ವಿಶ್ವ ಮಕ್ಕಳ ದಿನಾಚರಣೆ ಸರಳವಾಗಿ ಆಚರಣೆ

ಕೋಲಾರ: ತಾಲೂಕಿನ ನರಸಾಪುರ ಹೋಬಳಿಯ ಜೋಡಿಕೃಷ್ಣಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಮಕ್ಕಳ ದಿನಾಚರಣೆಯ ಜೊತೆಗೆ ಪರಿಸರ ಸಂರಕ್ಷಣೆ ಹಾಗೂ ನೀರಿನ ಮಹತ್ವದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮವನ್ನು ಸ್ಪಿರುಲಿನಾ ಚಿಕ್ಕಿ ಯನ್ನು ” ಸ್ವಸ್ತಿ ” ಸಂಸ್ಥೆ ವತಿಯಿಂದ ಅಫೌಷ್ಟಿಕತೆಯ ಮಕ್ಕಳಿಗೆ ವಿತರಣೆ ಮಾಡಲಾಯಿತು. ಕಾರ್ಯಕ್ರಮವನ್ನು ಸ್ಪಿರುಲಿನಾ ಸಂಸ್ಥೆಯ ಮಹೇಶ್ ಕುಮಾರ್ ರವರು ದೀಪ ಬೆಳಗುವ ಮೂಲಕ ಉದ್ಘಾಟನೆ ಮಾಡಿ ಮಾತನಾಡಿದ ಇವರು ಪ್ರಪಂಚದಲ್ಲಿ ನವೆಂಬರ್ 20ರಂದು ವಿಶ್ವ ಮಕ್ಕಳ ದಿನಾಚರಣೆಯನ್ನು ಪ್ರತಿವರ್ಷ ಆಚರಿಸುವರು. ಈ ದಿನವನ್ನು ಬಾಲ್ಯದ ಹೆಸರಿನಲ್ಲಿ ಆಚರಿಸಲಾಗುವುದು. ಮಕ್ಕಳ ದಿನವನ್ನು 1959ಕ್ಕೆ ಮೊದಲು ಜಗತ್ತಿನಾದ್ಯಂತ ಅಕ್ಟೋಬರ್ ತಿಂಗಳಲ್ಲಿ ಆಚರಿಸುತ್ತಿದ್ದರು.
ಈ ದಿನವನ್ನು ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯು ತೀರ್ಮಾನಿಸಿದಂತೆ ಪ್ರಥಮ ಬಾರಿಗೆ 1954 ರಲ್ಲಿ ಆಚರಿಸಲಾಯಿತು. ಇದನ್ನು ಮೂಲಭೂತ ಉದ್ದೇಶ ಸಮುದಾಯದ ವಿನಿಮಯದ ಹೆಚ್ಚಳ ಮತ್ತು ಮಕ್ಕಳ ತಿಳುವಳಿಕೆ ಜಾಸ್ತಿ ಮಾಡುವುದು ಅಲ್ಲದೆ ಮಕ್ಕಳಿಗೆ ಅನುಕೂಲವಾದ ಕಲ್ಯಾಣ ಕಾರ್ಯಕ್ರಮಗಳನ್ನು ಉತ್ತೇಜಿಸಲು ಜಗತ್ತಿನಾದ್ಯಂತ ವಿಶ್ವ ಮಕ್ಕಳ ದಿನಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ತಿಳಿಸಿದರು.

ಶಾಲೆಯ ಮುಖ್ಯ ಶಿಕ್ಷಕರಾದ ಎನ್ ಎಂ ಮುನಿರಾಜ್ ರವರು ಮಾತನಾಡಿ ಮಕ್ಕಳ ದಿನಾಚರಣೆಯನ್ನು ವಿಶ್ವಾದ್ಯಂತ 1953 ಅಕ್ಟೋಬರ್ ನಲ್ಲಿ ಆಚರಿಸಲಾಯಿತು. ಇದನ್ನು ಜಿನೆವಾದಲ್ಲಿನ ಅಂತರಾಷ್ಟ್ರೀಯ ಮಕ್ಕಳ ಕಲ್ಯಾಣ ಸಮಿತಿಯು ಪ್ರಾಯೋಜಿಸಿತು. ನವೆಂಬರ್ 20 ವಿಶ್ವ ಮಕ್ಕಳ ದಿನಾಚರಣೆ ಮಾಡಲು ಘೋಷಣೆ ಮಾಡಿತು. ಪ್ರಪಂಚದ ಎಲ್ಲಾ ರಾಷ್ಟ್ರಗಳು ಇದನ್ನು ಆಚರಿಸಲು ಪ್ರೋತ್ಸಹಿಸಿತು. ಮಕ್ಕಳಲ್ಲಿ ಪರಸ್ಪರ ವಿನಿಮಯ ಮತ್ತು ಅರಿವು ಹೆಚ್ಚಿಸಲು ಮತ್ತು ಮಕ್ಕಳ ಕಲ್ಯಾಣ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಇಡೀ ಭಾರತದಲ್ಲಿ ಕೊರೋನ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನರಸಾಪುರ ಹೋಬಳಿಯ ಜೋಡಿಕೃಷ್ಣಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರಳವಾಗಿ ಆಚರಿಸಲಾಯಿತು ಇದರ ಜೊತೆಗೆ ಪರಿಸರ ಸಂರಕ್ಷಣೆ ಹಾಗೂ ನೀರಿನ ಮಹತ್ವದ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಎನ್ ಎಂ ಮುನಿರಾಜ್. ಸ್ಪಿರುಲಿನಾ ಸಂಸ್ಥೆಯ ಮಹೇಶ್ ಕುಮಾರ್. ಎಸ್ ಡಿ ಎಂ ಸಿ ಅಧ್ಯಕ್ಷರಾದ ಮಂಜುನಾಥ್. ಭಾಗ್ಯಲಕ್ಷ್ಮಿ. ಮುನಿರತ್ನಮ್ಮ. ಬೆಳ್ಳೂರು ಗ್ರಾಮ ಪಂಚಾಯ್ತಿಯ ಸದಸ್ಯರಾದ ಕೃಷ್ಣಪ್ಪ. ಸಿಂಧ್ಯಾ. ರಿಜಿ. ವೆಂಕಟೇಶ್. ಸಂತೋಷ್. ಹಾಗೂ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

emedialine

Recent Posts

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

46 mins ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

12 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

14 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

14 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

14 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420