ಸುರಪುರ: ಮುಖ್ಯಂಮತ್ರಿ ಬಿ.ಎಸ್.ಯಡಿಯೂರಪ್ಪನವರು ವೀರಶೈವ ಲಿಂಗಾಯತ ಅಭಿವೃಧ್ಧಿ ನಿಗಮವನ್ನು ಘೋಷಣೆ ಮಾಡಿದ್ದಕ್ಕೆ ಸುರಪುರ ತಾಲೂಕಿನ ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ಹಾಗು ವೀರಶೈವ ಲಿಂಗಾಯತ ಯುವ ವೇದಿಕೆ ವತಿಯಿಂದ ಹರ್ಷಾಚರಣೆ ಆಚರಿಸಲಾಯಿತು.
ನಗರದ ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪ ಬಳಿಯಲ್ಲಿನ ಬಸವೇಶ್ವರ ವೃತ್ತದಲ್ಲಿ ಸೇರಿದ ಅನೇಕ ಜನ ಮುಖಂಡರು ಹಾಗು ಕಾರ್ಯಕರ್ತರು ಬಸವೇಶ್ವರರ ನಾಮಫಲಕಕ್ಕೆ ಮಾಲಾರ್ಪಣೆ ಮಾಡಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.
ಈ ಸಂದರ್ಭದಲ್ಲಿ ಅನೇಕ ಮುಖಂಡರು ಮಾತನಾಡಿ,ರಾಜ್ಯದಲ್ಲಿ ಸುಮಾರು ಒಂದು ಕೋಟಿಗು ಅಧಿಕ ಸಂಖ್ಯೆಯ ವೀರಶೈವ ಲಿಂಗಾಯತ ಸಮುದಾಯದ ಜನರಿದ್ದು ಅದರಲ್ಲಿ ತೀರಾ ಹಿಂದುಳಿದಿರುವವರ ಸಂಖ್ಯೆ ಹೆಚ್ಚಿದೆ,ಈ ಎಲ್ಲಾ ಸಮುದಾಯದ ಜನರ ಅಭೀವೃಧ್ಧಿಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಯಡಿಯೂರಪ್ಪನವರು ಅಭೀವೃಧ್ಧಿ ನಿಗಮ ಘೋಷಣೆ ಮಾಡಿರುವುದು ಸಂತೋಷದ ಸಂಗತಿಯಾಗಿದೆ.ಈ ಕಾರಣಕ್ಕಾಗಿ ಸರಕಾರಕ್ಕೆ ಮತ್ತು ಮುಖ್ಯಮಂತ್ರಿಗಳಿಗೆ ಅಭಿನಂಧನೆ ಸಲ್ಲಿಸುವುದಾಗಿ ತಿಳಿಸಿದರು.
ನಂತರ ಮಹಾತ್ಮ ಗಾಂಧಿ ವೃತ್ತಕ್ಕೆ ತೆರಳಿ ಮಾಲಾರ್ಪಣೆ ಮಾಡಿ ಸಿಹಿ ಹಂಚಿ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ಲಕ್ಷ್ಮೀಪುರ ಶ್ರೀಗಿರಿ ಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಮುಖಂಡರಾದ ಬಸವರಾಜ ಜಮದ್ರಖಾನಿ ಜಿ.ಎಸ್.ಪಾಟೀಲ್,ಹೆಚ್.ಸಿ.ಪಾಟೀಲ್ ಮಲ್ಲಣ್ಣ ಸಾಹು ಶಾಂತರಾಜ ಬಾರಿ ಮಂಜುನಾಥ ಜಾಲಹಳ್ಳಿ ಪ್ರಕಾಶ ಅಂಗಡಿ ಪ್ರದೀಪ ಕದರಾಪುರ ಚಂದ್ರಶೇಖರ ಡೊಣುರ ವಿರೇಶ ಪಂಚಾಂಗಮಠ ಮಹೇಶ ಪಾಟೀಲ್ ಶರಣು ಮುಧೋಳ ಜಗದೀಶ ಪಾಟೀಲ್ ದೇವಿಂದ್ರಪ್ಪಗೌಡ ಮಾಲಗತ್ತಿ,ಮಲ್ಲು ಬಾದ್ಯಾಪುರ ರವಿಕುಮಾರ ಹೆಮನೂರ ಸಿದ್ದನಗೌಡ ಹೆಬ್ಬಾಳ ಮಲ್ಲಿಕಾರ್ಜುನ ರಡ್ಡಿ ಅಮ್ಮಾಪುರ ಬಸ್ಸಯ್ಯಸ್ವಾಮಿ ಬೋನಾಳ ರಾಜು ಗುಡೂರ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…