ಬಿಸಿ ಬಿಸಿ ಸುದ್ದಿ

ಕಲೆಯಿಂದ ಧರ್ಮ, ಸಂಪ್ರದಾಯ ಜೀವಂತಗೊಳಿಸಲು ಸಾಧ್ಯ: ಡಾ. ಗಣೇಶ ತರತರೆ

ಕಲಬುರಗಿ: ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕಲೆಯನ್ನು ಅನ್ವಯಿಸಿಕೊಂಡಾಗ ನಮ್ಮ ಧರ್ಮ, ಸಂಪ್ರದಾಯವನ್ನು ಜೀವಂತಗೊಳಿಸಲು ಸಾಧ್ಯ ಎಂದು ಮುಂಬೈ ಜೆಜೆ ಶಾಲೆಯ ಪ್ರಾಧ್ಯಾಪಕರಾದ ಡಾ. ಗಣೇಶ ತರತರೆ ಅಭಿಪ್ರಾಯ ಪಟ್ಟರು.

ನಗರದ ಶರಣಬಸವ ವಿಶ್ವವಿದ್ಯಾಲಯದಲ್ಲಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ, ಪೂಜ್ಯ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜೀ ಹಾಗೂ ಪೂಜ್ಯ ಚಿ. ದೊಡ್ಡಪ್ಪ ಅಪ್ಪಾಜಿಯವರ ಜನ್ಮದಿನೋತ್ಸವ ನಿಮಿತ್ತ ಶರಣಬಸವ ವಿಶ್ವವಿದ್ಯಾಲಯ, ಶರಣಬಸವೇಶ್ವರ ಕಲಾ ಮಹಾವಿದ್ಯಾಲಯ ಹಾಗೂ ಗೋದುತಾಯಿ ದೊಡ್ಡಪ್ಪ ಅಪ್ಪಾ ಪದವಿ ಕಲಾ ಮತ್ತು ವಾಣೀಜ್ಯ ಪದವಿ ಮಹಿಳಾ ಮಹಾವಿದ್ಯಾಲಯದ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ, ರಾಷ್ಟ್ರೀಯ ಮಟ್ಟದ ಶಿಬಿರ, ವೆಬಿನಾರ್ ಮತ್ತು ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮದ ಪ್ರಧಾನ ವಿಷಯದ ಬಗ್ಗೆ ಆನ್‌ಲೈನ್ ಮೂಲಕ ಮಾತನಾಡಿದ ಅವರು, ಕೌಶಲ್ಯ ಮತ್ತು ಕಲೆಗೆ ಅವಿನಾಭ ಸಂಬಂಧವಿದೆ. ಕೌಶಲ್ಯಗಳಿಲ್ಲದ ಕಲೆಯಿಲ್ಲ. ಕಲೆಯ ಮೂಲಕ ಮಕ್ಕಳಲ್ಲಿ ವಿಶಿಷ್ಟವಾದ ಕೌಶಲ್ಯಗಳನ್ನು ವೃದ್ಧಿಗೊಳಿಸಬಹುದು ಎಂದರು.

ಪ್ರತಿಯೊಬ್ಬರು ಕಲೆಯಿಲ್ಲದೇ ಸಂತೋಷದ ಜೀವನ ಕಳೆಯಲು ಸಾಧ್ಯವಿಲ್ಲ. ಮನುಷ್ಯನಿಗೆ ಕಲೆ ಸಂತೋಷವನ್ನು ತಂದುಕೊಡುತ್ತೆ. ಕಲೆ ಜೀವನದ ವಿಶಿಷ್ಟ ಹಂತಗಳನ್ನು ಪರಿಚಯಿಸುತ್ತೆ ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವಿವಿ ಕುಲಸಚಿವ ಕಾ. ಅನೀಲಕುಮಾರ ಬಿಡವೆ ಮಾತನಾಡಿ, ಕೇವಲ ಯಾವುದೇ ಒಂದು ಕೌಶಲ್ಯದಿಂದ ಉದ್ಯೋಗದಲ್ಲಿ ಮುಂದುವರೆಯಲು ಸಾಧ್ಯವಿಲ್ಲ. ಪ್ರತಿಯೊಬ್ಬರು ವಿಶಿಷ್ಟವಾದ ಕೌಶಲ್ಯಗಳನ್ನು ಬೆಳಸಿಕೊಂಡಾಗ ಮಾತ್ರ ತಮ್ಮ ವ್ಯಕ್ತಿತ್ವವನ್ನು ಇತರೆ ಕಾರ್ಯಕ್ಷೇತ್ರದಲ್ಲಿ ಸ್ಥಿರಗೊಳಿಸಿಕೊಳ್ಳಲು ಸಾಧ್ಯ ಎಂದರು.

ಹೊಸತನಕ್ಕೆ ಸಮಾಜ ಹೊಂದಿಕೊಳ್ಳುತ್ತದೆ. ವಿದ್ಯಾರ್ಥಿಗಳ ಕಲಿಕೆಯಲ್ಲಿ ಹೊಸ ಹೊಸ ಆಯ್ಕೆಯ ವಿಷಯಗಳನ್ನು ಸೇರ್ಪಡೆಗೊಳಿಸುವ ಮೂಲಕ ಅವರ ಕಲಿಕೆಯ ಸಾಮರ್ಥ್ಯವನ್ನು ವೃದ್ಧಿಗೊಳಿಸಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು ಎಂದರು.
ವಿಭಾಗ ಡೀನ್‌ರಾದ ಡಾ. ಶಾಂತಲಾ ನಿಷ್ಠಿ ಸ್ವಾಗತಿಸಿ, ಕಲೆಯೆಂಬುದು ಮಕ್ಕಳಲ್ಲಿ ಕಲಿಕೆಯ ಅನುಭವ ನೀಡುತ್ತದೆ. ವಿದ್ಯಾರ್ಥಿಗಳಲ್ಲಿ ಕ್ರೀಯಾತ್ಮಕ ಚಟುವಟಿಕೆಗಳನ್ನು ವೃದ್ಧಿಗೊಳಿಸುತ್ತದೆ ಮತ್ತು ವಿಶಿಷ್ಟ ಕೌಶಲ್ಯ ಸಾಮರ್ಥ್ಯ ಹೆಚ್ಚಿಸುತ್ತದೆ ಎಂದರು.

ವಿಭಾಗದ ಚೆರ್‌ಪರ್ಸರಾದ ಡಾ. ಸುಬ್ಬಯ್ಯ ಎಂ. ನೀಲಾ ಮಾತನಾಡಿ, ಕಲೆಯನ್ನು ಜನರ ಮನ ಮುಟ್ಟಿಸುವ ಉದ್ದೇಶದಿಂದ ಚಿತ್ರಕಲಾ ಶಿಬಿರ, ಚಿತ್ರಕಲಾ ಪ್ರದರ್ಶನ ಹಮ್ಮಿಕೊಳ್ಳಲಾಗುತ್ತದೆ. ಪೂಜ್ಯ ಅಪ್ಪಾಜಿಯವರು ಕಲೆ, ಸಂಗೀತ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಹೆಚ್ಚಿನ ಆಸಕ್ತಿ ಹೊಂದಿರುವ ಪರಿಣಾಮ ಕಲೆ ವಿಭಾಗದ ಶಿಕ್ಷಣ ಸ್ನಾತಕೋತ್ತರ ಮತ್ತು ಪಿ.ಎಚ್.ಡಿ ಹಂತಕ್ಕೆ ತಲುಪಿದೆ ಎಂದರು.

ಪ್ರೊ. ಗಾಯಿತ್ರಿ ಕಲ್ಯಾಣ ನಿರೂಪಿಸಿದರು. ವಿದ್ಯಾರ್ಥಿ ಮಲ್ಲಿಕಾರ್ಜುನ ವಸ್ತ್ರದ ಮಠ್ ಪ್ರಾರ್ಥನೆ ಗೀತೆ ಹಾಡಿದರು. ಪ್ರ. ವೀಣಾ ಜೆ. ಮಠ ವಂದಿಸಿದರು. ಪ್ರೊ. ಪಂಚಶೀಲಾ ಅಪ್ಪಾ ಹಾಗೂ ಪ್ರೊ. ನಿಜಂಲಿಂಗ ಅತಿಥಿ ಪರಿಚಯ ಮಾಡಿದರು. ವಿವಿ. ಸಮಕುಲಪತಿ ಡಾ. ವಿ.ಡಿ ಮೈತ್ರಿ ಚಿತ್ರಕಲಾ ಪ್ರದರ್ಶನವನ್ನು ಉದ್ಘಾಟಿಸಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

9 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

11 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

18 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

18 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

19 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago