ಕಲಬುರಗಿ: ರಾಜ್ಯ ಸರ್ಕಾರವು ಮರಾಠಾ ಅಭಿವೃದ್ಧಿ ಪ್ರಾಧಿಕಾರವನ್ನು ಕೂಡಲೆ ರದ್ದುಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನಾ ಪ್ರದರ್ಶನ ಮಾಡಿದರು.
ಪ್ರತಿಭಟನೆಕಾರರು ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ, ಉತ್ತರ ಕರ್ನಾಟಕವು ಪ್ರಸ್ತುತ ಸಂದರ್ಭದಲ್ಲಿ ಅತಿವೃಷ್ಟಿ ಹಾಗೂ ನೆರೆ ಹಾವಳಿಯಿಂದ ಕೊಚ್ಚಿ ಹೋಗಿದೆ. ಬೆಳೆಗಳು ನಾಶವಾಗಿವೆ. ಸಂತ್ರಸ್ತ ಪ್ರವಾಹ ಪೀಡಿತರಿಗೆ ಹಾಗೂ ರೈತರಿಗೆ ನೆರವು ನೀಡದೇ ಸರ್ಕಾರವು ಮರಾಠಾ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸುವ ಮೂಲಕ ಮರಾಠಿಗರನ್ನು ಓಲೈಸಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.
ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ಮರಾಠಿಗರು ಸಹ ಸ್ವಾಗತಿಸಿಲ್ಲ. ಪ್ರಾಧಿಕಾರ ರಚನೆಯಿಂದ ವಿಜಯೋತ್ಸವ ಆಚರಿಸಿದ್ದು ಎಲ್ಲಿಯೂ ಕಂಡುಬಂದಿಲ್ಲ. ಇದರಿಂದಾಗಿ ಪ್ರಾಧಿಕಾರ ರಚನೆ ಮರಾಠಿಗರಿಗೆ ಅಗತ್ಯವಿಲ್ಲ. ಅವರ ಬೇಡಿಕೆಗಳನ್ನು ಇಡೇರಿಸದೇ ಪ್ರಾಧಿಕಾರ ರಚಿಸಿದ್ದು ಸರಿಯಲ್ಲ ಎಂದು ಅವರು ವಿರೋಧಿಸಿದರು.
ಕೂಡಲೇ ಮರಾಠಾ ಪ್ರಾಧಿಕಾರವನ್ನು ರದ್ದುಪಡಿಸಿ, ಬಿಡುಗಡೆ ಮಾಡಿರುವ ೫೦ ಕೋಟಿ ರೂ.ಗಳ ಅನುದಾನವನ್ನು ಅತಿವೃಷ್ಟಿ ಪೀಡಿತ ಸಂತ್ರಸ್ತರಿಗೆ ಕೊಡುವ ಮೂಲಕ ರಾಜ್ಯದ ಹಿತ ಕಾಪಾಡಬೇಕು ಎಂದು ಅವರು ಒತ್ತಾಯಿಸಿದರು. ಕರ್ನಾಟಕದಲ್ಲಿ ನೆಲೆಸಿರುವ ಅನ್ಯ ಭಾಷಿಕರಿಗೆ ಒಂದೊಂದು ಪ್ರತ್ಯೇಕ ನಿಗಮಗಳನ್ನು ರಚಿಸಿದರೆ ಮುಂದೊಂದು ದಿನ ಕನ್ನಡಿಗರು ಭಯ ಭೀತಿಗೊಳ್ಳುವಂತಾಗುತ್ತದೆ. ಆದ್ದರಿಂದ ಕೂಡಲೇ ಪ್ರಾಧಿಕಾರವನ್ನು ರದ್ದುಪಡಿಸಿ, ಅವರ ಬೇಡಿಕೆಗಳನ್ನು ಇಡೇರಿಸಬೇಕು ಎಂದು ಅವರು ಆಗ್ರಹಿಸಿದರು.
ಸಂಘಟನೆಯ ಜಿಲ್ಲಾಧ್ಯಕ್ಷ ಚನ್ನವೀರ ಗೌರೆ, ಜಿಲ್ಲಾ ಗೌರವಾಧ್ಯಕ್ಷ ಸುರೇಶ ಗೌರೆ ಹಾಗೂ ಕಾರ್ಯಕರ್ತರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…