ಕಲಬುರಗಿ: ಎ.ಐ.ಯು.ಟಿ.ಯು.ಸಿ ಜಿಲ್ಲಾ ಸಮಿತಿ ವತಿಯಿಂದ ಗೊಬ್ಬುರ ಬಿ. ಗ್ರಾಮದಲ್ಲಿ ಕಟ್ಟಡ ಕಾರ್ಮಿಕರಿಗೆ ಲೇಬರ್ ಕಾರ್ಡ್ ವಿತರಿಸಲಾಯಿತು.
ಅಫಜಲ್‌ಪುರ ತಾಲೂಕಿನ ಗೊಬ್ಬುರ ಬಿ. ಗ್ರಾಮದಲ್ಲಿ ಕಟ್ಟಡ ಕಾರ್ಮಿಕರಿಗೆ ಸರ್ಕಾರದ ಸೌಲಭಗಳು ತಳಮಟ್ಟಲ್ಲಿರುವಂತಹ ಕಾರ್ಮಿಕರಿಗೆ ತಲುಪಬೇಕೆಂದು ಕಾರ್ಮಿಕ ಸಂಘಟನೆ ವತಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಭಾಷಣಕಾರರಾಗಿ ಆಗಮಿಸಿದ ಎ.ಐ.ಯು.ಟಿ.ಯು.ಸಿ ಜಿಲ್ಲಾ ಕಾರ್ಯದರ್ಶಿಗಳಾದ ಎಸ್.ಎಂ. ಶರ್ಮಾ ರವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ, ಸರಕಾರದ ಸಾಕಷ್ಟು ಸೌಕರ್ಯಗಳು ಬಡ ಕಾರ್ಮಿಕರಿಗೆ ತಲುಪುತ್ತಿಲ್ಲ. ಇಂದಿನ ಸರ್ಕಾರಗಳು ಬಡವರ ಬಗ್ಗೆ ಯಾವುದೇ ಕಾಳಜಿಯಿಲ್ಲದೆ ಬಂಡವಾಳಿಗರ ಗುಲಾಮರಂತೆ ವರ್ತಿಸುತ್ತಿವೆ. ಇದರಿಂದಾಗಿ ನಿರುದ್ಯೋಗ, ಬಡತನ, ದೇಶದಲ್ಲಿ ತಾಂಡವವಾಡುತ್ತಿದೆ. ರೈತರ ಪರಿಸ್ಥಿತಿ ದಿನೆದಿನೆ ಹಾಳಾಗುತ್ತಿದೆ. ಹಿಗಿರುವಾಗ ಸರ್ಕಾರಿ ಸ್ವಾಮ್ಯದ ಕ್ಷೇತ್ರಗಳು ಖಾಸಗಿ ಮಾಲಿಕರಿಗೆ ನೀಡುವ ಮೂಲಕ ದೇಶ ಕೊಳ್ಳೆ ಹೊಡೆಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕಾರ್ಮಿಕರಿಗೆ ಎಲ್ಲಾ ರೀತಿಯ ಸೌಲಭ್ಯಗಳು ಸಂವಿಧಾನ ನಿಯಮದ ಪ್ರಕಾರ ಎಲ್ಲಾ ಹಕ್ಕುದಾರರಿಗೆ ಸಿಗಲೇಬೇಕೆಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಸಮಿತಿಯ ಕಾರ್ಯಕಾರಿನಿ ಸಮಿತಿಯ ಸದಸ್ಯರಾದ ಮಲ್ಲಿನಾಥ ಸಿಂಘೆ ರವರು ವಹಿಸಿಕೊಂಡಿದ್ದರು. ವೇದಿಕೆ ಮೇಲೆ ಮಹಿಳಾ ಸಂಘಟನೆಯ ಜಿಲ್ಲಾ ನಾಯಕರಾದ ರಾಧಾ ಬಿ. ಉಪಸ್ಥಿತರಿದ್ದರು.
ರಾಜು ಪಡಪಟ್ಟಿ, ಮಂಜುಳಾ, ಪ್ರೀತಿ, ಶಿಲ್ಪಾ, ಚನ್ನಮಲ್ಲಪ್ಪ ಶಾಂತಪ್ಪ, ಮೀನಾಕ್ಷಿ, ಲಕ್ಷ್ಮೀ, ಕಸ್ತೂರಿಬಾಯಿ, ಶಿವಾನಂದ, ಮಲ್ಲಪ್ಪ ಚಂದ್ರಕಾಂತ, ಯಲ್ಲಾಬಾಯಿ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಲಬುರಗಿ: ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸರ್ಕಾರಿ ಪದವಿ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಹಾನಗರ ಪಾಲಿಕೆ,ಸಮಾಜ ಕಲ್ಯಾಣ ಇಲಾಖೆ, ಕನ್ನಡ…
ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿ ಹಾಗೂ ಸಿ.ಆರ್.ಸಿ ಸ್ನೇಹ ಬಳಗ ಕಲಬುರಗಿ ಮತ್ತು ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ…
ಕಲಬುರಗಿ: ಸುವರ್ಣ ಭವನ (ಕನ್ನಡ ಭವನ)ದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕ ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ…
ಕಲಬುರಗಿ : ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿಯಲ್ಲಿ ಎನ್.ಎಸ್.ಎಸ್, ರೆಡ್‍ಕ್ರಾಸ್, ಸ್ಕೌಟ್ಸ್ ಆಂಡ್ ಗೈಡ್ಸ್, ಐ.ಕ್ಯೂ.ಎ.ಸಿ ಮತ್ತು ಸಾಂಸ್ಕøತಿಕ ಘಟಕಗಳ…
ಕಲಬುರಗಿ; ಶಿಶು ಮಗುವಿಗೆ ಅಪಹರಣಕಾರರನ್ನು ಬಂಧಿಸಿದ ಕಲಬುರಗಿ ಪೆÇೀಲೀಸ್ ಇಲಾಖೆಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಅಭಿನಂದನೆ ವ್ಯಕ್ತಪಡಿಸಿದೆ.…
ಕಲಬುರಗಿ; ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜೇವರ್ಗಿ, ಯಡ್ರಾಮಿ, ಅಫಜಲಪೂರ, ಸೇಡಂ, ಆಳಂದ, ಚಿಂಚೋಳಿ ತಾಲೂಕಿನಲ್ಲಿ ಜಂಗಲ್ ಕಟಿಂಗ್ ಹಾಗೂ ಮೆಂಟನೆನ್ಸ್…