ಬೆಂಗಳೂರು: ಕಸದ ಬ್ಲಾಕ್ ಸ್ಪಾಟ್‌ಗಳು ಹೆಚ್ಚುತ್ತಿದ್ದು, ಬಿಬಿಎಂಪಿ ನೇಮಕ ಮಾಡಿಕೊಂಡಿರುವ ಮಾರ್ಷಲ್‌ಗಳನ್ನು ಮೂಲ ಕರ್ತವ್ಯಕ್ಕೆ ಮರು ನಿಯೋಜಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಮಹಿಳಾ ಮುಖಂಡರಾದ ಜನನಿ ಭರತ್ ಆಗ್ರಹಿಸಿದರು
ಬುಧವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಮಾರ್ಷಲ್‌ಗಳನ್ನು ಬಿಬಿಎಂಪಿ ನೇಮಕ ಮಾಡಿಕೊಂಡಿದ್ದು ಎಲ್ಲೆಂದರಲ್ಲಿ ಕಸ ಎಸೆಯುವವರನ್ನು ಹಿಡಿದು ದಂಡ ವಿಧಿಸಲು ಹಾಗೂ ಬ್ಲಾಕ್ ಸ್ಪಾಟ್‌ಗಳು ಹೆಚ್ಚಾಗದಂತೆ ನಿಗಾವಹಿಸುವ ಸಲುವಾಗಿ ಆದರೆ, ಬಿಬಿಎಂಪಿ ಈ ಕೆಲಸದಿಂದ ಇವರನ್ನು ವಿಮುಖರನ್ನಾಗಿ ಮಾಡಿ ಜನರ ಸುಲಿಗೆಗೆ ಇಳಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಮ್ ಆದ್ಮಿ ಪಕ್ಷ ನಡೆಸಿದ ಸರ್ವೇಕ್ಷಣೆ ಪ್ರಕಾರ ನಗರದಲ್ಲಿ ಸುಮಾರು 1038 ಕ್ಕೂ ಹೆಚ್ಚು ಬ್ಲಾಕ್ ಸ್ಪಾಟ್ (ಕಸದ ರಾಶಿಗಳು) ಕಂಡು ಬಂದಿವೆ. ಇದರಿಂದ ಸೊಳ್ಳೆ, ಹಂದಿ, ಬೀದಿ ನಾಯಿಗಳ ಕಾಟ ವಿಪರೀತವಾಗಿದೆ, ಕಸದ ಮಾಫಿಯಾ ಜತೆ ಕೈ ಜೋಡಿಸಿರುವ ಬಿಬಿಎಂಪಿ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಿ, ಅದನ್ನು ಬಿಟ್ಟು ಜನರನ್ನು ದೋಚುವುದುಲ್ಲ ಬೆಂಗಳೂರು ಅಭಿವೃದ್ದಿ ಖಾತೆಯನ್ನು ತಮ್ಮ ಬಳಿ ಇಟ್ಟುಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಎಂದು ವ್ಯಂಗ್ಯವಾಡಿದರು.
ಕಸದ ಮಾಫಿಯಾ ಜತೆ ಕೈ ಜೋಡಿಸಿರುವ ಸರ್ಕಾರ ಹಾಗೂ ಬಿಬಿಎಂಪಿ 198 ಪ್ಯಾಕೇಜ್‌ಳನ್ನು 89 ಇಳಿಸಿರುವ ಕಾರಣ ಕಸ ಸಂಗ್ರಹ ವ್ಯತ್ಯಯವಾಗಿ ಬ್ಲಾಕ್ ಸ್ಪಾಟ್‌ಗಳು ಹೆಚ್ಚುತ್ತಿವೆ. ಈಗಾಗಲೇ ನಗರದಲ್ಲಿ ಡೆಂಗ್ಯೂ, ಚಿಕುನ್‌ಗುನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಕಸದ ರಾಶಿಗಳಿಂದ ಸೊಳ್ಳೆ ಉತ್ಪತ್ತಿಯಾಗಿ ಜನ ರೋಗದಿಂದ ನರಳುವಂತೆ ಮಾಡುವುದು ಬಿಬಿಎಂಪಿ ಉದ್ದೇಶವೇ? ಆಯುಕ್ತ ಮಂಜುನಾಥ್ ಪ್ರಸಾದ್, ಆಡಳಿತಾಧಿಕಾರಿ ಗೌರವ್ ಗುಪ್ತ ಅವರು ಉತ್ತರಿಸಬೇಕು, ಪ್ರತಿ ಮನೆ, ಮನೆಯಿಂದ ಕಸ ಸಂಗ್ರಹಕ್ಕೆ ಎಂದು ₹600 ರಷ್ಟು ಏಕೆ ಸೆಸ್ ಸಂಗ್ರಹ ಸಂಗ್ರಹಿಸಲಾಗುತ್ತಿದೆ ಎಂಬುದನ್ನು ಸ್ಪಷ್ಟಪಡಿಸಿ ಎಂದರು.
ಮಾಧ್ಯಮ ಸಂಯೋಜಕ ಸೋಮಶೇಖರ್ ಮಾತನಾಡಿ, ವಾರ್ಡ್ ಮಟ್ಟದಲ್ಲಿ ನೇಮಕ ಮಾಡಿರುವ ನೋಡಲ್ ಅಧಿಕಾರಿಗಳು ಸಹ ಸರಿಯಾಗಿ ಸ್ಪಂದಿಸುತ್ತಿಲ್ಲ ಕರೆ ಮಾಡಿದರೆ ಸ್ವೀಕರಿಸಿದೆ ವಾಟ್ಸ್‌ಆ್ಯಪ್ ಮೂಲಕ ಬ್ಲಾಕ್ ಸ್ಪಾಟ್‌ಗಳ ಫೋಟೋ ಕಳಿಸಿ ಎಂದು ಹೇಳಿ ಆನಂತರ ಸಮರ್ಪಕವಾಗಿ ಉತ್ತರಿಸುತ್ತಿಲ್ಲ ಎಂದು ದೂರಿದರು.
ಕಸದ ರಾಶಿಗಳು ಎಲ್ಲೆಂದರಲ್ಲಿ ಹೆಚ್ಚಾಗುತ್ತಿರುವ ಕಾರಣ ಹಂದಿಗಳ ಸಂಖ್ಯೆಯೂ ಇದ್ದಕ್ಕಿದ್ದಂತೆ ವಿಪರೀತವಾಗಿದೆ, ಬೀಡಾಡಿ ದನಗಳ ಸಂಖ್ಯೆಯೂ ಹೆಚ್ಚಳವಾಗಿದ್ದು ರಸ್ತೆಯಲ್ಲಿ ಸಂಚರಿಸುವುದೇ ದುಸ್ತರವಾಗಿದೆ ಎಂದರು.
ಮೂಲ ಕರ್ತವ್ಯದಿಂದ ವಿಮುಖರನ್ನಾಗಿಸಿ ಸಾರ್ವಜನಿಕರ ಸುಲಿಗೆಗೆ ನೇಮಿಸಿರುವ ಮಾರ್ಷಲ್‌ಗಳನ್ನು ಕೂಡಲೇ ಮೂಲ ಕರ್ತವ್ಯಕ್ಕೆ ಮರಳಿಸಬೇಕು ಎಂದು ಹೇಳಿದರು
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…