ಬಿಸಿ ಬಿಸಿ ಸುದ್ದಿ

ಕೆ.ಎಂ.ಡಿ.ಸಿಯಲ್ಲಿ ನೂತನ ಯೋಜನೆಗಳಿಗೆ ಆನ್‍ಲೈನ್ ಅರ್ಜಿ ಆಹ್ವಾನ

ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ  ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ಕಿರು ಸಾಲ ಯೋಜನೆ ಸೇರಿ (ವೈಯಕ್ತಿಕ) ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಹಾಯವಾಗಲು ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ನೂತನ ವೆಬ್ ಸೈಟ್ ಅಭಿವೃದ್ಧಿ ಪಡಿಸಲಾಗಿದ್ದು, ಇನ್ನೂ ಮುಂದೆ ಕಚೇರಿಗಳಿಗೆ ಅರ್ಜಿ ಹಾಕಲು ಅಲೆಯಬೇಕಾಗಿರುವುದಿಲ್ಲ ಎಂದು   ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಖ್ತಾರಹುಸೇನ್ ಎಫ್ ಪಠಾಣ್ ಅವರು ತಿಳಿಸಿದರು.

ಇಂದು ನಗರದ ವಿವಿ ಟವರ್‍ನಲ್ಲಿರುವ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ವೆಬ್‍ಸೈಟ್‍ಗೆ ಚಾಲನೆ ನೀಡಿ ಮಾತನಾಡಿದ ಅವರು  ಕಿರು  ಸಾಲಯೋಜನೆ(ವೈಯಕ್ತಿಕ) ಯಡಿಯಲ್ಲಿ ಮಹಿಳೆಯರಿಗಾಗಿ ಸಾಲ ನೀಡಲಾಗುತ್ತಿದ್ದು, 2020-21ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಲು ಈ ಡಿಸೆಂಬರ್ 10ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯಡಿಯಲ್ಲಿ ಸಾಲ ಪಡೆಯಲು ಅರ್ಜಿದಾರರು  ನಿಗಮದ ಯಾವುದೇ ಯೋಜನೆಯಲ್ಲೂ ಇದುವರೆಗೆ ಸಾಲ ಅಥವಾ ಸಹಾಯಧನ ಪಡೆದಿರಬಾರದು.

ಬಿಪಿಎಲ್ ಕಾರ್ಡ್ ಹೊಂದಿರುವ ಅಲ್ಪಸಂಖ್ಯಾತ ಸಮುದಾಯದ 23,000 ಮಹಿಳೆಯರಿಗೆ ಸಾಲ ನೀಡಲು ಉದ್ದೇಶಿಸಲಾಗಿದ್ದು, ಅರ್ಜಿದಾರರು 25 ರಿಂದ 50 ವಯೋಮಾನದೊಳಗಿರಬೇಕು. ತಳ್ಳುವಗಾಡಿಯಲ್ಲಿ ವ್ಯಾಪಾರ, ಬೀದಿವ್ಯಾಪಾರ, ಜಾತ್ರೆಗಳಲ್ಲಿ ವ್ಯಾಪಾರ, ಕಿರಾಣೀ ಅಂಗಡಿ, ಅರಿಷಿನ/ಕುಂಕುಮ/ ಅಗರಬತ್ತಿ/ಕರ್ಪೂರ, ಪಾದಚಾರಿ ಮಾರ್ಗದಲ್ಲಿ, ಟೀ/ಕಾಫಿಮಾರಾಟ, ಎಳನೀರು ವ್ಯಾಪಾರ, ಹೂವಿನ ವ್ಯಾಪಾರ, ತರಕಾರಿ ವ್ಯಾಪಾರ, ಹಣ್ಣಿನ ವ್ಯಾಪಾರ, ಇನ್ನಿತರ ಸಣ್ಣ ವ್ಯಾಪಾರ ನಡೆಸಲು ಆರಂಭಿಕ ಬಂಡವಾಳಕ್ಕಾಗಿ ರೂ.10,000/- ಮೊತ್ತದ (ರೂ.8000/-ಸಾಲ+ರೂ.2,000/-ಸಬ್ಸಿಡಿ) ಅಲ್ಪಾವಧಿ ಸಾಲ ಯೋಜನೆಯಾಗಿದೆ.

2020-21ನೇ ಸಾಲಿನ ನಿಗಮದಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ಯೋಜನೆಗಳು ‘ವೃತ್ತಿ ಪ್ರೋತ್ಸಾಹ’ ಯೋಜನೆ(ಪರಿಷ್ಕøತ), ‘ಅರಿವು’ (ವಿದ್ಯಾಭ್ಯಾಸ ಸಾಲ) ಸಾಲ ಯೋಜನೆ (ಪರಿಷÀ್ಕøತ), ಗಂಗಾ ಕಲ್ಯಾಣ ಯೋಜನೆ, ಶ್ರಮಶಕ್ತಿÀ ಯೋಜನೆ, ಸಣ್ಣ (ಮೈಕ್ರೋ) ಸಾಲ ಮತ್ತು ಸಹಾಯಧನ ಯೋಜನೆ, ಗೃಹ ನಿರ್ಮಾಣ- ಮಾರ್ಜಿನ್ ಹಣ ಸಾಲ ಯೋಜನೆ, ಪಶು ಸಂಗೋಪನೆ ಯೋಜನೆ, ಟ್ಯಾಕ್ಸಿ/ಗೂಡ್ಸ್ ವಾಹನ ಖರೀದಿಸಲು ಸಹಾಯಧನ ಯೋಜನೆ(ಪರಿಷ್ಕøತ), ಅಲ್ಪಸಂಖ್ಯಾತರ ರೈತರ ಕಲ್ಯಾಣ ಯೋಜನೆ, “ಆಟೋ ಮೊಬೈಲ್ ಸರ್ವಿಸ್, ಬಿದರಿ ಮತ್ತು ರೇಷ್ಮೆ, ಚನ್ನಪಟ್ಟಣ ಕರಕುಶಲ ಚಟುವಟಿಕೆಗಳಿಗೆ ತರಬೇತಿ ಪ್ರೋತ್ಸಾಹ ಹಾಗೂ ಸಾಲ ಮತ್ತು ಸಹಾಯಧನ ಹಾಗೂ ಮೂಲಭೂತ ಸೌಕರ್ಯ ನೀಡಲಾಗುವುದು”, ಮನೆ ಮಳಿಗೆ ಯೋಜನೆ, ರಾಷ್ರ್ಟೀಯ ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ಹಣಕಾಸು ನಿಗಮದ (ಎನ್.ಎಂ.ಡಿ.ಎಫ್.ಸಿ) ಯೋಜನೆಗಳು.

ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಆನ್-ಲೈನ್ ಮೂಲಕ ಕೆಳಕಂಡ ವೆಬ್ ಪೇಜ್‍ನಲ್ಲಿ ಸಲ್ಲಿಸತಕ್ಕದ್ದು.
ಅರಿವು(ವಿದ್ಯಾಭ್ಯಾಸ ಸಾಲ)kmdc.kar.nic.in/arivu2 ಇತರೆ ಎಲ್ಲಾ ಯೋಜನೆಗಳು kmdc.kar.nic.in/loan/login.aspx , ಮೈಕ್ರೋ ಸಾಲ (ವೈಯಕ್ತಿಕ) ಯೋಜನೆ kmdcmicro.karnataka.gov.in, kmdcmicro.karnataka.gov.in

ಇದೇ ಸಂದರ್ಭದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಸೀಮ್ ಅವರು ಮಾತನಾಡಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಬಜೆಟ್ ಅನುದಾನ ಹೆಚ್ಚಿಸುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ. ನಿಗಮದಿಂದ ಸಿಗುವ ಯಾವುದೇ ನೆರವಿಗೆ ಫಲಾನುಭವಿಗಳು ದಳ್ಳಾಲಿಗಳನ್ನು ಸಂಪರ್ಕಿಸಬಾರದು. ಏಜೆಂಟ್ ಹಾವಳಿಯನ್ನು ನಿಲ್ಲಿಸಲಾಗಿದೆ. ಎಲ್ಲಾ ಯೋಜನೆಗಳು ಪಾರದರ್ಶಕವಾಗಿ ಫಲಾನುಭವಿಗಳಿಗೆ ದೊರೆಯಬೇಕು ಎಂಬ ಉದ್ದೇಶದಿಂದ ಹಲವು ಕ್ರಮಗಳನ್ನು ಕೈಗೊಂಡಿದ್ದೇವೆ. ಯಾವುದೇ ಸಮಸ್ಯೆ ಇದ್ದರೂ ನೇರವಾಗಿ ನಿಗಮದ ಕಚೇರಿಗೆ ಬಂದು ಪರಿಹಾರ ಕಂಡುಕೊಳ್ಳಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸೈಯಿದಾ ಅಯಿಷಾ, ಕ.ಅ.ಸೇ.(ಹಿ.ಶ್ರೇ) ವ್ಯವಸ್ಥಾಪಕ ನಿರ್ದೇಶಕರು, ಹಾಗೂ ಪ್ರಮುಖರು ಭಾಗವಹಿಸಿದ್ದರು.

emedialine

View Comments

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

6 hours ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

6 hours ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

6 hours ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

6 hours ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

6 hours ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

6 hours ago