ಧಾರವಾಡ: ಈ ವೇಳೆ ಮಾತನಾಡಿ ಸುಮಾರು 10 ವರ್ಷಗಳಿಂದ ಪಿಂಜಾರ ಸಮುದಾಯದಿಂದ ಹೋರಾಟ ಮಾಡುತ್ತಾ ಬಂದರು ನಮ್ಮ ಸಮುದಾಯಕ್ಕೆ ನ್ಯಾಯ ಸಿಗುತ್ತಿಲ್ಲ. ಇತ್ತೀಚಿಗೆ ಮರಾಠ ಹಾಗೂ ಬಹುಸಂಖ್ಯಾತರ ವೀರಶೈವ ಲಿಂಗಾಯತ ನಿಗಮಕ್ಕೂ ಹೆಚ್ಚಿನ ಒತ್ತು ನೀಡಿದೆ. ಇದೇ ರೀತಿ ಪಿಂಜಾರ ಅಭಿವೃದ್ದಿ ನಿಗಮಕ್ಕೂ ಆದೇಶ ನೀಡಬೇಕು ಇಲ್ಲಾದರೆ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆಂದು ಕರ್ನಾಟಕ ಪಿಂಜಾರ, ನದಾಫ, ಮನ್ಸೂರಿ ಸಂಘಗಳ ಮಹಾಮಂಡಳದ ರಾಜ್ಯಾಧ್ಯಕ್ಷ ಡಾ.ಅಬ್ದುಲರಝಾಕ ನದಾಫ ಹೇಳಿದರು.
ನಗರದ ಪತ್ರಿಕಾಗೋಷ್ಠಿಯಲ್ಲಿ ಪಿಂಜಾರ ಅಭಿವೃದ್ದಿ ನಿಗಮಕ್ಕೆ ಒತ್ತಾಯಿಸಿ ಮಾತನಾಡಿ, ಪಿಂಜಾರ ಅಭಿವೃದ್ದಿ ನಿಗಮಕ್ಕೆ ಹೋರಾಟ ಮಾಡುತ್ತಾ ಬಂದರು ಸಹ ಇಲ್ಲಿಯವರಿಗೂ ನಮ್ಮ ಸಮುದಾಯವನ್ನು ನಿರ್ಲಕ್ಷಿಸುತ್ತಾ ಬಂದಿರುವುದಾದರೂ ಏಕೆ ? ಇದನ್ನು ನಮ್ಮ ಸಮುದಾಯದಿಂದ ತೀವೃವಾಗಿ ಖಂಡಿಸುತ್ತೇವೆಂದು ಹೇಳಿದರು.
ರಾಜ್ಯದಲ್ಲಿ ಮುಸ್ಲಿಂ ಜನಸಂಖ್ಯೆಯ ಅರ್ಧದಷ್ಟು ಪಿಂಜಾರ ನದಾಫ, ಮನ್ಸೂರಿ, ದುದೇಕುಲಾ ಸಮುದಾಯವಿದ್ದು ಈವರಿಗೆ ಶಿಕ್ಷಣ, ಉದ್ಯೋಗ ಸೇರಿದಂತೆ ಇತರೆ ಸೌಲಬ್ಯಗಳಿಂದ ವಂಚಿತರಾಗಿದ್ದಾರೆ ಎಂದು ತಿಳಿಸಿದರು.
ಅಲೆಮಾರಿ ಪಿಂಜಾರ್, ನದಾಫ್, ಜನಸಂಖ್ಯೆಗೆ ಸದ್ಯ ಪ್ರ ವರ್ಗ-1 ಕ್ಕೆ ಮೀಸಲಾತಿ ಸೌಲಬ್ಯಗಳು ರಾಜ್ಯದಲ್ಲಿ ಎಲ್ಲ ಜಿಲ್ಲೆಯಲ್ಲಿ ಸಿಗುತ್ತಿಲ್ಲ. ಶೈಕ್ಷಣಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ತೀರಾ ಹಿಂದುಳಿದ ಈ ಸಮುದಾಯದ ವಾಸ್ತವ ಸ್ಥಿತಿಯನ್ನು ಹಿಂದುಳಿದ ವರ್ಗಗಳ ಆಯೋಗವು 2010 ರಲ್ಲಿ ಡಾ.ಸಿ.ಎಸ್. ದ್ವಾರಕನಾಥ ರವರು ಸಲ್ಲಿಸಿದ ವರದಿಯಲ್ಲಿ ತೆರೆದಿಟ್ಟಿದೆ. ಪಿಂಜಾರ/ನದಾಫ್ ಸಮುದಾಯದ ಉಳಿವು ಮತ್ತು ಬೆಳವಣಿಗೆಗೆ ಪಿಂಜಾರ/ನದಾಫ್ ಅಭಿವೃದ್ಧಿ ನಿಗಮ ಸ್ಥಾಪನೆ ಅನಿವಾರ್ಯ ಎಂದು ವರದಿಯಲ್ಲಿ ಸ್ಪಷ್ಟವಾಗಿ ಹೇಳಿದೆ.
ಪಿಂಜಾರ ಅಭಿವೃದ್ದಿ ನಿಗಮದಿಂದ ಸಮುದಾಯದ ಆರ್ಥಿಕ ಪರಿಸ್ಥಿತಿ ಸುದಾರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆಂದು ಆಶಯ ವ್ಯಕ್ತಪಡಿಸಿದರು. ಕರ್ನಾಟಕ ಪಿಂಜಾರ್ ನದಾಫ್ ಮನ್ಸೂರಿ ಸಂಘಗಳ ಮಹಾಮಂಡಳದ ವತಿಯಿಂದ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಇವರ ಮುಕಾಂತರ ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರಿಗೆ ರಾಜ್ಯಾಧ್ಯಕ್ಷ ಡಾ. ಅಬ್ದುಲ್ ರಜಾಕ್ ನದಾಫ್ ಹಾಗೂ ಪ್ರಮುಖರು ಮನವಿ ನೀಡಿದರು.
ಜಿಲ್ಲಾ ಅಧ್ಯಕ್ಷ ಮಹಮ್ಮದ್ ಗೌಸ್ ಪಿಂಜಾರ್, ನಬಿಸಾಬ್ ನದಾಫ್, ನ್ಯಾಯವಾದಿ ಬಿ. ಕೆ ನದಾಫ್, ಎಂ ಕೆ ನದಾಫ್, ಬಸಿರಾ ತೀರಲಾಪುರ, ಮಹಮ್ಮದ್ ಶರೀಪ್ ನದಾಫ್, ಗೌಸಸಾಬ್ ಡಿ ನದಾಫ್, ಶಕೀಲ್ ಗೊರವನಕೊಳ್ಳ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಹಜರತಸಾಬ್ ನದಾಫ್, ನಾಹೀಮ್ ನದಾಫ್, ಅನ್ವರ್ ನದಾಫ್, ಜಾವಿದ್ ನದಾಫ್ ರಾಜು ಕೊಣ್ಣೂರ್ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…