ಬಿಸಿ ಬಿಸಿ ಸುದ್ದಿ

ಗೃಹ ರಕ್ಷಕ ದಳದ ಸಿಬ್ಬಂದಿಗಳಿಗೆ ಫೇಸ್ ಶೀಲ್ಡ್ ವಿತರಣೆ

ಕಲಬುರಗಿ: ಪೂಜ್ಯ ಶ್ರೀ ಶರಣಬಸವಪ್ಪ ಅಪ್ಪಾಜೀ ಅವರು ಒಂದು ವಿಶ್ವವಿದ್ಯಾಲಯ ಮಾಡುವ ಕೆಲಸ ಇವರಬ್ಬರೇ ಮಾಡಿರುವುದು ನಿಜಕ್ಕೂ ಅದ್ಭುತ. ತಮ್ಮ ಸಂಸ್ಥೆಯಡಿಯಲ್ಲಿ ಸ್ವಂತದೊಂದು ವಿಶ್ವವಿದ್ಯಾಲಯವೇ ಸ್ಥಾಪಿಸಿ ಈ ಭಾಗದ ಸಾವಿರಾರು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿನ ಮೇಎ ಉತ್ತಮ ಬೆಳಕು ನೀಡುತ್ತಿದ್ದಾರೆ ಎಂದು ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಅಭಿಪ್ರಾಯಪಟ್ಟರು.

ಶ್ರೀ ಶರಣಬಸವೇಶ್ವರ ಮಹಾ ಸಂಸ್ಥಾನದ ಶ್ರೀ ಡಾ.ಶರಣಬಸವಪ್ಪ ಅಪ್ಪಾಜೀ ಯವರ ೮೬ ನೇ ಜನ್ಮದಿನದಂಗವಾಗಿ ಇಲ್ಲಿನ ವಿಶ್ವಜೋತಿ ಪ್ರತಿಷ್ಠಾನದ ವತಿಯಿಂದ ನಗರದ ಸರದಾರ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ಶನಿವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಸಮಾಜ ಸೇವೆಯಲ್ಲಿ ನಿರತರಾದ ಗೃಹ ರಕ್ಷಕ ದಳದ ೮೬ ಜನರಿಗೆ ಕೊರೊನಾದಿಂದ ರಕ್ಷಿಸಿಕೊಳ್ಳಲು ಫೇಸ್ ಶೀಲ್ಡ್‌ಗಳನ್ನು ವಿತರಿಸಿ ಮಾತನಾಡಿದ ಅವರು, ಅತ್ಯಾಧುನಿಕ ತಂತ್ರಜ್ಞಾನ ಬಳಕೆಗೆ ಒತ್ತ ನೀಡಿ, ಇಂದಿನ ವಿದ್ಯಾರ್ಥಿಗಳು ಸ್ವತಂತ್ರವಾಗಿ ಚಿಂತನೆ ಮಾಡುವಂತೆ ಪ್ರೇರಣೆ ನೀಡುತ್ತಿರುವುದು ಇಂದಿನ ಸಮಾಜಕ್ಕೆ ಮಾದರಿಯಾದುದು ಎಂದ ಅವರು, ಈ ನಿಟ್ಟಿನಲ್ಲಿ ತಮ್ಮ ಆರೋಗ್ಯವನ್ನೂ ಲೆಕ್ಕಿಸದೇ ಸೇವೆ ಸಲ್ಲಿಸುತ್ತಿರುವ ಗೃಹ ರಕ್ಷಕ ದಳದ ಸಿಬ್ಬಂದಿಗಳಿಗೆ ಫೇಸ್ ಶೀಲ್ಡ್‌ಗಳನ್ನು ನೀಡಿ ಪೂಜ್ಯ ಅಪ್ಪಾಜೀ ಯವರ ಜನ್ಮ ದಿನಾಚರಣೆಗೆ ವಿಶೇಷ ಅರ್ಥ ಕಲ್ಪಿಸಿದ ಸಂಘಟ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಕಾರ್ಯ ಎಲ್ಲರೂ ಮೆಚ್ಚುವಂತಹದ್ದು ಎಂದರು.

ಕಾರ್ಯಕ್ರಮದ ಸಂಘಟಕರೂ ಆದ ಶರಣ ಸಾಹಿತಿ ವಿಜಯಕುಮಾರ ತೇಗಲತಿಪ್ಪಿ ಮಾತನಾಡಿ, ಶ್ರೀ ಶರಣಬಸವೇಶ್ವರ ಸಂಸ್ಥಾನವು ಸೇವಾ ಮನೋಭಾವದಿಂದ ಈ ಭಾಗದ ಜನರಿಗೆ ಆರಾಧ್ಯ ಧಾರ್ಮಿಕ ಕೇಂದ್ರವಾಗಿದೆ. ಅನ್ನ ದಾಸೋಹದ ಜತೆಗೆ ಅಕ್ಷರ ದಾಸೋಹವನ್ನು ನೀಡುತ್ತಿರುವ ಸಂಸ್ಥೆಯ ಯಶಸ್ವಿಗೆ ಪೂಜ್ಯ ಅಪ್ಪಾಜೀ ಅವರೇ ಕಾರಣರಾಗುತ್ತಾರೆ.

ಕಲ್ಯಾನ ನಾಡಿನ ಶೈಕ್ಷಣಿಕ ಶಕ್ತಿ ಹಾಗೂ ಮಹಿಳಾ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಿದ ಶಿಕ್ಷಣ ಸಂಸ್ಥೆ ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘವಾಗಿದೆ. ಕಲೆ, ವಿಜ್ಞಾನ, ತಾಂತ್ರಿಕ, ಪತ್ರಿಕೋದ್ಯಮ. ಪ್ರವಾಸೋದ್ಯಮ, ಪ್ರತ್ಯೇಕ ಶರಣಬಸವ ವಿಶ್ವವಿದ್ಯಾಲಯ ಮುಂತಾದ ನೂತನ ಕೋರ್ಸುಗಳನ್ನು ಈ ಭಾಗದ ವಿದ್ಯಾರ್ಥಿಗಳು ಕಲಿಯಲುಅವಕಾಶ ಕಲ್ಪಿಸುತ್ತಿರುವ ಜ್ಞಾನ ಕೇಂದ್ರ ಇದಾಗಿದೆ. ಹಾಗಾಗಿ, ಶ್ರೀ ಡಾ.ಶರಣಬಸವಪ್ಪ ಅಪ್ಪಾಜೀ ಅವರ ಜನ್ಮದಿನಾಚರಣೆ ಸಾರ್ವತ್ರಿಕವಾಗಿ ಆಚರಿಸಬೇಕೆಂದು ಹೇಳಿದ ಅವರು, ಈ ನಿಟ್ಟಿನಲ್ಲಿ ಪ್ರತಿಷ್ಠಾನದ ವತಿಯಿಂದ ಕಳೆದ ಹತ್ತಾರು ವರ್ಷಗಳಿಂದ ಈ ರೀತಿಯಾಗಿ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ ಎಂದರು.

ಯಾವುದೇ ಭದ್ರತೆ ಹಾಗೂ ಸವಲತ್ತು ಇಲ್ಲದೇ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಗೃಹ ರಕ್ಷಕರ ಸೇವೆ ಅನನ್ಯ. ಸಮಾಜದಲ್ಲಿ ಎಷ್ಟು ದಿನ ಬದುಕಿದ್ದೇವೆ ಎನ್ನುವುದರ ಬದಲಿಗೆ ಈ ಸಮಾಜಕ್ಕೆ ನಾನು ಏನು ಕೊಟ್ಟಿದ್ದೇನೆ ಎನ್ನುವುದು ಮುಖ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಯಾವುದೇ ಫಲಾಪೇಕ್ಷೆ ಇಲ್ಲದೆ ದುಡಿಯುವ ಗೃಹ ರಕ್ಷಕರ ಸೇವೆ ದೇವರ ಸೇವೆಯಾಗಿದೆ. – ಶಶೀಲ್ ಜಿ.ನಮೋಶಿ, ನೂತನ ವಿಧಾನ ಪರಿಷತ್ ಸದಸ್ಯರು.

ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ, ಕುಡಾ ಅಧ್ಯಕ್ಷ ದಯಾಘನ್ ಧಾರವಾಡಕರ್, ಮಾಜಿ ಎಂಎಲ್ಸಿ ಅಲ್ಲಮಪ್ರಭು ಪಾಟೀಲ ನೆಲೋಗಿ, ಜಿಪಂ ಮಾಜಿ ಉಪಾಧ್ಯಕ್ಷ ಡಾ.ಸುರೇಶ ಆರ್.ಸಜ್ಜನ್, ಜಿಲ್ಲಾ ವೀರಶೈವ ಸಮಾಜ ಅಧ್ಯಕ್ಷ ಡಾ.ಅರುಣಕುಮಾರ ಎಸ್.ಪಾಟೀಲ, ಉಪಾಧ್ಯಕ್ಷ ಕಲ್ಯಾಣಪ್ಪ ಪಾಟೀಲ ಮಳಖೇಡ, ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಡಾ.ಶರಣಕುಮಾರ ಮೋದಿ, ಉಪಾಧ್ಯಕ್ಷ ಶರಣಬಸಪ್ಪ ಭೂಸನೂರ, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಭವಾನಿಸಿಂಗ್ ಠಾಕೂರ್, ರಾಜ್ಯ ವಿಜ್ಞಾನ ಪರಿಷತ್ ರಾಜ್ಯಾಧ್ಯಕ್ಷ ಗಿರೀಶ ಕಡ್ಲೇವಾಡ್, ಜೇಡಿಎಸ್ ಮುಖಂಡರಾದ ದೇವೇಗೌಡ ತೆಲ್ಲೂರ, ಬಸವರಾಜ ಬಿರಬಿಟ್ಟೆ, ಮನೋಹರ ಪೊದ್ದಾರ, ಯುನೈಟೆಡ್ ಆಸ್ಪತ್ರೆಯ ಡಾ.ವಿಕ್ರಮ್ ಸಿದ್ಧಾರೆಡ್ಡಿ, ಕಾಮರೆಡ್ಡಿ ಆಸ್ಪತ್ರೆಯ ಡಾ.ಎಸ್.ಬಿ.ಕಾಮರೆಡ್ಡಿ, ಪ್ರಮುಖರಾದ ಸಂಗಮನಾಥ ರಬಶೆಟ್ಟಿ, ಶರಣು ಪಪ್ಪಾ, ರಾಜುಗೌಡ ನಾಗನಳ್ಳಿ, ಕುಪೇಂದ್ರ ಬರಗಾಲಿ, ಶರಣರಾಜ್ ಛಪ್ಪರಬಂದಿ, ರವೀಂದ್ರಕುಮಾರ ಭಂಟನಳ್ಳಿ, ಬಿ.ಎಂ.ಪಾಟೀಲ ಕಲ್ಲೂರ, ಜಗದೀಶ ಮರಪಲ್ಳಿ, ಪ್ರಭವ ಪಟ್ಟಣಕರ್, ಶ್ರೀಕಾಂತ ಪಾಟೀಲ ತಿಳಗುಲ, ರವಿ ಶಹಾಪುರಕರ್, ಹಣಮಂತರಾಯ ಅಟ್ಟೂರ, ಕಲ್ಯಾಣಕುಮಾರ ಶೀಲವಂತ, ವಿಶ್ವನಾಥ ತೊಟ್ನಳ್ಳಿ, ಶಿವರಾಜ್ ಅಂಡಗಿ, ಮಲ್ಲಿನಾಥ ಪಾಟೀಲ ಕಾಳಗಿ, ಉದಯಕುಮಾರ ಜೇವರ್ಗಿ, ಡಾ.ಬಾಬುರಾವ ಶೇರಿಕಾರ, ನಾಗೇಂದ್ರಪ್ಪ ಮಾಡ್ಯಾಳೆ, ಸತೀಶ ಸಜ್ಜನ್, ಜಗದೀಶ ಮರಪಳ್ಳಿ, ಪ್ರಭುದೇವ ಯಳವಂತಗಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

emedialine

Recent Posts

ತೊಗರಿ ಬೆಳೆ ಹಾನಿ ಪ್ರದೇಶಕ್ಕೆ‌ ಡಿ.ಸಿ ಭೇಟಿ: ಶೀಘ್ರ ಪರಿಹಾರದ ಭರವಸೆ

ಕಲಬುರಗಿ: ನ.28 ಜಿಲ್ಲೆಯಾದ್ಯಂತ ಮಣ್ಣಿನಲ್ಲಿ ತೇವಾಂಶದ ಕೊರತೆ ಹಾಗೂ ಒಣ ಬೇರು ಕೊಳೆ ರೋಗದಿಂದ ತೊಗರಿ ಒಣಗುತ್ತಿರುವ ಹಿನ್ನೆಲೆಯಲ್ಲಿ ಗುರುವಾರ…

6 hours ago

ಕರ್ಜಗಿ: ಹಜರತ್ ಖ್ವಾಜಾ ಸೈಫನ್ ಉರ್ಸ್

ಕರ್ಜಗಿ (ಕಲಬುರಗಿ): ನ.28 ಅಫಜಲಪುರ ತಾಲ್ಲೂಕಿನ ಸುಕ್ಷೇತ್ರ ಕುಬೇರ ಕರಜಗಿ ಗ್ರಾಮದ ಹಜರತ್ ಖ್ವಾಜಾ ಸೈಫನ್ ಮುಲ್ಕ 891 ಜಾತ್ರೆ…

8 hours ago

ಮಹಿಪಾಲರೆಡ್ಡಿ ನಟನೆಯ `ತಮಟೆ’ ಸಿನಿಮಾ ನಾಳೆ ಬಿಡುಗಡೆ

ಕಲಬುರಗಿ, ನ.೨೮ - ಹಿರಿಯ ಚಿತ್ರನಟ ಮದನ್ ಪಟೇಲ್ ಅವರು ನಾಯಕ ನಟರಾಗಿರುವ ಕಾದಂಬರಿ ಆಧಾರಿತ `ತಮಟೆ’ ಸಿನಿಮಾ ನವೆಂಬರ್…

11 hours ago

ಎಂ.ಎಸ್ ಇರಾಣಿ ವಿದ್ಯಾರ್ಥಿಗೆ ದ್ವೀತಿಯ ಸ್ಥಾನ

ಕಲಬುರಗಿ: ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸರ್ಕಾರಿ ಪದವಿ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಹಾನಗರ ಪಾಲಿಕೆ,ಸಮಾಜ ಕಲ್ಯಾಣ ಇಲಾಖೆ, ಕನ್ನಡ…

1 day ago

ವಿದ್ಯಾರ್ಥಿಗಳಿಗೆ ಸಂವಾದ ಕಾರ್ಯಕ್ರಮ

ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿ ಹಾಗೂ ಸಿ.ಆರ್.ಸಿ ಸ್ನೇಹ ಬಳಗ ಕಲಬುರಗಿ ಮತ್ತು ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ…

1 day ago

ಸ್ಲಂ ಜನಾಂದೋಲನ ಜಿಲ್ಲಾ ಘಟಕದಿಂದ ಹಕ್ಕು ಪತ್ರ ನೊಂದಣಿ ಖಾತ ಪ್ರತಿ ವಿತರಣೆ

ಕಲಬುರಗಿ: ಸುವರ್ಣ ಭವನ (ಕನ್ನಡ ಭವನ)ದಲ್ಲಿ  ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕ  ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ…

1 day ago