ಬೆಂಗಳೂರು: ಲೋಕಾಯುಕ್ತರ ಆದೇಶಕ್ಕೂ ಬೆಲೆ ಕೊಡದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನಿರ್ಗಮಿತ 124 ಸದಸ್ಯರು ತಮ್ಮ ಆಸ್ತಿ ವಿವರ ಸಲ್ಲಿಸದೆ ದ್ರೋಹ ಎಸಗಿದ್ದು, ಇವರುಗಳಿಗೆ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ ಆಗ್ರಹಿಸಿದ್ದಾರೆ.
ಈ ಬಗ್ಗೆ ಇಂದಿನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2019 ರ ಆಗಸ್ಟ್ 28ರಂದು ಆದೇಶ ಹೊರಡಿಸಿದ್ದ ಲೋಕಾಯುಕ್ತರು, 198 ವಾರ್ಡ್‌ಗಳ ಸದಸ್ಯರು ತಮ್ಮ ಆಸ್ತಿ ವಿವರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಹೇಳಿದ್ದರು. ಈ ಆದೇಶ ನೀಡಿ ಒಂದು ವರ್ಷವಾದರೂ, 124 ಸದಸ್ಯರು ಇನ್ನೂ ತಮ್ಮ ವಿವರಗಳನ್ನು ಸಲ್ಲಿಸಿಲ್ಲ ಇಂತಹ ಸದಸ್ಯರುಗಳ ಹೆಚ್ಚುವರಿ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಹೇಳಿದರು.
ರಾಜ್ಯ ಮಾಧ್ಯಮ ಸಂಚಾಲಕರಾದ ಜಗದೀಶ್ ವಿ ಸದಂ ಅವರು ಮಾತನಾಡಿ, ವರ್ಷದಿಂದ ವರ್ಷಕ್ಕೆ ಎಗ್ಗಿಲ್ಲದೆ ಹೆಚ್ಚಳವಾಗುತ್ತಿದ್ದ ಜನಪ್ರತಿನಿಧಿಗಳ ಆಸ್ತಿ ಗಳಿಕೆಯ ಬಗ್ಗೆ ಸಾಕಷ್ಟು ಅನುಮಾನ ಮೂಡಿದ್ದರಿಂದ ಜನಪ್ರತಿನಿಧಿಗಳಾಗಿ ಆರಿಸಿ ಬಂದವರು, ತಮ್ಮ ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತಕ್ಕೆ ಸಲ್ಲಿಬೇಕೆಂಬ ನಿಯಮ 2009 ರಲ್ಲೇ ಜಾರಿಗೆ ಬಂದಿತ್ತು. ಆದರೆ ಈಗ ಲೋಕಾಯುಕ್ತರ ಆದೇಶಕ್ಕೆ ಕನಿಷ್ಟ ಬೆಲೆ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಚುನಾವಣೆಯ ಮುಖಾಂತರ ಜನಪ್ರತಿನಿಧಿಗಳಾಗಿ ಆರಿಸಿ ಬಂದವರು, ಪ್ರತಿ ವರ್ಷ ಜೂನ್ 30ರ ಒಳಗಾಗಿ ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತಕ್ಕೆ ಸಲ್ಲಿಬೇಕೆಂಬ ನಿಯಮ 2009ರಲ್ಲೇ ರೂಪಿತವಾಗಿತ್ತು. ಒಂದು ದಶಕದಷ್ಟು ಸಮಯ ಕಳೆದರೂ, ಈ ನಿಯಮವನ್ನು ಕಠಿಣವಾಗಿ ಜಾರಿಗೆ ಬರುವುದರಲ್ಲೇ ಇದೆ. ಕಾನೂನಿನ ಭಯವಿಲ್ಲದ, ಆಸ್ತಿ ವಿವರ ಸಲ್ಲಿಸದ 124 ನಿರ್ಗಮಿತ ಸದಸ್ಯರ ವಿರುದ್ದ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಹಾಗೂ ಲೋಕಾಯುಕ್ತ ಸಂಸ್ಥೆಗೆ ಆಗ್ರಹಿಸಿದರು. ಆಸ್ತಿ ವಿವರ ಸಲ್ಲಿಸದ ನಿರ್ಗಮಿತ ಬಿಬಿಎಂಪಿ ಸದಸ್ಯರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಲು ತಾಕತ್ತಿದೆಯೇ ಎಂದು ಇದೇ ಸಂಧರ್ಭದಲ್ಲಿ ಪ್ರಶ್ನಿಸಿದರು.
ಡಿಜೆ ಹಳ್ಳಿ ಗಲಬೆಯ ಪ್ರಮುಖ ಆರೋಪಿ ತಲೆ ಮರೆಸಿಕೊಂಡಿರುವ ನಿರ್ಗಮಿತ ಮೇಯರ್ ಸಂಪತ್ ರಾಜ್, ಆಸ್ತಿ ವಿವರ ಸಲ್ಲಿಸಿಲ್ಲದ ನಿರ್ಗಮಿತ ಉಪ ಮೇಯರ್ ರಾಮ್ ಮೋಹನ್ ರಾಜು, ಪುಲಕೇಶಿ ನಗರದ ಅಬ್ದುಲ್ ರಕೀಬ್ ಜಾಕೀರ್ ಹುಸೇನ್, ವಿರೋಧ ಪಕ್ಷದ ನಾಯಕರಾಗಿದ್ದ ಮನೋರಾಯನ ಪಾಳ್ಯದ ಅಬ್ದುಲ್ ವಾಜಿದ್, ಹಿರಿಯೂರು ಬಿಜೆಪಿ ಶಾಸಕಿ ಕೆ.ಆರ್ ಪುರಂ ಪೂರ್ಣಿಮ, ಶಾಸಕ ಮುನಿರತ್ನ ಬೆಂಬಲಿಗ ಯಶವಂತಪುರದ ಜಿ.ಕೆ.ವೆಂಕಟೇಶ್, ಮಹಾಲಕ್ಷೀಪುರಂನ ಕೇಶವಮೂರ್ತಿ ಇವರ ಮಗ ಡ್ರಗ್ ಜಾಲದಲ್ಲಿದ್ದು ತಲೆಮರೆಸಿಕೊಂಡು ಓಡಾಡುತ್ತಿದ್ದಾನೆ. ಇಷ್ಟೆಲ್ಲಾ ಸಮಾಜ ವಿರೋಧಿ ಕೆಲಸಗಳನ್ನು ಮಾಡುತ್ತಿರುವ ಇಂತಹ ಜನಪ್ರತಿನಿಧಿಗಳ ವಿರುದ್ದ ಕ್ರಮಗೊಳ್ಳಬೇಕು ಎಂದು ಲೋಕಾಯಕ್ತಕ್ಕೆ ದೂರು ನೀಡಲಾಗುವುದು ಎಂದರು.
ಆಸ್ತಿ ವಿವರ ಸಲ್ಲಿಸದೇ ಇರುವವರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಲೋಕಾಯುಕ್ತರಿಗೆ ಮನವಿ ಸಲ್ಲಿಸಲಾಗುವುದು. ವಿಪರ್ಯಾಸ ಎಂದರೆ ಕರ್ನಾಟಕ ರಾಜ್ಯ ಭ್ರಷ್ಟಾಚಾರದಲ್ಲಿ ಮೊದಲನೇ ಸ್ಥಾನಕ್ಕೆ ಏರಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ, ಲೋಕಾಯುಕ್ತ ಸಂಸ್ಥೆ ಹಾಳು ಗೆಡವಿ, ಭ್ರಷ್ಟಾಚಾರ ನಿಗ್ರಹ ದಳ ಸ್ಥಾಪಿಸಿ ಸರ್ಕಾರಿ ಕಚೇರಿಗಳನ್ನು ಭ್ರಷ್ಟರ ಕೂಪ ಮಾಡಿದ್ದೆ ಸಾಧನೆ ಎಂದು ವ್ಯಂಗ್ಯವಾಡಿದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…