ಕಲಬುರಗಿ: ಸ್ಕಾರ್ಪಿಯೋ ಮತ್ತು ಕ್ರೂಸರ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಅಪಘಾತದ ತೀವ್ರತೆಗೆ ಸ್ಕಾರ್ಪಿಯೋ ವಾಹನ ನಾಲ್ಕಾರು ಪಲ್ಟಿ ಹೊಡೆದ ಘಟನೆ ಗುರುವಾರ ಬೆಳಗ್ಗೆ ಲಾಡ್ಲಾಪುರ ಗ್ರಾಮ ಹತ್ತಿರದ ರಾಷ್ಟ್ರೀಯ ಹೆದ್ದಾರಿ-೧೫೦ರಲ್ಲಿ ನಡೆದಿದೆ.
ವಾಡಿ ನಗರದಿಂದ ಯಾದಗಿರಿ ಕಡೆ ಹೊರಟಿದ್ದ ಸ್ಕಾರ್ಪಿಯೋ ವಾಹನದಲ್ಲಿ ಇಬ್ಬರು ಹಾಗೂ ಯಾದಗಿರಿಯಿಂದ ವಾಡಿ ಕಡೆ ಬರುತ್ತಿದ್ದ ಕ್ರೂಸರ್ ವಾಹನದಲ್ಲಿ ಸುಮಾರು ೧೫ ಜನ ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಲಾಡ್ಲಾಪುರ ಗ್ರಾಮದೊಳಗಿಂದ ಮುಖ್ಯ ರಸ್ತೆಗೆ ಬರುತ್ತಿದ್ದ ಕ್ರೂಸರ್ ವಾಹನವು ರಾಷ್ಟ್ರೀಯ ಹೆದ್ದಾರಿ ಮೂಲಕ ಅತಿ ವೇಗವಾಗಿ ಹೋಗುತ್ತಿದ್ದ ಸ್ಕಾರ್ಪಿಯೋ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಸ್ಕಾರ್ಪಿಯೋ ಪಲ್ಟಿಯಾಗಿ ವಾಹನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕ್ರೂಸರ್‌ನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು, ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಅತಿಯಾದ ವೇಗ ಮತ್ತು ಚಾಲಕರ ನಿಷ್ಕಾಳಜಿಯೇ ಘಟನೆಗೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…