ಆಳಂದ: ಮನುಷ್ಯ ವೈಚಾರಿಕವಾಗಿ ವಿಚಾರಿಸಲು ಶಕ್ತನಾದಾಗ ಅವನ ಹತ್ತಿರ ಜ್ಞಾನ ವೃದ್ಧಿಯಾಗಿ ಗಟ್ಟಿತನ ಬರಲು ಸಾಧ್ಯವಿದೆ ಎಂದು ಬಿಜೆಪಿಯ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಈಶ್ವರಸಿಂಗ್ ಠಾಕೂರ ಹೇಳಿದರು.
ಗುರುವಾರ ಪಟ್ಟಣದ ಎಸ್‌ಆರ್‌ಜಿ ಆಂಗ್ಲ್ ಮಾಧ್ಯಮ ಶಾಲಾ ಅವರಣದಲ್ಲಿ ಆಳಂದ ಮಂಡಲ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಅಭ್ಯಾಸ ವರ್ಗದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಭಾರತೀಯ ಜನತಾ ಪಕ್ಷ ಮಾತ್ರ ಸೈದ್ಧಾಂತಿಕ ತಳಹದಿಯ ಮೇಲೆ ವಿಚಾರಗಳನ್ನು ಇಟ್ಟುಕೊಂಡು ರಾಜಕೀಯ ಮಾಡುತ್ತಿದೆ ಉಳಿದ ಪಕ್ಷಗಳು ಕೇವಲ ಅಧಿಕಾರಕ್ಕಾಗಿ ಮಾತ್ರ ರಾಜಕೀಯ ಮಾಡುತ್ತಿವೆ ಎಂದು ಹೇಳಿದರು.
ಅಂತ್ಯೋದಯದ ಕಲ್ಪನೆಯ ಮೂಲಕ ಶ್ಯಾಮ ಪ್ರಸಾದ ಮುಖರ್ಜಿ, ಪಂಡಿತ ದೀನ್ ದಯಾಳ ಉಪಾಧ್ಯಾಯರ ಆಶಯಗಳನ್ನು ಪೊರೈಸುವಲ್ಲಿ ಭಾರತೀಯ ಜನತಾ ಪಕ್ಷ ಶ್ರಮಿಸುತ್ತಿದೆ. ಇಂದು ಬಿಜೆಪಿ ಇಷ್ಟು ಎತ್ತರದಲ್ಲಿ ಇರುವುದಕ್ಕೆ ಪ್ರಮುಖ ಕಾರಣ ಕಾರ್ಯಕರ್ತರು. ನಿಸ್ವಾರ್ಥ ಕಾರ್ಯಕರ್ತರೇ ಬಿಜೆಪಿಯ ಆಸ್ತಿಯಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಜಿ.ಪಂ ಸದಸ್ಯ ಹರ್ಷಾನಂದ ಗುತ್ತೇದಾರ ಪ್ರಾಸ್ತಾವಿಕವಾಗಿ ಮಾತನಾಡಿ, ಅಭ್ಯಾಸ ವರ್ಗದಿಂದ ಪದಾಧಿಕಾರಿಗಳಲ್ಲಿ ಹೊಸ ಚೈತನ್ಯ ಮೂಡಿದಂತಾಗಿದೆ ಇದರಿಂದ ಹೊಸ ವಿಷಯ ಅರಿತುಕೊಳ್ಳುವ ಸಾಮರ್ಥ್ಯ ಪದಾಧಿಕಾರಿಗಳಲ್ಲಿ ವೃದ್ಧಿಯಾಗಿದೆ ಎಂದು ನುಡಿದರು.
ಜಿ.ಪಂ ಅಧ್ಯಕ್ಷೆ ಸುವರ್ಣಾ ಹಣಮಂತರಾವ ಮಲಾಜಿ, ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಅಮರನಾಥ ಪಾಟೀಲ, ವಿದ್ಯಾಸಾಗರ ಕುಲಕರ್ಣಿ, ಹರ್ಷವರ್ಧನ ಗುಗಳೆ, ರಾಜಶೇಖರ ಮುತ್ತಗಾ ವೇದಿಕೆಯ ಮೇಲಿದ್ದರು.
ಜಿ.ಪಂ ಸದಸ್ಯರಾದ ಗುರುಶಾಂತ ಪಾಟೀಲ ನಿಂಬಾಳ, ಕಲಾವತಿ ಮಲ್ಲಣ್ಣ ನಾಗೂರೆ ಮುಖಂಡರಾದ ಹಣಮಂತರಾವ ಮಲಾಜಿ, ಸಂಜಯ ಮಿಸ್ಕಿನ್, ಸಂತೋಷ ಹಾದಿಮನಿ, ಅಶೋಕ ಗುತ್ತೆದಾರ, ಚೆನ್ನವೀರ ಪಾಟೀಲ, ನಿಜಲಿಂಗಪ್ಪ ಕೊರಳ್ಳಿ, ಶ್ರೀಶೈಲ ಪಾಟೀಲ, ರಾಜಶ್ರೀ ಖಜೂರಿ, ಗೌರಿ ಚಿಚಕೋಟಿ, ವೀರಣ್ಣ ಹತ್ತರಕಿ, ಸೇರಿದಂತೆ, ಜಿ.ಪಂ, ತಾ.ಪಂ, ಪುರಸಭೆ ಸೇರಿದಂತೆ ವಿವಿಧ ಸ್ತರದ ಚುನಾಯಿತ ಪ್ರತಿನಿಧಿಗಳು ಹಾಗೂ ಭಾರತೀಯ ಜನತಾ ಪಕ್ಷದ ವಿವಿಧ ಮೋರ್ಚಾದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಎರಡನೇ ದಿನ ವಿವಿಧ ವಿಷಯಗಳ ಕುರಿತು ೫ ಗೋಷ್ಟಿಗಳು ಜರುಗಿದವು. ಪ್ರಮುಖರು ವಿಷಯ ಮಂಡನೆ ಮಾಡಿದರು. ಮಂಡಲ ಅಧ್ಯಕ್ಷ ಆನಂದ ಪಾಟೀಲ ಸ್ವಾಗತಿಸಿದರು. ಪ್ರ.ಕಾರ್ಯದರ್ಶಿ ಪ್ರಕಾಶ ಮಾನೆ ನಿರೂಪಿಸಿದರು. ಮಲ್ಲಿಕಾರ್ಜುನ ಸಾವಳಗಿ ವಂದಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…