ಸುರಪುರ: ನಗರದ ಸಾರ್ವಜನಿಕ ಗ್ರಂಥಾಲಯದಲ್ಲಿ ಶನಿವಾರದಂದು ಗ್ರಂಥಾಲಯ ಸಪ್ತಾಹ ಕಾರ್ಯಕ್ರಮ ಆಚರಿಸಲಾಯಿತು.
ಬಾಲಕರ ಸರಕಾರಿ ಪ್ರೌಢಶಾಲೆಯ ಉಪ ಪ್ರಾಂಶುಪಾಲ ಯಲ್ಲಪ್ಪ ಕಾಡ್ಲೂರ ಚಾಲನೆ ನೀಡಿ ಮಾತನಾಡಿ ಇಂದು ಜನ ಸಾಮಾನ್ಯರಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸ ಕಡಿಮೆಯಾಗುತ್ತಿದ್ದು ಅದರಲ್ಲೂ ಯುವಕರು ಹಾಗೂ ಮಕ್ಕಳಲ್ಲಿ ಪುಸ್ತಕಗಳನ್ನು ಓದುವ ಅಭಿರುಚಿ ಕಡಿಮೆಯಾಗುತ್ತಿದ್ದು ತುಂಬಾ ಖೇದಕರ ಸಂಗತಿ ಜ್ಞಾನಾರ್ಜನೆಗೆ ಪುಸ್ತಕಗಳನ್ನು ಓದುವುದು ತುಂಬಾ ಮುಖ್ಯ ಗ್ರಂಥಾಲಯಗಳು ದೇವಾಲಯವಿದ್ದಂತೆ ಯುವಕರು ಮತ್ತು ಮಕ್ಕಳು ಇದರ ಸದುಪಯೋಗಪಡೆದುಕೊಂಡು ಪುಸ್ತಕಗಳನ್ನು ಓದುವ ಅಭಿರುಚಿ ಬೆಳೆಸಿಕೊಳ್ಳುವ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಗಳಿಸಿಕೊಳ್ಳಲು ಪುಸ್ತಕಗಳನ್ನು ಹೆಚ್ಚು ಓದಬೇಕು ಗ್ರಂಥಾಲಯದಲ್ಲಿ ವಿವಿಧ ಪ್ರಕಾರಗಳ ಪುಸ್ತಕಗಳು ಇದ್ದು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಅವರು ಸಲಹೆ ನೀಡಿದರು.
ಗ್ರಂಥಾಲಯ ಸಹಾಯಕ ವನಕೇರಪ್ಪ ಹಾದಿಮನಿ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರತಿ ವರ್ಷ ನವಂಬರ್ ೧೪ ರಿಂದ ಗ್ರಂಥಾಲಯ ಸಪ್ತಾಹ ಆಚರಿಸಲಾಗುವುದು ಎಂದು ತಿಳಿಸಿದ ಅವರು ಗ್ರಂಥಾಲಯದಲ್ಲಿ ಸಾಕಷ್ಟು ಪುಸ್ತಕಗಳು ಲಭ್ಯವಿದ್ದು ಓದುಗರು ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.
ಓದುಗರಾದ ಗುರುರಾಜ ಜೋಷಿ,ಮಲ್ಲಿಕಾರ್ಜುನ ಹುದ್ದಾರ,ಮರೆಪ್ಪ ವನಕೇರಿ,ಲಕ್ಷ್ಮೀಕಾಂತ ಸಾಗರ,ಶ್ರೀನಿವಾಸ ಕುಲಕರ್ಣಿ, ಹುಸೇನಸಾಬ, ಮರೆಪ್ಪ ಕಬಾಡಗೇರಾ, ವಿರೇಶಸ್ವಾಮಿ ಇತರರು ಭಾಗವಹಿಸಿದ್ದರು. ದತ್ತು ಕುಲಕರ್ಣಿ ನಿರೂಪಿಸಿ ವಂದಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…