ಶಹಾಬಾದ:ನಗರಸಭೆಯ ನೂತನ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ, ಉಪಾಧ್ಯಕ್ಷೆ ಸಲೀಮಾಬೇಗಂ ಮೆಹಬೂಬ ಹಾಗೂ ಕಾಂಗ್ರೆಸ್ ಮುಖಂಡರ ನಿಯೋಗ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಬೇಟಿ ಮಾಡಿ ಸನ್ಮಾನಿಸಿ, ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಪ್ರಿಯಾಂಕ್ ಖರ್ಗೆ, ನಗರಸಭೆಯಲ್ಲಿ ಕಾಂಗ್ರೆಸ್ ಬಹುಮತ ಹೊಂದಿದ್ದು, ಅದರ ಸದುಪಯೋಗಪಡಿಸಿಕೊಂಡು ನಗರದ ಅಭಿವೃದ್ಧಿಯ ಕಡೆಗೆ ಹೆಚ್ಚಿನ ಗಮನ ನೀಡಿ. ನಗರಸಭೆಯ ಅಧಿಕಾರವನ್ನು ಪಕ್ಷ ತಮಗೆ ನೀಡಿದ್ದು, ಅದನ್ನು ಪ್ರಾಮಾಣಿಕವಾಗಿ ನಿಭಾಯಿಸುವ ಕೆಲಸವಾಗಬೇಕು.ಜನಪರವಾದ ಆಡಳಿತ ನೀಡಿದರೇ, ಜನರು ತಮ್ಮನ್ನು ಹಾಗೂ ನಮ್ಮ ಪಕ್ಷವನ್ನು ಗುರುತಿಸಿ ಬೆಂಬಲಿಸುತ್ತಾರೆ. ಸಿಕ್ಕಿರುವ ಅಧಿಕಾರದ ಅವಧಿಯಲ್ಲಿ ಉತ್ತಮ ಕಾರ್ಯಗಳನ್ನು ಕೈಗೊಳ್ಳುವುದು ತಮ್ಮ ಆದ್ಯ ಕರ್ತವ್ಯ.ಅಲ್ಲದೇ ಎಲ್ಲಾ ಸದಸ್ಯರ ಅಭಿಪ್ರಾಯಗಳನ್ನು ಕೇಳಿ ನಿರ್ಧಾರ ತೆಗೆದುಕೊಳ್ಳಿ.ಅಲ್ಲದೇ ನಗರದಲ್ಲಿ ಯಾವ ಅಭಿವೃದ್ಧಿ ಕಾಮಗಾರಿ ಸ್ಥಗಿತಗೊಂಡಿವೆ ಎಂಬುದನ್ನು ತಿಳಿಸಿ,ಅದನ್ನು ಪ್ರಾರಂಬಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೆನೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಜಗದೇವ ಗುತ್ತೆದಾರ, ಮುಖಂಡ ವಿಜಯಕುಮಾರ ರಾಮಕೃಷ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ, ಮಾಜಿ ನಗರಸಭೆಯ ಅಧ್ಯಕ್ಷ ಗಿರೀಶ ಕಂಬಾನೂರ, ಶರಣಗೌಡ ಪಾಟೀಲ ಗೋಳಾ, ಕುಮಾರ ಚವ್ಹಾಣ, ಹಾಷಮ್ ಖಾನ ಸೇರಿದಂತೆ ನಗರಸಭೆಯ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…