20 ರಂದು ಗುಲಬರ್ಗಾ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವ

0
61

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ 38ನೇ ವಾರ್ಷಿಕ ಘಟಿಕೋತ್ಸವವನ್ನು ಶುಕ್ರವಾರ ನವೆಂಬರ್ 20ರಂದು ಬೆಳಿಗ್ಗೆ 11 ಗಂಟೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಜ್ಞಾನಗಂಗಾ ಆವರಣದಲ್ಲಿನ ಡಾ.ಬಿ.ಆರ್. ಅಂಬೇಡ್ಕರ ಭವನದಲ್ಲಿ ಜರುಗಲಿದೆ.

ರಾಜ್ಯದ ಘನತೆವೆತ್ತ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ವಜುಭಾಯ್ ರೂಡಾಭಾಯ್ ವಾಲಾ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸುವರು. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ. ಎಸ್. ಮಾಧೇಶ್ವರನ್ ಘಟಿಕೋತ್ಸವ ಭಾಷಣ ಮಾಡುವರು.

Contact Your\'s Advertisement; 9902492681

ಉಪಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರು ಹಾಗೂ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ಸಿ.ಎನ್. ಅಶ್ವಥ್ ನಾರಾಯಣ ಈ ಸಂದರ್ಭದಲ್ಲಿ ಉಪಸ್ಥಿತರಿರುವರು.

ಸರ್ಕಾರದ ನಿರ್ದೇಶನ ಮೇರೆಗೆ ಹಾಗೂ ಕೊರೋನಾ ವೈರಸ್ (ಕೋವಿಡ್-19) ಹರಡುತ್ತಿರುವ ಹಿನ್ನೆಲೆಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ 38ನೇ ವಾರ್ಷಿಕ ಘಟಿಕೋತ್ಸವವನ್ನು ಶುಕ್ರವಾರ ನವೆಂಬರ್ 20ರಂದು ಬೆಳಿಗ್ಗೆ 11 ಗಂಟೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಜ್ಞಾನಗಂಗಾ ಆವರಣದ ಡಾ.ಬಿ.ಆರ್. ಅಂಬೇಡ್ಕರ ಭವನದಲ್ಲಿ ಸರಳವಾಗಿ ಏರ್ಪಡಿಸಲು ನಿರ್ಧರಿಸಲಾಗಿದೆ.

ಮೇಲ್ಕಂಡ ದಿನದಂದು ಜರುಗುವ ಈ ಘಟಿಕೋತ್ಸವ ಕಾರ್ಯಕ್ರಮಕ್ಕೆ ಗಣ್ಯ ವ್ಯಕ್ತಿಗಳು, ದಾನಿಗಳು ಹಾಗೂ ಸಂಬಂಧಪಟ್ಟ ವಿದ್ಯಾರ್ಥಿಗಳ ಪೋಷಕರಿಗೆ ಭಾಗವಹಿಸಲು ಅವಕಾಶ ಇರುವುದಿಲ್ಲ. ಇದಕ್ಕೆ ಎಲ್ಲರೂ ಸಹಕರಿಸಬೇಕೆಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ. ಸಿ. ಸೋಮಶೇಖರ ಅವರು ಮನವಿ ಮಾಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here