ಬಿಸಿ ಬಿಸಿ ಸುದ್ದಿ

ಆಮ್ ಆದ್ಮಿ ಪಕ್ಷದಿಂದ “ಶಾಕ್ ಬೇಡ” ಆ್ಯಪ್ ಬಿಡುಗಡೆ

ಬೆಂಗಳೂರು: ಸಂಕಷ್ಟದ ಸಮಯದಲ್ಲೂ ಜನರ ಕೈ ಹಿಡಿಯದ ರಾಜ್ಯ ಸರ್ಕಾರ ಜನ ಸಾಮಾನ್ಯರ ಮೇಲೆ ಹೊರೆ ಹಾಕುತ್ತಲೇ ಇದೆ. ವಿದ್ಯುತ್ ದರ ಏರಿಕೆ ಮಾಡಿ ಹೃದಯಹೀನರಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವರ್ತಿಸುತ್ತಿದ್ದಾರೆ. ಈ ವಿದ್ಯುತ್ ದರ ಏರಿಕೆ ವಿರುದ್ದ ಆಮ್ ಆದ್ಮಿ ಪಕ್ಷ ಶಾಕ್ ಬೇಡಾ- ಕಡಿಮೆ ಮಾಡಿ ಇಲ್ಲದಿದ್ದರೆ ಖುರ್ಚಿ ಖಾಲಿ ಮಾಡಿ” ಎನ್ನುವ ಘೋಷ ವಾಕ್ಯದೊಂದಿಗೆ ಬೃಹತ್ ಹೋರಾಟ ನಡೆಸಲಿದೆ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಎಚ್ಚರಿಕೆ ನೀಡಿದರು.

ಖಾಸಗಿ ಹೋಟೆಲ್ನಲ್ಲಿ ಶುಕ್ರವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಶಾಕ್ ಬೇಡ ಆ್ಯಪ್ ಬಿಡುಗಡೆ ಮಾಡಿ ಮಾತನಾಡಿದರು.

ಎಎಪಿ “ಶಾಕ್ ಬೇಡ” ಎನ್ನುವ ನೂತನ ಅಪ್ಲಿಕೇಶನ್ ಅಭಿವೃದ್ಧಿ ಪಡಿಸಿದ್ದು, ಇದರಲ್ಲಿ ಬೆಂಗಳೂರಿನ ಜನರು ತಮ್ಮ ಪ್ರಸ್ತುತ ವಿದ್ಯುತ್ ಬಳಕೆಯನ್ನು ನಮೂದಿಸುವ ಮೂಲಕ, ಅವರು 2020 ರ ನವೆಂಬರ್ನಿಂದ ಎಷ್ಟು ವಿದ್ಯುತ್ ಬಿಲ್ ಪಾವತಿಸುತ್ತಾರೆ ಮತ್ತು ಅಷ್ಟೇ ಪ್ರಮಾಣದ ವಿದ್ಯುತ್ ಉಪಯೋಗಿಸುವ ದೆಹಲಿಯ ನಿವಾಸಿಗಳು ಎಷ್ಟು ಬಿಲ್ ಪಾವತಿಸುತ್ತಾರೆ ಎನ್ನುವುದನ್ನು ತುಲನೆ ಮಾಡಿ ನೋಡಬಹುದು ಎಂದು ಹೇಳಿದರು.

ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ದೀಪಾವಳಿಯ ನಂತರ ಬೆಂಗಳೂರಿನ ಮನೆ ಮನೆಗೆ ತೆರಳಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಮತ್ತು ಹಿಂದಿನ ಸರ್ಕಾರಗಳ ದುಷ್ಕೃತ್ಯಗಳು ಮತ್ತು ಭ್ರಷ್ಟಾಚಾರಗಳ ಬಗ್ಗೆ ಜನರಿಗೆ ತಿಳಿಸಲಿದ್ದಾರೆ. ನಮ್ಮ ಕರ್ನಾಟಕವನ್ನು ಆಳಿದ ಎಲ್ಲಾ 3 ಪಕ್ಷಗಳನ್ನು ಇಂದಿನ ಈ ಪರಿಸ್ಥಿತಿಗೆ ಕಾರಣ. ಈ ಕೂಡಲೇ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ತನ್ನ ಅವೈಜ್ಞಾನಿಕ ದರ ಹೆಚ್ಚಳದ ಆದೇಶವನ್ನು ಈ ಕೂಡಲೇ ಹಿಂಪಡೆಯುವಂತೆ ಒತ್ತಾಯಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ, ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ, ಉಪಾಧ್ಯಕ್ಷ ಸುರೇಶ್ ರಾಥೋಡ್, ಮುಖ್ಯ ವಕ್ತಾರ ಶರತ್ ಖಾದ್ರಿ, ಜ್ಯೋತಿಷ್, ಮುಖಂಡರಾದ ಪ್ರಕಾಶ್ ನೆಡಂಗಡಿ, ಶಾಷವಲಿ ಇದ್ದರು.

ಕೋವಿಡ್ 19 ಸಾಂಕ್ರಾಮಿಕ ರೋಗ ಇಡೀ ಪ್ರಪಂಚವನ್ನೆ ಹಿಂಡಿ ಹಿಪ್ಪೆ ಮಾಡಿದೆ. ಇತರ ದೇಶಗಳಲ್ಲಿನ ಸರ್ಕಾರಗಳು ಲಾಕ್ಡೌನ್ನಿಂದ ಉಂಟಾಗಿರುವ ಹಿಂದೆಂದೂ ಕಾಣದ ನಷ್ಟವನ್ನು ನಿವಾರಿಸಲು ತಮ್ಮ ಜನತೆಗೆ ಹಣಕಾಸಿನ ನೆರವು ನೀಡಿ ಆರ್ಥಿಕ ಸಂಕಷ್ಟದಿಂದ ರಕ್ಷಿಸಿವೆ. ಲಾಕ್ ಡೌನ್ ಸಮಯದಲ್ಲಿ ದೆಹಲಿ ಸರ್ಕಾರವು ಉಚಿತ ಪಡಿತರ, ಆಹಾರ ಧಾನ್ಯ, ಆರ್ಥಿಕ ನೆರವು ವೈದ್ಯಕೀಯ ಸೇವೆಗಳನ್ನು ನೀಡಿ ದೆಹಲಿಯ ಬಡವರನ್ನು ಉಳಿಸಿತ್ತು. ಆದರೆ ಇಲ್ಲಿನ ಸರ್ಕಾರ ಬರೆ ಮೇಲೆ ಬರೆ ಹಾಕುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕದ ಜನತೆಯನ್ನು ಹುರಿದು ಮುಕ್ಕಿದೆ ಎಂದೇ ಹೇಳಬಹುದು. ಜನರ ಕಷ್ಟವನ್ನು ಪರಿಹರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು ಮಾತ್ರವಲ್ಲದೆ ಜನರ ಮೇಲೆ ನಿರಂತರವಾಗಿ ಗದಾ ಪ್ರಹಾರ ಮಾಡುತ್ತಲೇ ಇದೆ. ನಮ್ಮ ದೇಶದ ಜನರ ಆದಾಯದಲ್ಲಿ ಸರಾಸರಿ 50% ಕಡಿಮೆ ಆಗಿದೆ ಎಂದು ಅಂದಾಜಿಸಲಾಗಿದೆ. ಇಂತಹ ಸಮಯದಲ್ಲಿ ಯಡಿಯೂರಪ್ಪ ಸರ್ಕಾರ ಅತ್ಯಗತ್ಯವಾದ ವಿದ್ಯುತ್ ದರವನ್ನು ಶೇ 6ರಷ್ಟು ಹೆಚ್ಚಳ ಮಾಡಿ ಹೃದಯಹೀನವಾಗಿ ವರ್ತಿಸಿದೆ.

ಲಾಕ್ಡೌನ್ ಕಾರಣದಿಂದಾಗಿ ಆದಾಯವಿಲ್ಲದೆ, ಉದ್ಯೋಗವಿಲ್ಲದೆ ಬದುಕುತ್ತಿರುವ ಜನರಿಗೆ ಇದು ವಾರ್ಷಿಕ ಸಾವಿರಾರು ರೂಪಾಯಿಗಳ ಹೊರೆ ಹಾಕಿದೆ. ಅಧಿಕಾರಕ್ಕೆ ಬಂದರೆ ಸಾಕು ಹಣ ದೋಚುವುದನ್ನೆ ಕೆಲಸ ಮಾಡಿಕೊಂಡಿರುವ ಬಿಜೆಪಿ ಭ್ರಷ್ಟಾಚಾರದಲ್ಲಿಯೇ ದಿನದೂಡುತ್ತಿದೆ. ನಮ್ಮ ರಾಜ್ಯ ಸರ್ಕಾರ ವಿದ್ಯುತ್ ವಿತರಣೆ ಮಾಡುವಾಗ ಆಗುವ ನಷ್ಟ ಹಾಗೂ ವಿದ್ಯುತ್ ಕಳ್ಳತನವನ್ನು ತಡೆಯಲು ಯಾವುದೇ ಕ್ರಮ ತೆಗೆದುಕೊಳ್ಳದೇ ಆ ನಷ್ಟವನ್ನು ಜನರ ಮೇಲೆ ಹಾಕಿ ತನ್ನ ನರಿ ಬುದ್ದಿ ತೋರಿಸುತ್ತಿದೆ.

ಎಎಪಿ ಸರ್ಕಾರ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಾಗಿನಿಂದ, ದೆಹಲಿ ಜನತೆ 200 ಯೂನಿಟ್ ಉಚಿತ ವಿದ್ಯುತ್ ಪಡೆಯುತ್ತಿದ್ದಾರೆ ಮತ್ತು 200 ಯುನಿಟ್ ಮೇಲ್ಪಟ್ಟ ಬಳಕೆಗೆ ಕಡಿಮೆ ದರವನ್ನು ಪಾವತಿಸುತ್ತಿದ್ದಾರೆ. ಆಶ್ಚರ್ಯದ ಸಂಗತಿ ಎಂದರೆ ದೆಹಲಿಯ ವಿದ್ಯುತ್ ಬೆಲೆಯಲ್ಲಿ ಇದುವರೆಗೂ ಒಂದೇ ಒಂದು ರೂಪಾಯಿ ಹೆಚ್ಚಳ ಮಾಡಿಲ್ಲ. ಇನ್ನೊಂದು ಕುತುಹಲಕಾರಿ ಸಂಗತಿ ಎಂದರೆ ದೆಹಲಿ ರಾಜ್ಯ ವಿದ್ಯುತ್ ಉತ್ಪಾದಿಸುವುದಿಲ್ಲ, ಅಲ್ಲಿನ ವಿದ್ಯುತ್ ವಿತರಣೆಯನ್ನು ಸಂಪೂರ್ಣವಾಗಿ ಖಾಸಗಿ ಕಂಪನಿಗಳ ಕೈಯಲ್ಲಿದೆ. ಕರ್ನಾಟಕದಲ್ಲಿ ವಿದ್ಯುತ್ ಉತ್ಪಾದನೆ, ಪ್ರಸರಣ ಮತ್ತು ವಿತರಣೆ ಸಂಪೂರ್ಣವಾಗಿ ಸರ್ಕಾರದ ಬಳಿ ಇದೆ. ಆದರೂ ಕರ್ನಾಟಕದಲ್ಲಿ ವಿದ್ಯುತ್ ಬೆಲೆ ದೆಹಲಿಗಿಂತ 10 ರಿಂದ 15% ಕಡಿಮೆ ಇರಬೇಕಿತ್ತು ಆದರೆ ಇದೆಯೇ ಎಂದು ಪ್ರಶ್ನಿಸಿದರು.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

2 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

2 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

2 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

2 hours ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

2 hours ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

3 hours ago