ಕಲಬುರಗಿ: ಮಹಾನಗರ ಪಾಲಿಕೆಯು ಕೊಪ್ಪಳ ಜಿಲ್ಲೆಯ ಗಂಗಾವತಿಯಿಂದ ಹಂದಿ ಹಿಡಿಯುವ ತಂಡವನ್ನು ಕರೆಯಿಸಿ ಕಲಬುರಗಿ ನಗರ ವಿವಿಧ ಬಡಾವಣೆಗಳಲ್ಲಿ ಗುರುವಾರ ಕಾರ್ಯಾಚರಣೆ ನಡೆಸಿ ಸುಮಾರು 200ಕ್ಕೂ ಹೆಚ್ಚು ಹಂದಿಗಳನ್ನು ಹಿಡಿದು ಬೇರೆ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ ಅವರು ತಿಳಿಸಿದ್ದಾರೆ.
ಕಲಬುರಗಿ ನಗರದ ಗಣೇಶ ನಗರ, ಸ್ವ್ವಸ್ತಿಕ್ ನಗರ, ಓಕಳಿ ಕ್ಯಾಂಪ್, ಜಿ.ಡಿ.ಎ. ಲೇಔಟ್, ವಿರೇಂದ್ರ ಪಾಟೀಲ್ ಬಡಾವಣೆ ಹಾಗೂ ಇದರ ಸುತ್ತ ಮುತ್ತಲಿನ ಪ್ರದೇಶದಲ್ಲಿ ಬೀದಿ ಹಂದಿಗಳನ್ನು ಹಿಡಿದು ಸ್ಥಳಾಂತರಿಸಲಾಗಿದೆ. ಮುಂದಿನ ದಿನಗಳಲ್ಲಿಯೂ ಈ ತರಹದ ಕಾರ್ಯಕ್ರಮವನ್ನು ರೂಪಿಸಿ ನಗರದಿಂದ ಹಂದಿಗಳ ಹಾವಳಿಯನ್ನು ನಿಯಂತ್ರಸಲು ಕ್ರಮವನ್ನು ತೆಗೆದುಕೊಳ್ಳಲಾಗುವುದು.
ಕಲಬುರಗಿ ಮಹಾನಗರ ಪಾಲಿಕೆಯ ಹಿರಿಯ ಪಶುವೈದ್ಯಾಧಿಕಾರಿ ಹಾಗೂ ಹಿರಿಯ ಪಶು ವೈದ್ಯಕೀಯ ಪರೀಕ್ಷಕರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…