ಹಬ್ಬವನ್ನು ನವೆಂಬರ್ 14 ರಿಂದ 16ರವರೆಗೆ ಆಚರಿಸಲಾಗುತ್ತಿದೆ.

ಅಧಿಕೃತವಾಗಿ ಪರವಾನಿಗೆ ಪಡೆದ ಪಟಾಕಿ ಮಾರಾಟಗಾರರು 2020ರ ನವೆಂಬರ್ 7 ರಿಂದ 16ರವರೆಗೆ ನಿಗದಿಪಡಿಸಿದ ಸ್ಥಳಗಳಲ್ಲಿ ತಾತ್ಕಾಲಿಕವಾಗಿ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆದು ಹಸಿರು ಪಟಾಕಿ ಮಾರಾಟ ಮಾಡಬೇಕು. ಬೇರೆ ಸ್ಥಳಗಳಲ್ಲಿ ಅಂಗಡಿ ತೆರೆಯಬಾರದು. ಸರ್ವೋಚ್ಛ ನ್ಯಾಯಾಲಯವು ಅನುಮತಿ ನೀಡಿದ “ಹಸಿರು ಪಟಾಕಿ”ಗಳನ್ನು ಮಾತ್ರ ಮಾರಾಟ ಮಾಡಬೇಕು. ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳನ್ನು ಮಾರಾಟ ಮಾಡಬಾರದು ಹಾಗೂ ಹಚ್ಚಬಾರದು.

ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಮಾತ್ರ ಪಟಾಕಿ ಮಾರಾಟ ಮಳಿಗೆ ಸ್ಥಾಪಿಸಲು ಸಂಬಂಧಪಟ್ಟ ಇಲಾಖೆ ಹಾಗೂ ಪ್ರಾಧಿಕಾರಗಳು ಅನುಮತಿ ನೀಡಬೇಕು. ಮಳಿಗೆಗಳಲ್ಲಿ ಎರಡೂ ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು. ಒಂದು ಮಾರಾಟ ಮಳಿಗೆಯಿಂದ ಮತ್ತೊಂದು ಮಾರಾಟ ಮಳಿಗೆಗೆ 6 ಮೀಟರ್ ಅಂತರವಿರಬೇಕು. ಪ್ರತಿಯೊಂದು ಮಳಿಗೆಗಳಲ್ಲಿ ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರದಿಂದ ನೀಡಿರುವ ಪರವಾನಿಗೆ ಪ್ರತಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು. ಪರವಾನಿಗೆ ಪತ್ರವನ್ನು ಪಡೆದವರು ಕಡ್ಡಾಯವಾಗಿ ಮಳಿಗೆಗಳಲ್ಲಿ ಹಾಜರಿರಬೇಕು.

ಪಟಾಕಿಗಳನ್ನು ಮಾರಾಟ ಮಾಡುವ ಮಳಿಗೆಗಳ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಜೇಶನ್ ಮಾಡಬೇಕು. ಪಟಾಕಿ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಜರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸುವ ಜೊತೆಗೆ ಕನಿಷ್ಠ 6 ಅಡಿ ಸಾಮಾಜಿಕ ಅಂತರವನ್ನು ಗುರುತಿಸಿ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಬೇಕು. ಪಟಾಕಿ ಮಾರಾಟ ಮಾಡುವ ವ್ಯಾಪಾರಸ್ಥರು ಮತ್ತು ಖರೀದಿಗೆ ಬರುವ ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು (ಮಾಸ್ಕ್) ಧರಿಸಬೇಕು. ಖರೀದಿ ಸಂದರ್ಭದಲ್ಲಿ ಯಾವುದೇ ರೀತಿಯ ಜನದಟ್ಟಣೆಯಾಗದಂತೆ ನೋಡಿಕೊಳ್ಳಬೇಕು.

ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು. ಅಲ್ಲದೇ ಸಾರ್ವಜನಿಕರ ಮತ್ತು ಮಕ್ಕಳ ಆರೋಗ್ಯ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಆಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆ, ಪಾಲಿಕೆ, ಪ್ರಾಧಿಕಾರಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸಬೇಕು.

ಸರ್ವೋಚ್ಛ ನ್ಯಾಯಾಲಯದ ದಿನಾಂಕ: 23-10-2018 ಹಾಗೂ ದಿನಾಂಕ: 31-10-2018 ಹಾಗೂ ತದನಂತರ ನೀಡಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ದೀಪಾವಳಿ ಹಬ್ಬ ಆಚರಣೆ ಸಂಬಂಧವಾಗಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಅಗತ್ಯಕ್ರಮಕೈಗೊಳ್ಳಬೇಕು.

ರಾಷ್ಟ್ರಿಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ, ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಅಧಿನಿಯಮ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತು, ಕಾನೂನು ಕ್ರಮ ಹಾಗೂ ಅನ್ವಯವಾಗುಬಹುದಾದ ಇತರೆ ಕಾನೂನು ಉಪಬಂಧಗಳ ಅನ್ವಯ ಕ್ರಮ ಜರುಗಿಸಲಾಗುತ್ತದೆ.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

4 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

4 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

6 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

6 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

6 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

6 hours ago