ಕಲಬುರಗಿ: ರಂಗಭೂಮಿಯ ಹಿನ್ನೆಲೆಯುಳ್ಳವರು ನಟನಾ ಕ್ಷೇತ್ರದಲ್ಲಿ ಸಾಧನೆ ಮಾಡಬಹುದು. ಕಲ್ಯಾಣ ಕರ್ನಾಟದಲ್ಲಿ ರಂಗ ಚಟುವಟಿಕೆಗಳ ಮೂಲಕ ನಮ್ಮ ಭಾಗದ ಸಾಂಸ್ಕೃತಿಕ ಕ್ಷೇತ್ರವನ್ನು ಶ್ರೀಮಂತಿಕೆಗೊಳಿಸಲು ಸಾಧ್ಯವಿದೆ ಎಂದು ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಯಾಘನ್ ಧಾರವಾಡಕರ ಅಭಿಪ್ರಾಯಪಟ್ಟರು.
ನಗರದ ಹೊರ ವಲಯದ ರಂಗಾಯಣ ಸಭಾಂಗಣದಲ್ಲಿ ಗುರುವಾರ ನಡೆದ ರಂಗಾಯಣ ಕಲಬುರಗಿ ನೂತನ ತಂಡದ ‘ಸಿರಿಪುರಂದರ’ ನಾಟಕ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.
ಸುಮಾರು ಏಳೆಂಟು ತಿಂಗಳಲ್ಲಿಯೇ ನಮ್ಮ ಭಾಗದ ಕಲಾವಿದರನ್ನು ಆಯ್ಕೆ ಮಾಡಿ ಅವರಿಂದಲೇ ನಾಟಕ ಪ್ರದರ್ಶನ ಮಾಡುತ್ತಿರುವುದು ಉತ್ತಮ ಬೆಳವಣಿಗೆ ಎಂದು ಅವರು ತಿಳಿಸಿದರು.
ರಂಗಾಯಣ ನಿರ್ದೇಶಕ ಪ್ರಭಾಕರ ಜೋಶಿ ಪ್ರಾಸ್ತಾವಿಕ ಮಾತನಾಡಿದರು.ನಾಟಕದ ನಿರ್ದೇಶಕ ಮಹಾದೇವ ಹಡಪದ ಇದ್ದರು.ಆಡಳಿತಾಧಿಕಾರಿ ಜಗದೀಶ್ವರಿ ಶಿವಕೇರಿ ನಿರೂಪಿಸಿ ಸ್ವಾಗತಿಸಿದರು.
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…