ಯುವಕರು ಓದಿನ ಜೊತೆಗೆ ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಿ: ಪ್ರಕಾಶ ಅಂಗಡಿ

0
58

ಸುರಪುರ: ಇಂದಿನ ಯುವಕರು ಹಾಗೂ ವಿದ್ಯಾರ್ಥಿಗಳು ಕ್ರೀಡಾಸಕ್ತಿ ಬೆಳೆಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಹೇಳಿದರು.

ತಾಲೂಕಿನ ಹೆಬ್ಬಾಳ ಕೆ ಗ್ರಾಮದ ಶಾಲಾ ಆವರಣದಲ್ಲಿ ಸಗರನಾಡು ಸೇವಾ ಪ್ರತಿಷ್ಠಾನ ಕನ್ನೆಳ್ಳಿ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ ಹಾಗೂ ಪ್ರತಿಷ್ಠಾನದ ದಶಮಾನೋತ್ಸವ ಸಂಭ್ರಮದ ವರ್ಷಾಚಾರಣೆ ನಿಮಿತ್ಯವಾಗಿ ಆಯೋಜಿಸಿದ್ದ ಸುರಪುರ ಹಾಗೂ ಹುಣಸಗಿ ತಾಲೂಕಿನ ವಿವಿಧ ಗ್ರಾಮಗಳ ಯುವಕರಿಗೆ ಕ್ರೀಡಾ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುವಕರು ಹೆಚ್ಚು ಹೆಚ್ಚಾಗಿ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ, ಮಾನಸಿಕವಾಗಿ ಸದೃಢಹೊಂದಲು ಸಾದ್ಯಾವಾಗುತ್ತದೆ ಹಾಗೂ ವ್ಯಕ್ತಿತ್ವ ವಿಕಸನಗೊಳಿಸುವಲ್ಲಿ ಸಹಕಾರಿಯಾಗುತ್ತದೆ ಎಂದರು.

Contact Your\'s Advertisement; 9902492681

ಅತಿಥಿಗಳಾಗಿ ಭಾಗವಹಿಸಿದ್ದ ಶ್ರೀ ಗುರು ಸೇವಾ ಸಂಸ್ಥೆಯ ಅಧ್ಯಕ್ಷ ಮಲ್ಲು ಬಾದ್ಯಾಪುರ ಮಾತನಾಡಿ ವಿದ್ಯಾರ್ಥಿಗಳು ಮತ್ತು ಯುವಕರು ಪ್ರತಿದಿನ ಕೆಲವು ಸಮಯವಾದರು ಇಂದಿನ ಯುವಕರು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಉತ್ತಮ ಬೆಳವಣಿಗೆ ಆ ದೀಶೆಯಲ್ಲಿ ಸಗರನಾಡು ಸೇವಾ ಪ್ರತಿಷ್ಠಾನ ವತಿಯಿಂದ ಉಚಿತವಾಗಿ ಕ್ರೀಡಾ ಸಾಮಾಗ್ರಿ ನೀಡುವ ಮೂಲಕ ಉತ್ತಮ ಕಾರ್ಯಮಾಡಿದೆ ಎಂದು ಅಭಿಪ್ರಾಯ ಪಟ್ಟರು.

ಮುಖ್ಯ ಅತಿಥಿಗಳಾಗಿ ಸಂತೋಷ ಮೇಟಿ, ಸಿದ್ದಣ್ಣ ಬಿರಾದರ, ಸಂಗಣ್ಣ ಅಂಬಲಿ ರವಿ ದಾಸರ ಸೇರಿದಂತೆ ಇತರರಿದ್ದರು. ಕಾರ್ಯಕ್ರಮವನ್ನು ನಿಂಗು ಪಾಟೀಲ್ ನಿರೂಪಿಸಿ ವಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here