ನಗರದಲ್ಲಿ ಅಭಿವೃದ್ಧಿ ಕಾಮಗಾರಿಗಳು ನೆಲಕಚ್ಚಿವೆ ಡಾ.ರಶೀದ್ ಆರೋಪ

0
220

ಶಹಾಬಾದ:ನಗರದ ರಸ್ತೆಗಳು ಹದಗೆಟ್ಟು ಹೋಗಿ ಸಾರ್ವಜನಿಕರ ಸಂಚಾರಕ್ಕೆ ಎಲ್ಲಿಲ್ಲದ ತೊಂದರೆಯಾಗುತ್ತಿದೆ.ಅಲ್ಲದೇ ವಿವಿಧ ಅಭಿವೃದ್ಧಿ ಕಾಮಗಾರಿಗಳು ನೆಲಕಚ್ಚಿವೆ.ಈ ಬಗ್ಗೆ ಅಧಿಕಾರಿಗಳು ಮತ್ತು ಶಾಸಕರು ಗಮನಹರಿಸುತ್ತಿಲ್ಲ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್ ಆರೋಪಿಸಿದರು.

ಅವರು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಗರದ ಬಸವೇಶ್ವರ ವೃತ್ತದಿಂದ ಮರಗೋಳ ವೃತ್ತದವರೆಗಿನ ರಸ್ತೆ ಕೆಟ್ಟು ಹೋಗಿದ್ದರಿಂದ ವಾಹನ ಸವಾರರಿಗೆ ಎಲ್ಲಿಲ್ಲದ ಸಂಕಷ್ಟ ತಲೆದೋರಿದೆ.ಅಲ್ಲದೇ ರಸ್ತೆ ಕೆಟ್ಟು ಹೋಗಿದ್ದರಿಂದ ರಸ್ತೆ ಸಾರಿಗೆ ಇಲಾಖೆಯ ಬಸ್ಗಳು ನಗರದ ರೀಮಗ್ ರೋಡ್ನಿಂದ ಹೋಗದೇ, ಮುಖ್ಯ ಬಜಾರ ಮೂಲಕ ತೆರಳುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆ ಅನುಭವಿಸಬೇಕಾಗಿದೆ. ಮುಖ್ಯ ಬಜಾರನಲ್ಲಿ ಜನಜಂಗುಳಿ ಇರುವುದರಿಂದ ಟ್ರಾಫಿಕ್ ಕಿರಿಕಿರಿ ಜತೆಗೆ ಧೂಳಿನಿಂದ ಜನರು ಹಾಗೂ ವ್ಯಾಪಾರಸ್ಥರು ಬೇಸತ್ತು ಹೋಗಿದ್ದಾರೆ. ಅಲ್ಲದೇ ನಗರದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಿಂತು ಹೋಗಿದ್ದು, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಗಮನಹರಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Contact Your\'s Advertisement; 9902492681

ನಗರೋತ್ಥಾನ ಮೂರನೇ ಹಂತದ ಕಾಮಗಾರಿಗಳನ್ನು ಅರ್ಧಕ್ಕೆ ಬಿಟ್ಟು ಗುತ್ತಿಗೆದಾರರು ಕಳೆದ ಒಂದು ವರ್ಷದಿಂದ ನಾಪತ್ತೆಯಾಗಿದ್ದಾರೆ.ಆದರೂ ಅಧಿಕಾರಿಗಳು ಯಾವ ಕ್ರಮಕೈಗೊಂಡಿಲ್ಲ. ಎಸ್ಸಿಪಿಮತ್ತು ಟಿಎಸ್ಪಿ ಯೋಜನೆಯ 20 ಕೋಟಿ ಅನುದಾನದಲ್ಲಿ ಕೈಗೊಂಡ ಕಾಮಗಾರಿಗಳು ಗುತ್ತಿಗೆದಾರರು ಪ್ರಾರಂಭ ಮಾಡುತ್ತಿಲ್ಲ. ಈ ಶಾಸಕರು ಮತ್ತು ಅಧಿಕಾರಿಗಳು ಗಮನಹರಿಸಿ ಬೇಗನೆ ಕಾಮಗಾರಿ ಮಾಡುವತ್ತ ಕ್ರಮಕೈಗೊಳ್ಳಬೇಕು.ಕಾಮಗಾರಿ ಕೈಗೊಳ್ಳದಿದ್ದರೇ ಗುತ್ತಿಗೆದಾರನ ವಿರುದ್ಧ ಕ್ರಮಕೈಗೊಳ್ಳಬೇಕೆಂದು ತಿಳಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here