ಬಿಸಿ ಬಿಸಿ ಸುದ್ದಿ

ರಕ್ತವನ್ನು ನೀಡುವುದರಿಂದ ಇನ್ನೊಬ್ಬರ ಜೀವವನ್ನು ಉಳಿಸಬಹುದು-ಡಾ.ರಶೀದ್

ಶಹಾಬಾದ:ರಕ್ತದಾನ ಅತ್ಯಂತ ಶ್ರೇಷ್ಠ ದಾನ.ರಕ್ತವನ್ನು ನೀಡುವುದರಿಂದ ಇನ್ನೊಬ್ಬರ ಜೀವವನ್ನು ಉಳಿಸಬಹುದು.ಆ ತೃಪ್ತಿಯೂ ನಮಗೆ ಸಿಗುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ ಹೇಳಿದರು.

ಅವರು ಸೋಮವಾರ ಮದರ್ ತೆರೆಸಾ ಫೌಂಡೇಶನ ವತಿಯಿಂದ ನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಪುಣ್ಯ ಪುರುಷರ ಜಯಂತಿ ಮತ್ತು ಇತರ ವಿಶೇಷ ದಿನಗಳಲ್ಲಿ ರಕ್ತದಾನ ಶಿಬಿರ ಆಯೋಜನೆ ಮಾಡುವ ಮೂಲಕ ಸಂಕಷ್ಟದಲ್ಲಿರುವ ಬಡರೋಗಿಗಳಿಗೆ ಸ್ಪಂದಿಸಲು ಮುಂದಾದರೇ ಅದಕ್ಕಿಂತ ಹೆಚ್ಚಿನ ತೃಪ್ತಿ ಬದುಕಿನಲ್ಲಿ ಮತ್ತೊಂದಿಲ್ಲ ಎಂದು ಹೇಳಿದರು.

ಮದರ್ ತೆರೆಸಾ ಫೌಂಡೇಶನನ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷೆ ನಸರತ್ ಬೇಗಂ ಮಾತನಾಡಿ, ರಕ್ತದಾನ ಮಾಡುವುದರಿಂದ ದೇಹದ ಆರೋಗ್ಯ ಚೆನ್ನಾಗಿರುವುದಲ್ಲದೇ, ಸಾಯುವ ಅಂಚಿನಲ್ಲಿರುವ ವ್ಯಕ್ತಿಗೆ ಬದುಕನ್ನು ನೀಡಬಲ್ಲದು.ಆದ್ದರಿಂದ ರಕ್ತದಾನ ಶಿಬಿರ ಯಸಸ್ವಿಯಾಗಬೇಕಾದರೆ ಸಾರ್ವಜನಿಕರ ಸಹಭಾಗಿತ್ವ ಮುಖ್ಯ ಎಂದು ಹೇಳಿದರು.

ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಬ್ದುಲ್ ರಹೀಮ್, ಮಾಜಿ ನಗರಸಭೆಯ ಅಧ್ಯಕ್ಷ ಗಿರೀಶ ಕಂಬಾನೂರ, ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ನಗರಸಭೆಯ ಸದಸ್ಯ ಡಾ.ಅಹ್ಮದ್ ಪಟೇಲ್, ಜೆಡಿಎಸ್ ಅಧ್ಯಕ್ಷ ರಾಜ ಮಹ್ಮದ ರಾಜಾ, ಡಾ.ಅಸ್ಲಾಂ ಪಾಷಾ, ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ, ಸಯ್ಯದ್ ಅಬ್ದುಲ್ ರೆಹಮಾನ, ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಲೋಹಿತ್ ಕಟ್ಟಿ, ನವೀನಕುಮಾರ, ಜೆಡಿಎಸ್ ಅಲ್ಪಸಂಖ್ಯಾತರ ವಿಭಾಗದ ಪ್ರಧಾನ ಕಾರ್ಯದಶರ್ಿ ಶೇಖ ಚಾಂದ ಪಾಷಾ, ಸಂಘಟಕರಾದ ಮದರ ತೆರೆಸಾ ಫೌಂಡೇಶನ ಜಿಲ್ಲಾಧ್ಯಕ್ಷ ಮಹ್ಮದ್ ರಿಯಾಜ ಜಮಾದಾರ, ಮಹ್ಮದ್ ಶೇರ ಖಾಜಿ,ಹಫೀಜ್ ಶೋಯೆಬ, ಶೇಖ ಸದ್ದಮ್ ಅನ್ವರಿ, ಆರೋಗ್ಯ ನಿರೀಕ್ಷಕ ಶಿವರಾಜಕುಮಾರ ಸೇರಿದಂತೆ ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಇದ್ದರು.

emedia line

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

16 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago