ಶಹಾಪುರ: ದೇಶದ ಪ್ರತಿಯೊಬ್ಬ ರೈತರಿಗಾಗುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿ ಹೋರಾಟ ಮಾಡಿ ನ್ಯಾಯ ದೊರಕಿಸಿಕೊಡುವುದು ಅನಿವಾರ್ಯತೆ ಇದೆ ಆದ್ದರಿಂದ ರೈತ ಸಂಘಟನೆ ಭಲಪಡಿಸುವ ನಿಟ್ಟಿನಲ್ಲಿ ನಾವು ನೀವೆಲ್ಲರೂ ಕೆಲಸ ಮಾಡಬೇಕಾಗಿದೆ ಎಂದು ರೈತ ಮುಖಂಡರಾದ ಮಹೇಶಗೌಡ ಸುಬೇದಾರ ಹೇಳಿದರು.
ಶಹಾಪುರ ತಾಲೂಕಿನ ಗುಂಡಾಪುರ ಗ್ರಾಮದಲ್ಲಿ ರೈತ ಸಂಘದ ಗ್ರಾಮ ಘಟಕ ರಚಿಸಿ ಮಾತನಾಡಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಕಾರ್ಯಕರ್ತರು ಸಂಘದಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಹೇಳಿದರು ರೈತ ಈ ದೇಶದ ಬೆನ್ನೆಲುಬು ಅಂತ ಘೋಷ ವಾಕ್ಯವಾಗಿ ಹೇಳಿದರೆ ಸಾಲದು ಅದರ ಪೂರಕವಾಗಿ ಅಧಿಕಾರಿಗಳು ಹಾಗೂ ಸರ್ಕಾರ ಪಾರದರ್ಶಕತೆಯಿಂದ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.
ಈಗಾಗಲೇ ಕೆಲವೊಂದು ತಾಲ್ಲೂಕುಗಳಲ್ಲಿ ರಸಗೊಬ್ಬರ ಹಾಗೂ ಬೀಜ ವಿತರಣೆಯಲ್ಲಿ ಸಂಪೂರ್ಣ ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆ ಅಲ್ಲದೆ ತಮಗೆ ಬೇಕಾದವರಿಗೆ ದಾಸ್ತಾನು ಪೂರೈಕೆ ಮಾಡುವುದಲ್ಲದೆ ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಇದು ತರವಲ್ಲ ಇದು ಕೂಡಲೇ ಸರಿಪಡಿಸಬೇಕು ಇಲ್ಲದಿದ್ದರೆ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಈ ಮೂಲಕ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ರೈತ ಸಂಘದ ಸದಸ್ಯರಾದ ಕರಿಯಪ್ಪ,ಮಲ್ಲಿಕಾರ್ಜುನ್, ದೊಡ್ಡಪ್ಪ, ಶರಣಬಸವ, ಶಿವರೆಡ್ಡಿ, ಹುಸೇನ್ ಸಾಬ್, ಕಲ್ಲಪ್ಪ ಹಾಗೂ ಇತರರು ಉಪಸ್ಥಿತರಿದ್ದರು
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…