ಬೆಂಗಳೂರು: ಲಾಕ್‌ಡೌನ್ ಪ್ರಾರಂಭ ಆದಾಗಿನಿಂದ ನಯಾ ಪೈಸೆ ಸಂಬಳ ಕೊಡದೆ ರಾಜ್ಯ ಬಿಜೆಪಿ ಸರ್ಕಾರ ಅತಿಥಿ ಉಪನ್ಯಾಸಕರನ್ನು ಉಪವಾಸ ಕೆಡವಿದೆ. ನವೆಂಬರ್ 30ರ ಒಳಗೆ ಅತಿಥಿ ಉಪನ್ಯಾಸಕರ ಖಾತೆಗೆ ಸಂಬಳ ಜಮೆ ಮಾಡದಿದ್ದರೆ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಆಮ್ ಆದ್ಮಿ ಪಕ್ಷದ ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಲಕ್ಷ್ಮಿಕಾಂತ್ ರಾವ್ ಎಚ್ಚರಿಕೆ ನೀಡಿದ್ದಾರೆ.
ಶುಕ್ರವಾರ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ವೇತನ ಸಿಗದೆ ಅತಿಥಿ ಉಪನ್ಯಾಸಕರು ಬಹಳ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ನವೆಂಬರ್ 30ರ ಒಳಗೆ ಅತಿಥಿ ಉಪನ್ಯಾಸಕರ ಖಾತೆಗೆ ಸಂಬಳ ಜಮೆ ಮಾಡದಿದ್ದರೆ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.
ಅತಿಥಿ ಉಪನ್ಯಾಸಕ ಚನ್ನಬಸಪ್ಪ ರೇವಡಿ ಮಾತನಾಡಿ, ಲಾಕ್‌ಡೌನ್ ಪ್ರಾರಂಭ ಆದಾಗಿನಿಂದ ನಯಾ ಪೈಸೆ ಸಂಬಳ ಕೊಡದೆ ರಾಜ್ಯ ಬಿಜೆಪಿ ಸರ್ಕಾರ ಅತಿಥಿ ಉಪನ್ಯಾಸಕರನ್ನು ಉಪವಾಸ ಕೆಡವಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ನಮ್ಮ ಸಂಬಳ ಕೊಡಿ ಇಲ್ಲ ಪ್ರಾಣ ಬಿಡಲು ಅನುಮತಿ ಕೊಡಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಸರಿಯಾಗಿ ಸಂಬಳ ಸಿಗದೆ 23 ಜನ ಉಪನ್ಯಾಸಕರು ಜೀವ ಬಿಟ್ಟಿದ್ದಾರೆ, ನಿಮಗೆ ಇನ್ನೆಷ್ಟು ಜೀವ ಬೇಕು ಎಂದು ಪ್ರಶ್ನಿಸಿದರು.
ಅತಿಥಿ ಉಪನ್ಯಾಸಕ ಎಲ್.ಎನ್.ರೆಡ್ಡಿ ಮಾತನಾಡಿ, ಇಂತಹ ಸಂಕಷ್ಟದ ಸಮಯದಲ್ಲಿ ಕೈಹಿಡಿಯದ ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರಿಯಾಗಿ ಸಂಬಳ ನೀಡಿ ಎಂದು ಹೇಳಿ ಸರ್ಕಾರದ ಅಡಿಯಲ್ಲಿ ದುಡಿಯುತ್ತಿರುವ ನಮಗೆ ಮೋಸ ಮಾಡುತ್ತಿದೆ. ಈಗಾಗಲೇ ಕಾಲೇಜುಗಳು ಪ್ರಾರಂಭವಾಗಿದ್ದು ಮತ್ತೆ ನಮ್ಮನ್ನು ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದು ಹೇಳಿದ ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ ಅವರು ವಚನ ಭ್ರಷ್ಟರಾಗಿದ್ದಾರೆ ಎಂದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…