ಸುರಪುರ: ತಾಲೂಕಿನ ಕಾರ್ಮಿಕ ಇಲಾಖೆಗೆ ನೂತನವಾಗಿ ಆಗಮಿಸಿದ ಕಾರ್ಮಿಕ ನಿರೀಕ್ಷಕ ಸಬೀರಾ ಬೇಗಂ ಅವರಿಗೆ ಎಐಟಿಯುಸಿ ಹಾಗು ಕಟ್ಟಡ ಕಾರ್ಮಿಕರ ಸಂಘದಿಂದ ಸನ್ಮಾನಿಸಿ ಸ್ವಾಗತ ಕೋರಲಾಯಿತು.
ಈ ಸಂದರ್ಭದಲ್ಲಿ ಎಐಟಿಯುಸಿ ಜಿಲ್ಲಾ ಉಪಾಧ್ಯಕ್ಷ ದೇವಿಂದ್ರಪ್ಪ ಪತ್ತಾರ ಮಾತನಾಡಿ,ತಾವು ನೂತನ ಕಾರ್ಮಿಕ ನಿರೀಕ್ಷಕರಾಗಿ ಆಗಮಸಿರುವುದು ಸಂತೋಷದ ಸಂಗತಿಯಾಗಿದೆ.ತಾಲೂಕಿನಲ್ಲಿಯ ಕಾರ್ಮಿಕರ ಅನೇಕ ಸಮಸ್ಯೆಗಳನ್ನು ನಿವಾರಿಸಬೇಕು ಮತ್ತು ನಕಲಿ ಕಾರ್ಡುದಾರರ ಹಾವಳಿ ಹೆಚ್ಚಾಗುತ್ತಿದ್ದು ಕಡಿವಾಣ ಹಾಕುವಂತೆ ಮನವಿ ಮಾಡಿದರು.
ಸನ್ಮಾನ ಸ್ವೀಕರಿಸಿದ ಕಾರ್ಮಿಕ ನಿರೀಕ್ಷಕರಾದ ಸಬೀರಾ ಬೇಗಂ ಅವರು ಮಾತನಾಡಿ,ತಾವೆಲ್ಲರು ಬೇಡಿಕೆ ಸಲ್ಲಿಸಿದಂತೆ ತಾಲೂಕಿನ ಕಾರ್ಮಿಕರ ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುವ ಜೊತೆಗೆ ತಮ್ಮೆಲ್ಲರ ಸಹಕಾರ ದಿಂದ ಕಾರ್ಮಿಕ ಇಲಾಖೆಗಳ ಅಭಿವೃಧ್ಧಿಗೆ ಪ್ರಯತ್ನಿಸುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ಜಿಲ್ಲಾ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಣ ಪೂಜಾರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರ ಸಂಘದ ಗೌರವಾಧ್ಯಕ್ಷ ತಿಮ್ಮಣ್ಣ ದೊರೆ ಅಧ್ಯಕ್ಷ ದೇವಪ್ಪ ನಗರಗುಂಡ ಪರಶುರಾಮ್ ಹುಲಕಲ್ ತಿಮ್ಮಣ್ಣ ತಳವಾರ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…