ಕಲಬುರಗಿ: ಬಿಜೆಪಿ ಪಕ್ಷ ಬಡವರ ಪರವಾದ ಯೋಜನೆಗಳನ್ನು ರೂಪಿಸುವ ಮೂಲಕ ಸಾಮಾನ್ಯರ ನಾನಾ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಬಿಜೆಪಿ ಪಕ್ಷವು ಬಡವರ ಪಕ್ಷವಾಗಿದೆ ಎಂದು ಬಿಜೆಪಿ ಉತ್ತರ ಮಂಡಲ ಪ್ರಧಾನ ಕಾರ್ಯದರ್ಶಿಯಾದ ಬಿ. ಜಯ ಸಿಂಗ್ ಹೇಳಿದರು.
ಬಿಜೆಪಿ ಮುಖಂಡರಾದ ಚಂದು ಪಾಟೀಲ್ ಮಾರ್ಗದರ್ಶನದಲ್ಲಿ ಪತ್ರಿಕೆ ಹೇಳಿಕೆ ನೀಡಿದ ಅವರು ಮುಖ್ಯಮಂತ್ರಿ ಯಡಿಯೂರಪ್ಪ ನವರು ಜನರ ಕಲ್ಯಾಣಕ್ಕಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಜಿಲ್ಲೆಯ ಕ್ಷೇತ್ರದ ಅಭಿವೃದ್ಧಿಗೂ ರಾಜ್ಯ ಸರ್ಕಾರ ಕೋಟಿಗಟ್ಟಲೇ ಅನುದಾನವನ್ನು ಮಂಜೂರು ಮಾಡುತ್ತಿದೆ.
ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಪಕ್ಷವು ಎನ್ನದೇ ಆದ ಛಾಪು ಮೂಡಿಸಿದ್ದಲ್ಲದೇ , ಬಿಜೆಪಿ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಜನಸಾಮಾನ್ಯರ ನೋವು , ಸಂಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ.ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನಪ್ರಿಯ ಯೋಜನೆಗಳ ಮೂಲಕ ಜನಸಾಮಾನ್ಯರಲ್ಲಿ ನೆಲೆಸಿವೆ.ರಾಜ್ಯದಲ್ಲಿ ಕಾಂಗ್ರೆಸ್ ಮುಳುಗುತ್ತಿರುವ ಹಡಗಾಗಿದೆ , ಜೆಡಿಎಸ್ ಪಕ್ಷವಂತು ಆಟಕ್ಕುಂಟು ಲೆಕ್ಕಕಿಲ್ಲದಂತಾಗಿದೆ.
ಈಗೇನಿದ್ದರೂ ರಾಜ್ಯದಲ್ಲಿ ಬಿಜೆಪಿ ಪಕ್ಷದೇ ಹವಾ. ಮಸ್ಕಿ ಮತ್ತು ಬಸವಕಲ್ಯಾಣ ಕ್ಷೇತ್ರಗಳಲ್ಲಿ ನಡೆಯುವ ಉಪಚುನಾವಣೆಯಲ್ಲಿ ಗೆಲುವು ಬಿಜೆಪಿ ಅಭ್ಯರ್ಥಿಗಳದ್ದೇ ಆಗಲಿದೆ ಎಂದು ಭರವಸೆ ನೀಡಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…