ಬಿಸಿ ಬಿಸಿ ಸುದ್ದಿ

ದಾಲ್ ಮಿಲ್ ಮಾಲೀಕನ ಅಪಹರಣ: ಐವರು ಆರೋಪಿಗಳು ಅಂದರ್

ಕಲಬುರಗಿ: ನಗರದ ದಾಲ್ ಮಿಲ್ ಮಾಲೀಕ ಓರ್ವರನ್ನು ಅಪಹರಿಸಿಕೊಂಡ ಪರಾರಿಯಾಗಿರುವ ಐವರ ಆರೋಪಿಗಳನ್ನು ಚೌಕ್ ಪೊಲೀಸರು ಬಂಧಿಸಿದ್ದಾರೆ.

ಜೇವರ್ಗಿ ಮೂಲದವರಾಗಿರುವ ಸಿರಾಜುದ್ದೀನ್, ಮಹಮ್ಮದ್ ಯೂನಸ್, ಮೊಹಮ್ಮದ್ ಅಫೀಸ್, ಖಾಜಾ ಹುಸೇನ್ ಹಾಗೂ  ಮೊಹಮ್ಮದ್ ಜಾವಿದ್ ಬಂಧಿತ ಆರೋಪಿಗಳು.

ಇಲ್ಲಿನ ನೆಹರು ಗಂಜ್ ಪ್ರದೇಶದ ಎಪಿಎಂಸಿ ಹತ್ತಿರದ ದಾಲ್ ಮೀಲ್ಸ್ ಮಾಲೀಕರಾದ ಹನುಮಂತರಾಯ್ ಮಾಲಿಪಾಟೀಲ್ ಅವರಿಗೆ ಆರೋಪಿಗಳು 13ರಂದು ಹಣದ ವಿಚಾರವಾಗಿ ಥಳಿಸಿದರಲ್ಲದೆ, ಕಾರಿನಲ್ಲಿ ಅಪಹರಿಸಿಕೊಂಡು ಪರಾರಿಯಾಗಿದರು.

ಪ್ರಕರಣದ ಕುರಿತು ಪೊಲೀಸರು 24 ಗಂಟೆಗಳಲ್ಲಿ ಐವರು ಆರೋಪಿಗಳನ್ನು ಬಾಗಲಕೋಟೆಯಲ್ಲಿ ಬಂಧಿಸಿದ್ದಾರೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಕಾರು ಜಪ್ತಿ ಮಾಡಿಕೊಂಡು ನ್ಯಾಯಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸದ್ಯ ಅಪಹರಣಕ್ಕೊಳಗಾಗಿದ್ದ ಮಿಲ್ ಮಾಲೀಕ ಸುರಕ್ಷಿತವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿಂದೆ ಜಿಲ್ಲೆಯ ಕಾರು ವ್ಯಾಪಾರಿಯನ್ನು ಅಪಹರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ 15 ದಿನಗಳ ಹಿಂದೆ ನಡೆದಿತು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 hour ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

3 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

10 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

10 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

11 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

21 hours ago