ಬಿಸಿ ಬಿಸಿ ಸುದ್ದಿ

ಶಾಸಕ ಪತ್ನಿ ವಿರುದ್ಧ ಬೆಟ್ಟಿಂಗ್ ಆರೋಪ ಸತ್ಯಕ್ಕೆ ದೂರವಾದದ್ದು: ವಿಜಯಲಕ್ಷ್ಮಿ ಬಬಲಾದ

ಕಲಬುರಗಿ: ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಅವರ ಪತ್ನಿ ವಿರುದ್ಧ ಸುಳ್ಳು ಆರೋಪ ಹೊರಸಿ ಅವರ ಕಾರು ಜಪ್ತಿ ಮಾಡಿ ರಾಜಕೀಯ ಭವಿಷ್ಯಕ್ಕೆ ಮಸಿ ಬಳಿಯು ಕುತಂತ್ರ ಇದೆ ಎಂದು ಕುಸನೂರ ತಾಲ್ಲೂಕು ಪಂಚಾಯಿತಿ ಸದಸ್ಯರಾದ ವಿಜಯಲಕ್ಷ್ಮೀ ಬಬಲಾದ ಹೇಳಿದ್ದಾರೆ.

ಕೇವಲ ಅವರ ರಾಜಕೀಯ ವಿರೋಧಿಗಳು ಮಾಡಿರುವ ಪೂರ್ವ ನಿಯೋಜಿತ ಷಡ್ಯಂತ್ರವೇ ಹೊರತಾಗಿ ಮತ್ತೊಂದು ಇಲ್ಲ. ಅತ್ಯಂತ ತಳಸಮುದಾಯದಿಂದ ಮತ್ತು ಅತಿ ಬಡತನ ರೇಖೆಯಿಂದ ಬಂದಿರುವ ಶಾಸಕ ಬಸವರಾಜ ಮತ್ತಿಮೂಡ ಅವರ ರಾಜಕೀಯ ಬೆಳವಣಿಗೆಯನ್ನು ಸಹಿಸದ ಕೆಲವು ಕಿಡಿಗೇಡಿಗಳು ಈ ಕುತಂತ್ರವಾಗಿದೆ ಎಂದರು.

ಈ ಹಿಂದೆಯು ಕೂಡ ಜಿಲ್ಲಾ ಪಂಚಾಯತ ಸದಸ್ಯರಾಗುವ ಸಂದರ್ಭದಲ್ಹೂ ಮತ್ತು ಜಿಲ್ಲಾ ಪಂಚಾಯತ ಅಧ್ಯಕ್ಷರ ಚುನಾವಣೆಯಲ್ಲಿಯೂ ಸಹ ಇದೇ ರೀತಿ ಶಾಸಕರ ಮೇಲೆ ಅನೇಕ ಸುಳ್ಳು ಆರೋಪಗಳನ್ನು ದಾಖಲಿಸಲಾಗಿತ್ತು.

ಆದರೆ ಅವ್ರ ಯಾವವು ಆರೋಪಗಳನ್ನು ಕೂಡ ಇಲ್ಲಿಯವರೆಗೆ ಸಾಬೀತಾಗಿಲ್ಲ. ಇಡಿ ಜನತೆಗೆ ಗೊತ್ತಾಗಿದೆ. ಮತ್ತೆ ಅದೇ ಷಡ್ಯಂತ್ರ ಮುಂದುವರೆದಿದೆ. ಕೆಲವು ಕುತಂತ್ರಿಗಳು ಶಾಸಕರಿಗೆ ಸುಳ್ಳು ಹೇಳಿ ಅವರಿಗೆ ಸಂಬಂಧಿಸಿದ ವಾಹನ ತೆಗೆದುಕೊಂಡು ಹೋಗಿ ಮಾಡಿರುವ ಪೂರ್ವ ನಿಯೋಜಿತ ಷಡ್ಯಂತ್ರವಲ್ಲದೇ ಮತ್ತೇನೂ ಅಲ್ಲ ಎಂದು ಖಂಡಿಸಿದ್ದಾರೆ.

ಆರೋಪಕ್ಕೂ ಶಾಸಕರ ಕುಟುಂಬಕ್ಕೂ ಯಾವೃದೇ ರೀತಿಯ ಸಂಬಂಧವಿಲ್ಲ ಸಾರ್ವಜನಿಕರು ಇಂತಹ ಸುಳ್ಳು ಆರೋಪಗಳಿಗೆ ಯಾರೂ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

6 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

8 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

15 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

15 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

15 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago