ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾ, ಪೂಜ್ಯ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿ ಹಾಗೂ ಪೂಜ್ಯ ಚಿ. ದೊಡ್ಡಪ್ಪ ಅಪ್ಪಾರವರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಶಿಕ್ಷಣ ನೀತಿ ೨೦೨೦ರ ಭಾಗವಾಗಿ ಶುಕ್ರವಾರ ಬೆಳಿಗ್ಗೆ ೧೧ ಗಂಟೆಗೆ ಆಯೋಜಿಸಿದ್ದ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕೀರಣವನ್ನು (ವೆಬಿನಾರ್) ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಡಾ. ಶರಣಪ್ಪ ವಿ. ಹಲ್ಸೆ ಉದ್ಘಾಟಿಸಲಿದ್ದಾರೆ.
ವಿವಿ ಕುಲಸಚಿವ ಡಾ. ಅನೀಲಕುಮಾರ ಬಿಡವೆ, ’ಉನ್ನತ ಶಿಕ್ಷಣಕ್ಕೆ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾ ಅವರ ಕೊಡುಗೆ, ವಿಶೇಷವಾಗಿ ಬಹು ಶಿಸ್ತಿನ ದೊಡ್ಡ ವಿಶ್ವವಿದ್ಯಾಲಯ ಸ್ಥಾಪಿಸಿದ್ದ’ ಬಗ್ಗೆ ಒಂದು ದಿನದ ವೆಬ್‌ನಾರ್ ಹಮ್ಮಿಕೊಳ್ಳಲಾಗಿದೆ. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ ಕಾರ್ಯಕ್ರಮದ ಅತಿಥಿ ಮತ್ತುಡಾ. ಶರಣಪ್ಪ ವಿ. ಹಲ್ಸೆ ಉದ್ಘಾಟನಾ ಭಾ?ಣ ಮಾಡಲಿದ್ದಾರೆ. ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಡಾ. ನಿರಂಜನ ವಿ. ನಿಷ್ಠಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಬುಧವಾರ ಹೇಳಿದರು.
ಗುಲ್ಬರ್ಗಾ ವಿಶ್ವವಿದ್ಯಾಲಯದ ಸಮಾಜಕಾರ್ಯ ವಿಭಾಗದ ಪ್ರಾಧ್ಯಾಪಕ ಡಾ.ಕೆ.ಎಸ್. ಮಾಲಿಪಾಟೀಲ, ಕರ್ನಾಟಕದ ಕೇಂದ್ರೀಯ ವಿಶ್ವವಿದ್ಯಾಲಯದ ಬ್ಯುಸಿನೇಸ್ ಸ್ಟಡಿಸ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಗಣಪತಿ ಸಿನ್ನೋರ್, ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ. ಅನೀಲಕುಮಾರ ಬಿಡವೆ, ಮೌಲ್ಯಮಾಪನ ಕುಲಸಚಿವ ಡಾ. ಲಿಂಗರಾಜ ಶಾಸ್ತ್ರಿ ವಿಷಯದ ಕುರಿತು ಮಾತನಾಡಲಿದ್ದಾರೆ ಎಂದು ಡಾ. ಅನೀಲಕುಮಾರ ಬಿಡವೆ ತಿಳಿಸಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…