ಬಿಸಿ ಬಿಸಿ ಸುದ್ದಿ

ಬಸವೇಶ್ವರರ ಮೂರ್ತಿ ವಿರೂಪಗೊಳಿಸಿದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಬಿಜಗುಪ್ಪಿಯಲ್ಲಿ ವಿಶ್ವ ಗುರು ಬಸವಣ್ಣನವರ ಪ್ರತಿಮೆ ಭಗ್ನಗೊಳಿಸಿದವರಿಗೆ ಮಟ್ಟ ಹಾಕಬೇಕು ಎಂದು ಒತ್ತಾಯಿಸಿ ಪಾಳಾದ ಬಸವ ಸಮಿತಿಯ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನಾ ಪ್ರದರ್ಶನ ಮಾಡಿದರು.

ಪ್ರತಿಭಟನೆಕಾರರು ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ, ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸಿದ ವಿಶ್ವಗುರು ಬಸವೇಶ್ವರರ ಮೂರ್ತಿ ಭಗ್ನಗೊಳಿಸಿ ಅವಮಾನ ಮಾಡಿ, ಸಮಾಜದ ಸಾಮರಸ್ಯವನ್ನು ಕದಡಿದ ದುಷ್ಟ ಶಕ್ತಿಗಳ ಹುನ್ನಾರ ಖಂಡನೀಯ ಎಂದು ಆಕ್ಷೇಪಿಸಿದರು.

ಇಂತಹ ಸಮಾಜಘಾತುಕರನ್ನು ಮಟ್ಟ ಹಾಕಬೇಕು ಹಾಗೂ ಪ್ರತಿಮೆಯನ್ನು ಪುನರ್ ಸ್ಥಾಪಿಸುವಂತೆ ಒತ್ತಾಯಿಸಿದ ಅವರು, ಕುಕೃತ್ಯ ಎಸಗಿದವರನ್ನು ಪತ್ತೆ ಹಚ್ಚಿ ಅವರ ಮೇಲೆ ಕಠಿಣ ಕಾನೂನು ಶಿಕ್ಷೆಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಮಿತಿಯ ಅಧ್ಯಕ್ಷ ಶರಣಗೌಡ ಎಸ್. ಪಾಟೀಲ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರಭು ರಾವೂರ್, ಜಿತೇಂದ್ರ ಪಾಟೀಲ್, ವಿನೋದ್ ವಿಶ್ವನಾಥ್ ಪಾಟೀಲ್ ಮುಂತಾದವರು ಪಾಲ್ಗೊಂಡಿದ್ದರು.

emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

3 hours ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

3 hours ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

3 hours ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

3 hours ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

3 hours ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

3 hours ago