ಕಲಬುರಗಿ: ಬಿಹಾರದಲ್ಲಿ ಲೈಂಗಿಕ ಕಿರುಕುಳಕ್ಕೆ ಪ್ರತಿರೋಧಿಸಿದ್ದ ಯುವತಿಯಗೆ ಕ್ರೂರವಾಗಿ ಸೀಮೆ ಎಣ್ಣೆ ಸುರಿದು ಬರ್ಬರವಾಗಿ ಹತ್ಯೆ ಮಾಡಿರುವ ಮೂವರು ಆರೋಪಿಗಗೆ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕೆಂದು Knows Your Rights Association ಆಗ್ರಹಿಸಿದೆ.
ಇಂದು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ, ಮುಖ್ಯ ನ್ಯಾಯಮೂರ್ತಿಗಳು, ಬಿಹಾರದ ಮುಖ್ಯಮಂತ್ರಿ ಮತ್ತು ಬಿಹಾರದ ಡಿಜಿಪಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಕೃತ್ಯ ನಡೆಸಿದ ಎಲ್ಲಾ ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕೆಂದು ಬಲವಾಗಿ ಒತ್ತಾಯಿಸಿದ ಸಂಘಟನೆ ಸದಸ್ಯರು, ಮಹಿಳಾ ಐಪಿಎಸ್ / ಐಎಎಸ್ ಅಧಿಕಾರಿ ಮೇಲ್ವಿಚಾರಣೆಯಲ್ಲಿ ಎಸ್‌ಐಟಿ ತನಿಖೆ, ಎಫ್‌ಐಆರ್ ದಾಖಲಿಸಲು ವಿಳಂಬ ಮಾಡಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.
ಸಂತ್ರಸ್ತೆಯ ಕುಟುಂಬಕ್ಕೆ ಒಂದು ಕೋಟಿ ಪರಿಹಾರ, ಕುಟುಂಬ ಸದಸ್ಯರಿಗೆ ಸರಕಾರಿ ಕೆಲಸ ಹಾಗೂ ಕುಟುಂಬಕ್ಕೆ ಪೊಲೀಸ್ ರಕ್ಷಣೆ ನೀಡಬೇಕೆಂದು ಸಂಘಟನೆ ಮುಖಂಡರು ಒತ್ತಾಯಿಸಿದ್ದಾರೆ.