ಬಿಸಿ ಬಿಸಿ ಸುದ್ದಿ

ರಾಷ್ಟ್ರೀಯ ಹೊಸ ಶಿಕ್ಷಣ ನೀತಿ ವಿರುದ್ಧ ಹೋರಾಟ: 26ಕ್ಕೆ ಕಾರ್ಮಿಕರ ಮುಷ್ಕರಕ್ಕೆ ಎಐಡಿಎಸ್‌ಒ ಬೆಂಬಲ

ವಾಡಿ: ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ಹಾಗೂ ರೈತ ವಿರೋಧಿ ಖಾಯ್ದೆಗಳನ್ನು ವಿರೋಧಿಸಿ ನ.೨೬ ರಂದು ರೈತ-ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಅಖಿಲ ಭಾರತ ಮು?ರಕ್ಕೆ ಆಲ್ ಇಂಡಿಯಾ ಡೆಮಾಕ್ರೇಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‌ಒ) ಬೆಂಬಲ ವ್ಯಕ್ತಪಡಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಎಐಡಿಎಸ್‌ಒ ಅಧ್ಯಕ್ಷ ಗೌತಮ ಪರತೂರಕರ, ಉಚಿತವಾಗಿ ವೈಜ್ಞಾನಿಕ ಧರ್ಮನಿರಪೇಕ್ಷ ಶಿಕ್ಷಣ ನೀಡಬೇಕಾದ ಸರಕಾರ ಇಡೀ ಶಿಕ್ಷಣವನ್ನು ಕೋಮುವಾದೀಕರಣಗೊಳಿಸಿ ವ್ಯಾಪಾರೀಕರಣಗೊಳಿಸಿದೆ. ಶಿಕ್ಷಣ ತಜ್ಞರು, ಶಿಕ್ಷಕರು, ಪೋ?ಕರು, ವಿದ್ಯಾರ್ಥಿಗಳ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದೆ. ಅತ್ಯಂತ ಅಪ್ರಜತಾಂತ್ರಿಕವಾಗಿ ಹೊಸ ಶಿಕ್ಷಣ ನೀತಿಯನ್ನು ಇಡೀ ದೇಶದ ಜನತೆಯ ಮೇಲೆ ಹೇರಲಾಗಿದೆ. ಶಿಕ್ಷಣದಿಂದ ಇಗಾಗಲೇ ವಂಚಿತರಾಗಿರುವ ದೇಶದ ಅಸಂಖ್ಯಾತ ಬಡ ಮಕ್ಕಳು ಈ ನೀತಿಯಿಂದಾಗಿ ಶಿಕ್ಷಣದಿಂದ ಮತ್ತ? ದೂರ ತಳ್ಳಲ್ಪಡುತ್ತಾರೆ. ಇನ್ನೊಂದೆಡೆ ಸರ್ಕಾರವು ಈ ನೀತಿಯ ಮೂಲಕ ದೊಡ್ಡ ಉದ್ಯಮಪತಿಗಳಿಗೆ, ಕಾರ್ಪೋರೇಟ್ ಮನೆತನಗಳಿಗೆ ಶಿಕ್ಷಣದಲ್ಲಿ ಬಂಡವಾಳ ಹೂಡಿ ಮತ್ತ? ಲಾಭ ಮಾಡಿಕೊಳ್ಳಲು ಅನುವು ಮಾಡಿಕೊಡಲಿದೆ ಎಂದು ದೂರಿದ್ದಾರೆ.

ರಾಜ್ಯದ ಸಾವಿರಾರು ಶಾಲೆಗಳು ಮುಚ್ಚುವ ಭೀತಿಯಲ್ಲಿವೆ. ಕೇಂದ್ರ ಸರ್ಕಾರದ ಕಾರ್ಪೋರೇಟ್ ಪರ, ಜನ ವಿರೋಧಿ ಹೊಸ ಶಿಕ್ಷಣ ನೀತಿಯನ್ನು ವಿರೋಧಿಸಿ ಎಐಡಿಎಸ್‌ಒ ಸಂಘಟಿಸಿದ್ದ ಸಹಿ ಸಂಗ್ರಹದಲ್ಲಿ ಇಡೀ ದೇಶದಾದ್ಯಂತ ಲಕ್ಷಾಂತರ ಸಹಿಗಳು ಸಂಗ್ರಹವಾಗಿವೆ. ದೇಶದ ಅನೇಕ ಶಿಕ್ಷಣ ತಜ್ಞರು, ಶಿಕ್ಷಕರು, ವಿದ್ಯಾರ್ಥಿಗಳು ತಮ್ಮ ಸಹಿ ನೀಡುವುದರ ಮೂಲಕ ಹೊಸ ಶಿಕ್ಷಣ ನೀತಿ-೨೦೨೦ ವಿರೋಧಿಸಿದ್ದಾರೆ.

ರಾಜ್ಯದಲ್ಲಿಯೂ ಸಾವಿರಾರು ಸಹಿಗಳು ಸಂಗ್ರಹವಾಗಿವೆ. ನ.೨೬ ರಂದು ಸಾರ್ವತ್ರಿಕ ಮುಷ್ಕರದಲ್ಲಿ ಪಾಲ್ಗೊಳ್ಳುವ ಮೂಲಕ ಸಹಿಗಳನ್ನೊಳಗೊಂಡ ಮನವಿಪತ್ರವನ್ನು ಭಾರತದ ರಾಷ್ಟ್ರಪತಿಗಳಿಗೆ ಹಾಗೂ ಎಲ್ಲಾ ರಾಜ್ಯಗಳ ರಾಜ್ಯಪಾಲರಿಗೆ ಕಳುಹಿಸಲಾಗುವುದು. ಆದ್ದರಿಂದ ಶಿಕ್ಷಣ ವಿರೋಧಿ ಖಾಸಗೀಕರಣ, ವ್ಯಾಪಾರೀಕರಣ, ಕೋಮುವಾದೀಕರಣಕ್ಕೆ ಉತ್ತೇಜನ ನೀಡುವ ಹೊಸ ಶಿಕ್ಷಣ ನೀತಿಯನ್ನು ವಿರೋಧಿಸಿ ಶಿಕ್ಷಣ ತಜ್ಞರು, ಶಿಕ್ಷರು, ಪೋ?ಕರು, ವಿದ್ಯಾರ್ಥಿಗಳು ಮು?ರದಲ್ಲಿ ಪಾಲ್ಗೊಳ್ಳಬೇಕೆಂದು ಗೌತಮ ಪರತೂರಕರ ಕರೆ ನೀಡಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

5 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

8 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

14 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

14 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

15 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago