ಬಿಸಿ ಬಿಸಿ ಸುದ್ದಿ

“ಸ್ವರ್ಣಭೂಮಿ ಫೌಂಡೇಷನ್ ವತಿಯಿಂದ ಮಕ್ಕಳ ದಿನಾಚರಣೆ, ದೀಪಾವಳಿ ಹಬ್ಬ ಸಂಭ್ರಮ”

ಕೋಲಾರ: ಪ್ರತಿವರ್ಷ ನವೆಂಬರ್ ಬಂತೆಂದರೆ ಸಾಕು ಶಾಲೆಗಳಲ್ಲಿ ಮಕ್ಕಳ ದಿನಾಚಾರಣೆಯ ಸಿದ್ಧತೆಗಳು, ಅದರ ವಿಶೇಷತೆಗಳೇ ಜಾಸ್ತಿ. ಅದು ಹಬ್ಬದ ವಾತಾವರಣವನ್ನು ನಿರ್ಮಾಣ ಮಾಡುತ್ತಿತ್ತು. ಆದರೆ ಈ ವರ್ಷ ಕರೋನದಿಂದ ಶಾಲೆಗಳು ಇಲ್ಲದೆ ಇರುವುದರಿಂದ ಮಕ್ಕಳ ದಿನಾಚರಣೆಯ ಸಂಭ್ರಮ ಕಳೆಗುಂದಿದೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಬಿ.ಶಿವಕುಮಾರ್ ಅಭಿಪ್ರಾಯಪಟ್ಟರು.

ಸ್ವರ್ಣಭೂಮಿ ಫೌಂಡೇಷನ್ ವತಿಯಿಂದ ನಲ್ಲೂರಮ್ಮ ದೇವಿ ಮಕ್ಕಳ ಆಶ್ರಮದಲ್ಲಿ ಮಕ್ಕಳಿಗೆ ಹೊಸ ಬಟ್ಟೆ ಹಾಗೂ ಸಿಹಿ ನೀಡಿ,  ದೀಪಗಳನ್ನು ಬೆಳಗಿಸಿ ನಮ್ಮ ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ರವರ ಜನ್ಮದಿನದ ವಿಶೇಷವಾಗಿ “ಮಕ್ಕಳ ದಿನಾಚರಣೆ ಮತ್ತು ದೀಪಾವಳಿ ಹಬ್ಬವನ್ನು” ಸಂಭ್ರಮದಿಂದ ಆಚರಿಸಲಾಯಿತು.

ಈ ವರ್ಷ ಅನಾಥ ಆಶ್ರಮದಲ್ಲೇ ಇರುವ ಮಕ್ಕಳೊಂದಿಗೆ ಆಚರಿಸಲಾಗುತ್ತಿದೆ. ಇಡೀ ಆಶ್ರಮದ ಮಕ್ಕಳೆಲ್ಲರು ನಮ್ಮ ಶ್ರೀ ರಮಣ ಮಹರ್ಷಿ ಶಾಲೆಯಲ್ಲೇ ಉಚಿತ ಶಿಕ್ಷಣ ಪಡೆಯುತ್ತಿದ್ದು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕರಿಸುತ್ತೇವೆ ಎಂದರು.

ಸಂಸ್ಥೆಯ ಸದಸ್ಯ ವಿನಿಲ್ ಮಾತನಾಡಿ ಎಲ್ಲರಂತೆ ಈ ಮಕ್ಕಳು ದೀಪಾವಳಿ ಹಬ್ಬವನ್ನು ಹೊಸಬಟ್ಟೆ ಹಾಕಿಕೊಂಡು ಸಂಭ್ರಮಿಸಬೇಕು ಎಂಬ ಧ್ಯೇಯದೊಂದಿಗೆ ಈ ವರ್ಷ ಅನಾಥ ಮಕ್ಕಳ ವಸತಿ ಶಾಲೆಯಲ್ಲಿ ಹಬ್ಬವನ್ನು ಆಚರಿಸಲಾಯಿತು. ಇದು ನಮಗೆ ಬಹಳ ಸಂತೋಷ ತಂದಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸದಸ್ಯ ದರ್ಶನ್ ಕನ್ನಡಿಗ, ಸವಿನಯ, ಅನಿಲ್, ಪ್ರಕಾಶ್ ಹಾಗೂ ಆಶ್ರಮದ ನಿರ್ವಾಹಕರಾದ ಭುವನೇಶ್ವರ್, ಉಮಾ ಮುಂತಾದವರು ಭಾಗವಹಿಸಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

12 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

12 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

14 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

14 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

14 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

15 hours ago