ಕಲಬುರಗಿ: ಕಾಂಗ್ರೇಸ್ ಪಕ್ಷ ಅಧಿಕಾರದಲ್ಲಿರುವಾಗೆಲ್ಲ ರೈತರ ಪರ ಯೋಜನೆಗಳನ್ನು ಹಾಕಿಕೊಂಡು ಅವರ ಸಾಲ ಮನ್ನಾ ಮಾಡಿದೆ. ಆದರೆ ಮೋದಿ ಸರ್ಕಾರ ಏನು ಮಾಡಿದೆ? ಎಂದು ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೇಸದ ಅಭ್ಯರ್ಥಿ ಹಾಗೂ ಲೋಕಸಭೆ ಕಾಂಗ್ರೇಸ್ ನಾಯಕ ಎಂ. ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಅವರು ಇಂದು ಬಳೂರ್ಗಿ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಚುನಾವಣಾ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಕೇಂದ್ರದಲ್ಲಿ ಮನಮೋಹನಸಿಂಗ್ ಸರಕಾರ ಇದ್ದಾಗ 72,000 ಕೋಟಿ, ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರ ಇದ್ದಾಗ 8,000 ಕೋಟಿ ಹಾಗೂ ಈಗ ಸಮ್ಮಿಶ್ರ ಸರಕಾರದ ಅವಧಿಯಲ್ಲಿ 40,000 ಕೋಟಿ ರೈತರ ಸಾಲ ಮನ್ನಾ ಮಾಡಿದ್ದೇನೆ. ಆದರೂ ಮೋದಿ ತಮ್ಮ ಸುಳ್ಳುಗಳ ಮೂಲಕ ನಮ್ಮ ರೈತಪರ ನಿಲುವುಗಳನ್ನು ಪ್ರಶ್ನಿಸುತ್ತಾರೆ. ನಮಗೆ ಪ್ರಶ್ನಿಸುವ ಮುನ್ನ ತಾವು ರೈತರಿಗೆ ಏನು ಮಾಡಿದ್ದಾರೆ ಎಂದು ಉತ್ತರಿಸಲಿ ಎಂದು ವ್ಯಂಗ್ಯವಾಡಿದರು.
ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸ ಮಾಡಿದ್ದೇನೆ ಈಗ ಮತ ಕೇಳಲು ಬಂದಿದ್ದೇನೆ. ಏನೂ ಮಾಡದ ಬಿಜೆಪಿಯವರು ಯಾವ ನೈತಿಕತೆ ಮೇಲೆ ಮತ ಕೇಳಲು ಬರುತ್ತಾರೆ ? ಎಂದು ಪ್ರಶ್ನಿಸಿದ ಅವರು ನನ್ನನ್ನು ಸೋಲಿಸುವ ಏಕೈಕ ಉದ್ದೇಶದಿಂ ಸೋತವರೆಲ್ಲ ಒಂದಾಗಿದ್ದಾರೆ. ತಾವೇ ಗೆದ್ದಿಲ್ಲ, ನೀವೆಲ್ಲ ನನ್ನ ಜೊತೆ ಇರುವಾಗ ನನ್ನನ್ನೇನು ಸೋಲಿಸುತ್ತಾರೆ ? ಎಂದು ಪ್ರಶ್ನಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…