ಬಿಸಿ ಬಿಸಿ ಸುದ್ದಿ

ಪ್ರಿಯಾಂಕ್ ಖರ್ಗೆ ಹುಟ್ಟುಹಬ್ಬ: 500 ಬಡ ಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ

ವಾಡಿ: ಮಾಜಿ ಸಚಿವ, ಹಾಲಿ ಶಾಸಕ ಪ್ರಿಯಾಂಕ್ ಖರ್ಗೆ ಅವರ ೪೨ನೇ ಹುಟ್ಟುಹಬ್ಬದ ನಿಮಿತ್ತ ಸ್ಥಳೀಯ ಪುರಸಭೆ ಕಾಂಗ್ರೆಸ್ ಆಡಳಿತದ ವತಿಯಿಂದ ಪಟ್ಟಣದ ವಿವಿಧ ಬಡಾವಣೆಗಳ ಆಯ್ದ ಒಟ್ಟು ೫೦೦ ಬಡ ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸಲಾಯಿತು. ರೈಲು ನಿಲ್ದಾಣ ಆವರಣದಲ್ಲಿ ನಿರ್ಮಿಸಲಾದ ವೇದಿಕೆಯಲ್ಲಿ ಪುರಸಭೆ ಅಧ್ಯಕ್ಷೆ ಝರೀನಾಬೇಗಂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಮಹೆಮೂದ್ ಸಾಹೇಬ ಹಾಗೂ ಹಿರಿಯ ಮುಖಂಡ ಟೋಪಣ್ಣ ಕೋಮಟೆ ಅವರು ಕೇಕ್ ಕತ್ತರಿಸಿ ಕಾರ್ಯಕರ್ತರಿಗೆ ಸಿಹಿ ಹಂಚಿದರು.

ಸಭೆ ಉದ್ದೇಶಿಸಿ ಮಾತನಾಡಿದ ಪುರಸಭೆ ಸದಸ್ಯ, ಕಾಂಗ್ರೆಸ್ ಮುಖಂಡ ದೇವಿಂದ್ರ ಕರದಳ್ಳಿ, ಮಹಾಮಾರಿ ಕೊರೊನಾ ಹೊಡೆತ ಹಾಗೂ ಭೀಕರ ಪ್ರವಾಹ ಸಂಕಷ್ಟದ ಮಧ್ಯೆ ಈ ವರ್ಷ ಜನ್ಮದಿನ ಆಚರಿಸಿಕೊಳ್ಳಲು ಶಾಸಕ ಪ್ರಿಯಾಂಕ್ ಖರ್ಗೆ ನಿರಾಕರಿಸಿದ್ದಾರೆ. ದುಬಾರಿ ಖರ್ಚು ಭರಿಸಿ ಸಾವಿರಾರು ಜನ ಕಾರ್ಯಕರ್ತರು ಕೇಕ್ ಹೊತ್ತುಕೊಂಡು ಕಲಬುರಗಿಯಿಂದ ಬೆಂಗಳೂರಿಗೆ ಬರುವುದರಲ್ಲಿ ಅರ್ಥವಿಲ್ಲ. ಸ್ಥಳೀಯವಾಗಿ ಹಸಿದವರಿಗೆ ನೆರವಿನ ಹಸ್ತ ಚಾಚುವ ಮೂಲಕ ತಮ್ಮ ಜನ್ಮದಿನ ಆಚರಿಸುವಂತೆ ಸೂಚಿಸಿದ್ದರು. ಪರಿಣಾಮ ಪುರಸಭೆ ಆಡಳಿತದಿಂದ ೫೦೦ ಅತ್ಯಂತ ಬಡ ಕುಟುಂಬಗಳನ್ನು ಗುರುತಿಸಿ ದಿನಸಿ ಕಿಟ್ ವಿತರಿಸಲಾಗಿದೆ ಎಂದರು.

ಪ್ರಿಯಾಂಕ್ ಖರ್ಗೆ ಎಂದರೆ ಕೇವಲ ಓರ್ವ ರಾಜಕಾರಣಿಯಲ್ಲ. ನಂಬಿದ ಜನರಿಗೆ ಕೊಟ್ಟ ಭರವಸೆ ಈಡೇರಿಸುವ ಪ್ರಗತಿಯ ಪಥ. ಹಾಳುಕೊಂಪೆಯಾಗಿದ್ದ ಚಿತ್ತಾಪುರ ತಾಲೂಕು ಕ್ಷೇತ್ರವನ್ನು ಅಭಿವೃದ್ಧಿ ಶಿಖರವಾಗಿ ಎತ್ತರಿಸಿದ್ದಾರೆ. ಶಿಕ್ಷಣ, ಆರೋಗ್ಯ, ಕೃಷಿ ಕ್ಷೇತ್ರ ಸೇರಿದಂತೆ ಅನೇಕ ವಲಯಗಳಿಗೆ ಸಾವಿರಾರು ಕೋಟಿ ರೂ. ಅನುದಾನ ನೀಡುವ ಮೂಲಕ ಪ್ರಗತಿಯ ದಿಕ್ಕು ಬದಲಿಸಿದ್ದಾರೆ. ಸೌಲಭ್ಯಗಳಿಂದ ದೂರ ಉಳಿದ ಜನರನ್ನು ಪ್ರೀತಿಸುವ ಶಾಸಕ ಪ್ರಿಯಾಂಕ್, ಹಂತ ಹಂತವಾಗಿ ಜೀವನಾಗತ್ಯತೆಗಳನ್ನು ಪೂರೈಸುವ ಪ್ರಾಮಾಣಿಕ ರಾಜಕಾರಣಿಯಾಗಿದ್ದಾರೆ. ಖರ್ಗೆ ಅವರ ಜನಪರ ಆಡಳಿತವನ್ನು ಸಹಿಸದ ಕೆಲ ರಾಜಕೀಯ ಶತ್ರುಗಳು, ಇಲ್ಲಸಲ್ಲದ ಆರೋಪದಲ್ಲಿ ತೊಡಗಿದ್ದಾರೆ. ಶಾಸಕ ಪ್ರಿಯಾಂಕ್ ಖರ್ಗೆ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ದುಷ್ಕೃತ್ಯಕ್ಕೆ ಕೈ ಹಾಕಿದ್ದಾರೆ. ಇದೆಲ್ಲವನ್ನೂ ಎದುರಿಸಿ ಅಭಿವೃದ್ಧಿಯಲ್ಲಿ ತೊಡಗುವುದು ಸಾಮಾನ್ಯ ಮಾತಲ್ಲ ಎಂದು ಹೇಳಿದರು.

ಪುರಸಭೆ ಉಪಾಧ್ಯಕ್ಷ ತಿಮ್ಮಯ್ಯ ಪವಾರ, ಚುನಾಯಿತ ಸದಸ್ಯರಾದ ಮಲ್ಲಯ್ಯ ಗುತ್ತೇದಾರ, ವಿಶಾಲ ನಂದೂರಕರ, ಶರಣು ನಾಟೀಕಾರ, ಮಹ್ಮದ್ ಗೌಸ್, ಪೃಥ್ವಿರಾಜ ಸೂರ್ಯವಂಶಿ, ಮರಗಪ್ಪ ಕಲಕುಟಗಿ, ಕಾಂಗ್ರೆಸ್ ಮುಖಂಡರಾದ ಟೋಪಣ್ಣ ಕೋಮಟೆ, ಬಾಬುಮಿಯ್ಯಾ, ಚಂದ್ರಸೇನ ಮೇನಗಾರ, ನಾಗೇಂದ್ರ ಜೈಗಂಗಾ, ಶ್ರವಣಕುಮಾರ ಮೌಸಲಗಿ, ಬಸವರಾಜ ಕೇಶ್ವಾರ, ಉಮೇರ ಜುನೈದಿ, ವಿಜಯಕುಮಾರ ಸಿಂಗೆ, ಸೂರ್ಯಕಾಂತ ರದ್ದೇವಾಡಿ, ಅಶ್ರಫ್ ಖಾನ್, ಭೀಮಣ್ಣ ಹವಾಲ್ದಾರ, ಚಂದ್ರಶೇಖರ ಧನ್ನೇಕರ, ನಾಸೀರ ಹುಸೇನ, ಚಾಂದಮಿಯ್ಯಾ, ಶರಣಬಸು ಸಿರೂರಕರ ಪಾಲ್ಗೊಂಡಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

2 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

2 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

2 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

19 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

21 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago