ತುಮಕೂರು: ಕಳೆದ ರಾತ್ರಿ ಹೋಂಡಾ ಶೋ ರೂಂನಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ 20ಕ್ಕೂ ಹೆಚ್ಚು ಬೈಕ್ ಗಳು ಸುಟ್ಟು ಕರಕಲಾಗಿರುವ ಘಟನೆ ನಗರದ ಬಿ.ಎಚ್. ರಸ್ತೆಯಲ್ಲಿರುವ ಹೋಂಡಾ ಶೋ ರೂಂನಲ್ಲಿ ನಡೆದಿದೆ.
ಈ ಶೋ ರೂಂನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಳೆದ ರಾತ್ರಿ 10ರವರೆಗೂ ಪೂಜೆ ನಡೆದಿತ್ತು ಎಂದು ತಿಳಿದುಬಂದಿದೆ. ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸಮಯ ಪ್ರಜ್ಞೆಯಿಂದ ಘಟನಾ ಸ್ಥಳಕ್ಕೆ ಅಗ್ವಿಶಾಮಕ ದಳ ಸಿಬ್ಬಂದಿ ಅಗಮಿಸಿ ಬೆಂಕಿ ನಂದಿಸಿದರಿಂದ ಹೆಚ್ಚಿನ ಅನಾಹುತ ತಪ್ಪಿಸಿದರು ಎನ್ನಲಾಗಿದೆ.
ಆದರೂ ಘಟನೆಯಲ್ಲಿ 25ಕ್ಕೂ ಅಧಿಕ ಬೈಕ್ ಗಳು, ಕಂಪ್ಯೂಟರ್ , ಪೀಠೋಪಕರಣಗಳು ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಸೊತ್ತು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬಂದಿದೆ.
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…