ಬಿಸಿ ಬಿಸಿ ಸುದ್ದಿ

ಸುರಪುರ ನಗರದಲ್ಲಿ ಭರದಿಂದ ಸಾಗಿದ ’ಯಾರ್ ಮಗಾ’ ಸಿನೆಮಾದ ಚಿತ್ರೀಕರಣ

ಸುರಪುರ: ನಮ್ಮ ಕಲ್ಯಾಣ ಕರ್ನಾಟಕ ಭಾಗದ ಕಲಾವಿದರು ಮತ್ತು ನಾಯಕ ನಟರಿಗೆ ಅವಕಾಶಗಳು ತುಂಬಾ ಕಡಿಮೆ ಇಂತಹ ಸಂದರ್ಭದಲ್ಲಿ ಬೆಂಗಳೂರಲ್ಲಿಯೆ ನೆಲೆಸಿ ಇಂದು ಕನ್ನಡ ಚಿತ್ರರಂಗದಲ್ಲಿ ಪಾದಾರ್ಪಣೆ ಮಾಡಿ ಯಾರ್ ಮಗಾ ಎಂಬ ಹೆಸರಿನ ಸಿನೆಮಾ ಮೂಲಕ ಬೆಳ್ಳಿ ತೆರೆಗೆ ಕಾಲಿಡುತ್ತಿರುವ ಪಡಕೋಟೆ ಬ್ಯಾನರ್ ಹಾಗು ನಟ ಶಿವಾಜಿ ಪಡಕೋಟೆಯವರಿಗೆ ಒಳ್ಳೆಯದಾಗಲೆಂದು ಹಾರೈಸುವುದಾಗಿ ಬಿಜೆಪಿ ಪಕ್ಷದ ಮುಖಂಡ ಬಲಭೀಮ ನಾಯಕ ಬೈರಿಮಡ್ಡಿ ಮಾತನಾಡಿದರು.

ನಗರದ ಯಲ್ಲಪ್ಪ ಬಾವಿ ಬಳಿಯಲ್ಲಿ ನಡೆಸಲಾಗುತ್ತಿರುವ ಯಾರ್ ಮಗಾ ಸಿನೆಮಾದ ಚಿತ್ರೀಕರಣಕ್ಕೆ ಕ್ಯಾಮರಾ ಬಟನ್ ಒತ್ತುವ ಮೂಲಕ ಚಾಲನೆ ನೀಡಿ ಮಾತನಾಡಿ,ಆದಷ್ಟು ಬೇಗ ಸಿನೆಮಾ ತೆರೆಕಂಡು ಎಲ್ಲರನ್ನು ರಂಜಿಸುವ ಜೊತೆಗೆ ಸಮಾಜಕ್ಕೆ ಒಂದು ಉತ್ತಮ ಸಂದೇಶ ನೀಡುವ ಮೂಲಕ ಯುವಕರ ಬದಲಾವನೆಗೆ ಮುನ್ನುಡಿಯಾಗಲಿ ಎಂದು ಹಾರೈಸಿದರು.

ಇದೇ ಸಂದರ್ಭದಲ್ಲಿ ಕರವೇ ರಾಜ್ಯ ಪ್ರಧಾನ ಸಂಚಾಲಕ ಬಸವರಾಜ ಪಡಕೋಟೆ ಮಾತನಾಡಿ,ಇಂದು ನಮ್ಮ ಮನೆಯ ಮಗ ಶಿವಾಜಿ ಪಡಕೋಟೆ ಸಿನೆಮಾ ರಂಗದ ಮೂಲಕ ನಮ್ಮ ಕಲ್ಯಾಣ ಕರ್ನಾಟಕ ಜೊತೆಗೆ ವಿಶೇಷವಾಗಿ ಸಗರ ನಾಡಿನ ಹೆಸರನ್ನು ಬೆಂಗಳೂರು ಮಟ್ಟದಲ್ಲಿ ತನ್ನ ನಟನೆಯ ಮೂಲಕ ಎತ್ತಿ ಹಿಡಿಯಲು ಮುಂದಾಗಿದ್ದಾನೆ,ಅವನಿಗೆ ಎಲ್ಲರು ಚಿತ್ರ ವೀಕ್ಷಿಸುವ ಮೂಲಕ ಹರಸಿ ಬೆಳಸುವಂತೆ ವಿನಂತಿಸಿದರು.

ಈ ಸಂದರ್ಭದಲ್ಲಿ ಸಗರನಾಡು ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ ಅಂಗಡಿ ಶ್ರೀಗುರು ಸೇವಾ ಸಂಸ್ಥೆಯ ಅಧ್ಯಕ್ಷ ಮಲ್ಲು ಬಾದ್ಯಾಪುರ ನಟ ಶಿವಾಜಿ ಪಡಕೋಟೆ ಬೆಂಕಿ ದೊರೆ ಸೇರಿದಂತೆ ಯಾರ್ ಮಗಾ ಚಿತ್ರ ತಂಡ ಇನ್ನಿತರರು ಉಪಸ್ಥಿತರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

9 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

9 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

9 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago