ಬಿಸಿ ಬಿಸಿ ಸುದ್ದಿ

ಕಲಬುರಗಿ: 870 ಕ್ಕೂ ಹೆಚ್ಚು ಹಂದಿಗಳ ಸ್ಥಳಾಂತರ

ಕಲಬುರಗಿ: ಮಹಾನಗರ ಪಾಲಿಕೆಯಿಂದ ಹುಬ್ಬಳ್ಳಿ-ಧಾರವಾಡದ 20 ಜನರನ್ನೊಳಗೊಂಡ ಹಂದಿ ಹಿಡಿಯುವ ತಂಡವನ್ನು ಕರೆತಂದು ಕಲಬುರಗಿ ನಗರ ವಿವಿಧ ಬಡಾವಣೆಗಳಲ್ಲಿ ಬುಧವಾರ ಕಾರ್ಯಾಚರಣೆ ನಡೆಸಿ, ಸುಮಾರು 870ಕ್ಕೂ ಹೆಚ್ಚು ಹಂದಿಗಳನ್ನು ಹಿಡಿದು ಬೇರೆ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ ಅವರು ತಿಳಿಸಿದ್ದಾರೆ.

ನಗರದ ಕೇಂದ್ರ ಬಸ್ ನಿಲ್ದಾಣ, ಕಣ್ಣಿ ತರಕಾರಿ ಮಾರುಕಟ್ಟೆ, ಹಿರಾಪೂರ ವೃತ್ತ, ಲಕ್ಮೀ ನಗರ ಹೀರಾಪೂರ, ಕೋಲ್ಡ್ ಸ್ಟೋರೇಜ್, ಎಂ.ಎಸ್.ಕೆ. ಮಿಲ್ ಹತ್ತಿರ, ಮೌಲಾ ಅಲಿ ಕಟ್ಟೆ ಹಾಗೂ ಇಲಾಹಿ ಮಸೀದಿ ಹಾಗೂ ಇದರ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಬೀದಿ ಹಂದಿಗಳನ್ನು ಹಿಡಿದು ಸ್ಥಳಾಂತರಿಸಲಾಗಿದೆ. ಮುಂದಿನ ದಿನಗಳಲ್ಲಿಯೂ ಈ ತರಹದ ಕಾರ್ಯಕ್ರಮವನ್ನು ರೂಪಿಸಿ ನಗರದಿಂದ ಹಂದಿಗಳ ಹಾವಳಿಯನ್ನು ನಿಯಂತ್ರಸಲು ಕ್ರಮವನ್ನು ತೆಗೆದುಕೊಳ್ಳಲಾಗುವುದು. ನಗರದಲ್ಲಿ ಹಂದಿ ಹಿಡಿಯಲು ಹುಬ್ಬಳ್ಳಿ-ಧಾರವಾಡದಿಂದ ತಂಡ ಕರೆ ತರಲಾಗಿದೆ.

ಕಲಬುರಗಿ ಮಹಾನಗರ ಪಾಲಿಕೆಯ ಹಿರಿಯ ಪಶುವೈದ್ಯಾಧಿಕಾರಿ ಡಾ. ಮಹ್ಮದ್ ಸಖಾವತ ಹುಸೇನ, ಹಿರಿಯ ಪಶು ವೈದ್ಯಕೀಯ ಪರೀಕ್ಷಕ ಹಣಮಂತ ಹಬ್ಶಿಯಾಳ, ನೈರ್ಮಲ್ಯ ನಿರೀಕ್ಷಕ ನಾಗರಾಜ, ಬಸವರಾಜ ಪಾಣೆಗಾಂವ ಹಾಗೂ ಈ ತಂಡದ ಮುಖ್ಯಸ್ಥ ದುರ್ಗಪ್ಪ ನೇತೃತ್ವದಲ್ಲಿ ಈ ಕಾರ್ಯಾಚರಣೆ ಇದ್ದರು.

emedialine

View Comments

Recent Posts

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

52 mins ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

14 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

14 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

16 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

16 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

16 hours ago