ಕಲಬುರಗಿ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇದೇ 22 ರಿಂದ ಹೈ.ಕ ಭಾಗದ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದು,ಪೂರ್ವಭಾವಿಸಿದ್ಧತೆಗಾಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಅಫಜಲಪುರ ತಾಲೂಕಿನ ಹೆರೂರ್ ( ಬಿ) ಗ್ರಾಮದಲ್ಲಿ ಮುಖ್ಯಮಂತ್ರಿ ಗ್ರಾಮ ವಾಸ್ತವ್ಯ ಮಾಡುತ್ತಿರುವ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಗ್ರಾಮದಲ್ಲಿ ಸ್ಥಳ ಪರಿಶೀಲನೆ ಮಾಡಿದರು.
ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯದ ಹಿನ್ನೆಲೆ ಯಲ್ಲಿ ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮ, ಭದ್ರತೆ ಇತ್ಯಾದಿ ಕುರಿತು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಎಂ. ವೈ. ಪಾಟೀಲ್, ಎಂ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರು, ಜಿಲ್ಲಾಧಿಕಾರಿಗಳಾದ ವೆಂಕಟೇಶ್ ಕುಮಾರ, ಜಿಲ್ಲಾ ಪೊಲೀಸ್ ವರಿ಼ಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಟಿನ್ ಮಾರ್ಬನ್ಯಾಂಗ್, ಸಮಾಜಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಸತೀಶ್ ಸೇರಿದಂತೆ ಮತ್ತಿತರಿದ್ದರು.