ಬಿಸಿ ಬಿಸಿ ಸುದ್ದಿ

ಗುಂಡಾಪುರದಲ್ಲಿ ರೈತ ಸಂಘದ ಗ್ರಾಮ ಘಟಕ ರಚನೆ

ಶಹಾಪುರ : ದೇಶದ ಪ್ರತಿಯೊಬ್ಬ ರೈತರಿಗಾಗುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿ ಹೋರಾಟ ಮಾಡಿ ನ್ಯಾಯ ದೊರಕಿಸಿಕೊಡುವುದು ಅನಿವಾರ್ಯತೆ ಇದೆ ಆದ್ದರಿಂದ ರೈತ ಸಂಘಟನೆ ಭಲಪಡಿಸುವ ನಿಟ್ಟಿನಲ್ಲಿ ನಾವು ನೀವೆಲ್ಲರೂ ಕೆಲಸ ಮಾಡಬೇಕಾಗಿದೆ ಎಂದು ರೈತ ಮುಖಂಡರಾದ ಮಹೇಶಗೌಡ ಸುಬೇದಾರ ಹೇಳಿದರು.

ಶಹಾಪುರ ತಾಲೂಕಿನ ಗುಂಡಾಪುರ ಗ್ರಾಮದಲ್ಲಿ ರೈತ ಸಂಘದ ಗ್ರಾಮ ಘಟಕ ರಚಿಸಿ ಮಾತನಾಡಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಕಾರ್ಯಕರ್ತರು ಸಂಘದಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಹೇಳಿದರು.

ರೈತ ಈ ದೇಶದ ಬೆನ್ನೆಲುಬು ಅಂತ ಘೋಷ ವಾಕ್ಯವಾಗಿ ಹೇಳಿದರೆ ಸಾಲದು ಅದರ ಪೂರಕವಾಗಿ ಅಧಿಕಾರಿಗಳು ಹಾಗೂ ಸರ್ಕಾರ ಪಾರದರ್ಶಕತೆಯಿಂದ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.

ಈಗಾಗಲೇ ಕೆಲವೊಂದು ತಾಲ್ಲೂಕುಗಳಲ್ಲಿ ರಸಗೊಬ್ಬರ ಹಾಗೂ ಬೀಜ ವಿತರಣೆಯಲ್ಲಿ ಸಂಪೂರ್ಣ ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆ ಅಲ್ಲದೆ ತಮಗೆ ಬೇಕಾದವರಿಗೆ ದಾಸ್ತಾನು ಪೂರೈಕೆ ಮಾಡುವುದಲ್ಲದೆ ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಇದು ತರವಲ್ಲ ಇದು ಕೂಡಲೇ ಸರಿಪಡಿಸಬೇಕು ಇಲ್ಲದಿದ್ದರೆ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಈ ಮೂಲಕ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮದ ರೈತ ಸಂಘದ ಸದಸ್ಯರಾದ ಕರಿಯಪ್ಪ,ಮಲ್ಲಿಕಾರ್ಜುನ್, ದೊಡ್ಡಪ್ಪ, ಶರಣಬಸವ, ಶಿವರೆಡ್ಡಿ, ಹುಸೇನ್ ಸಾಬ್, ಕಲ್ಲಪ್ಪ ಹಾಗೂ ಇತರರು ಉಪಸ್ಥಿತರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

9 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

11 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

18 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

18 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

19 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago