ಶಹಾಪುರ: ಸಮ್ಮಿಶ್ರ ಸರಕಾರ ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಇದು ಕೆಲಸಕ್ಕೆ ಬಾರದ ಸರಕಾರವಾಗಿದೆ ಎಂದು ಮಾಜಿ ಮುಖ್ಯಮಂತ್ರಿಗ ಬಿ.ಎಸ್. ಯಡಿಯೂರಪ್ಪ ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದರು.
ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಅನವಾರ ಗ್ರಾಮಕ್ಕೆ ಬರ ವೀಕ್ಷಣೆಗೆ ಆಗಮಿಸಿದ ಯಡಿಯೂರಪ್ಪ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿ ಮಾತನಾಡಿ, ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿ ಒಂದು ವರ್ಷ ಕಳೆದರೂ ಇಷ್ಟು ದಿನ ಯಾಕೆ ಸುಮ್ಮನೆ ಕುಳಿತಿದ್ದರು ಸೋಲಿನ ಭೀತಿಯಿಂದ ಕಂಗೆಟ್ಟು ಗ್ರಾಮ ವಾಸ್ತವ್ಯದ ನಾಟಕವಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾದ ಚಂದ್ರಶೇಖರಗೌಡ ಮಾಗನೂರು,ಗುಲ್ಬರ್ಗ ವಿಧಾನ ಪರಿಷತ್ತಿನ ಸದಸ್ಯರಾದ ಬಿ.ಜಿ. ಪಾಟೀಲ್ , ರಾಯಚೂರು ಲೋಕಸಭಾ ಸಂಸದರಾದ ಅಮರೇಶ್ ನಾಯಕ್, ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ, ಬಿಜೆಪಿಯ ಹಿರಿಯ ಮುಖಂಡರಾದ ಡಾ॥ ಚಂದ್ರಶೇಖರ್ ಸುಬೇದಾರ, ದೇವರಾಜ್ ನಾಯಕ್, ಹಾಗೂ ಸಂಗನಗೌಡ ಪಾಟೀಲ್ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…