ಬಿಸಿ ಬಿಸಿ ಸುದ್ದಿ

ಸನ್ಮಾನಗಳು ಸಮಾಜದಲ್ಲಿ ವ್ಯಕ್ತಿಗತವಾಗಿ ಹೆಚ್ಚಿನ ಜವಾಬ್ದಾರಿಯನ್ನು ಹೆಚ್ಚಿಸುತ್ತದೆ : ಸಿದ್ದುಗೌಡ

ಶಹಾಬಾದ:ಸನ್ಮಾನಗಳು ಸಮಾಜದಲ್ಲಿ ವ್ಯಕ್ತಿಗತವಾಗಿ ಹೆಚ್ಚಿನ ಜವಾಬ್ದಾರಿಯನ್ನು ಹೆಚ್ಚಿಸುತ್ತದೆ ಎಂದು ಚಿತ್ತಾಪೂರ ಎಪಿಎಮಸಿ ಅಧ್ಯಕ್ಷ ಸಿದ್ದುಗೌಡ ಅಫಜಲಪೂರಕರ್ ಹೇಳಿದರು.

ಅವರು ನಗರದ ಕನ್ನಡ ಭವನದಲ್ಲಿ ರೈತ ಸಂಘದಿಂದ ಆಯೋಜಿಸಲಾದ ನೂತನ ಎಪಿಎಮಸಿ ಅಧ್ಯಕ್ಷರಿಗೆ ಹಾಗೂ ಪತ್ರಕರ್ತ ಸಂಘದ ಪದಾಧಿಕಾರಿಗಳಿಗೆ ಆಯೋಜಿಸಲಾದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಾಲೂಕಿನ ಎಪಿಎಮಸಿಯನ್ನು ಅಭಿವೃದ್ಧಿ ಮಾಡುವುದೇ ನನ್ನ ಕನಸು.ಅಲ್ಲದೇ ರೈತ ಭವನ, ರೈತರಿಗಾಗಿ ಅಲ್ಲಿ ಉಳಿದುಕೊಳ್ಳಲು ಬೇಕಾಗುವ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವುದು ನನ್ನ ಕರ್ತವ್ಯ. ಈ ನಿಟ್ಟಿನಲ್ಲಿ ನಾನು ಅಭಿವೃದ್ಧಿಗಾಗಿ ಮೊದಲ ಹೆಜ್ಜೆ ಇಡುತ್ತಿದ್ದೆನೆ.ಅಲ್ಲದೇ ರೈತರ ಹಿತ ಕಾಪಾಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೆನೆ.ಅದಕ್ಕೆ ತಮ್ಮೆಲ್ಲರ ಸಹಕಾರ ಹಾಗೂ ಮಾರ್ಗದರ್ಶನವಿರಬೇಕು ಎಂದು ಹೇಳಿದರು.

ರೈತ ಸಂಘದ ಗೌರವಾಧ್ಯಕ್ಷ ಮರಲಿಂಗ ಕಮರಡಗಿ ಮಾತನಾಡಿ, ರೈತ ಈ ದೇಶದ ಬೆನ್ನೆಲುಬು ಎಂದು ಭಾಷಣಕ್ಕೆ ಮಾತ್ರ ಸೀಮಿತ ಮಾಡಿದ್ದಾರೆ ಹೊರತು, ರೈತರ ಪರವಾಗಿ ಯಾವುದೇ ಅಭಿವೃದ್ಧಿ ಕೆಲಸಗಳು ಮಾಡಿಲ್ಲ. ಆದರೆ ಇಂದು ನಿಮಗೆ ಸಿಕ್ಕ ಅಧಿಕಾರವನ್ನು ಬಳಸಿಕೊಂಡು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಪಿಎಮಸಿ ಯಲ್ಲಿ ನಿರ್ಮಾಣಗೊಂಡ ರೈತ ಭವನದಲ್ಲಿ ಮೂಲಸೌಲಭ್ಯಗಳನ್ನು ಒದಗಿಸಿ, ಆದಷ್ಟು ಬೇಗನೆ ಉದ್ಘಾಟಿಸಬೇಕೆಂದು ತಿಳಿಸಿದರು. ಇಂದು ಅಧಿಕಾರ ಸಿಗುತ್ತದೆ, ಅಲ್ಲದೇ ಬದಲಾಗುತ್ತಲೇ ಇರುತ್ತವೆ.ಅಧಿಕಾರ ಇರುವ ಸಮಯದಲ್ಲಿ ಮಾಡುವ ಉತ್ತಮ ಕಾರ್ಯಗಳು ಅವರ ಸೇವೆಯನ್ನು ಜೀವಂತವಾಗಿ ಇರಿಸುತ್ತವೆ.ಅದಕ್ಕಾಗಿ ಉತ್ತಮ ಕಾರ್ಯಗಳಿಗೆ ನಮ್ಮೆಲ್ಲರ ಸಹಕಾರವಿರುತ್ತದೆ ಎಂದು ಹೇಳಿದರು.

ಎಪಿಎಮಸಿ ಸದಸ್ಯ ವಿಶ್ವರಾಧ್ಯ ಬೀರಾಳ, ಪತ್ರಕರ್ತ ಸಂಘದ ಸಹಕಾರ್ಯದರ್ಶಿ ರಘುವೀರಸಿಂಗ ಠಾಕೂರ, ಉದ್ದಿಮೆದಾರ ಡಿ.ಸಿ.ಹೊಸಮನಿ, ಕಸಾಪ ಗ್ರಾಮೀಣ ಅಧ್ಯಕ್ಷ ಶರಣಗೌಡ ಪಾಟೀಲ, ರೈತ ಸಂಘದ ಮಲ್ಲಿಕಾರ್ಜುನ ಪೂಜಾರಿ ವೇದಿಕೆಯ ಮೇಲಿದ್ದರು.
ಸಂಗೋಳಿ ರಾಯಣ್ಣ ಜಿಲ್ಲಾಧ್ಯಕ್ಷ ಬಸವರಾಜ ಮದ್ರಕಿ, ಕುರುಬ ಸಮಾಜದ ತಾಲೂಕಾಧ್ಯಕ್ಷ ಮಲ್ಕಣ್ಣ ಮುದ್ದಾ, ಶಂಕರ ಕೋಟನೂರ್, ಶಿವಾನಂದ ಪೂಜಾರಿ,ರಾಜು ಕುಂಬಾರ, ರಮೇಶ ಜೋಗದನಕರ್, ಶಾಂತಪ್ಪ ಹಡಪದ,ಗುಂಡಪ್ಪ ಕುಂಬಾರ, ಸಂತೋಷ ದೊಡ್ಡಮನಿ ಇತರರು ಇದ್ದರು.

emedia line

Recent Posts

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

45 mins ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

4 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

5 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

18 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

18 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

20 hours ago