ಬಿಸಿ ಬಿಸಿ ಸುದ್ದಿ

ಅಧಿಕಾರಿಗಳು ಗ್ರಾಮಸ್ಥರ ಸಮಸ್ಯೆಯನ್ನು ಮೊದಲು ಬಗೆಹರಿಸಿ-ಸಂಗೀತಾ ಕಾರೋಳ್ಳಿ

ಶಹಾಬಾದ:ತಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಯಾವುದೇ ಸಮಸ್ಯೆ ಹೊತ್ತು ಗ್ರಾಮಸ್ಥರು ಬಂದರೆ ಅದಕ್ಕೆ ಸ್ಪಂದಿಸಿ, ಕೂಡಲೇ ಆ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮಕೈಗೊಳ್ಳಬೇಕೆಂದು ಅಧ್ಯಕ್ಷೆ ಸಂಗೀತಾ ದೇವೆಂದ್ರ ಕಾರೊಳ್ಳಿ ತಾಕೀತು ಮಾಡಿದರು.

ಅವರು ಸೋಮವಾರ ನಗರದ ತಾಲೂಕಾ ಪಂಚಾಯತಿ ಕಾರ್ಯಾಲಯದಲ್ಲಿ ಪ್ರಪ್ರಥಮ ತಾಲೂಕಾ ಪಂಚಾಯತಿ ಸಾಮನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಭೆ ನಡೆಯುತ್ತಿದ್ದಂತೆ ತಾಲೂಕಿನ ಎಲ್ಲಾ ಅಧಿಕಾರಿಗಳು ಬಂದಿದ್ದಾರೆಯೇ ಎಂದು ಅಧ್ಯಕ್ಷೆ ಸಂಗೀತಾ ಕಾರೊಳ್ಳಿ ಕೇಳಿ, ಸಭೆ ಪ್ರಾರಂಭಿಸಲು ಸೂಚಿಸಿದರು. ಸಭೆಯಲ್ಲಿ ತೋಟಗಾರಿಕೆ ಇಲಾಖೆಯ ಅಧಿಕಾರಿ ಸಿದ್ದಣ್ಣ ಅಣಬಿ ಅವರು ಮಾತನಾಡಿ, ಇಲಾಖೆಯಲ್ಲಿ ಕೈಗೊಂಡ ಕಾರ್ಯಗಳನ್ನು ತಿಳಿಸಿದರು.ಅದಕ್ಕೆ ಶಹಾಬಾದ ವ್ಯಾಪ್ತಿಯ ಶಾಲೆಗಳಲ್ಲಿ ಕೈತೋಟ ನಿರ್ಮಾಣ ಮಾಡಿದ್ದೀರಾ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಣ ಶೃಂಗೇರಿ ಕೇಳಿದರು.ಚಿತ್ತಾಪೂರ ತಾಲೂಕಿನ ವ್ಯಾಪ್ತಿಯ ಶಾಲೆಗಳಲ್ಲಿ ಕೈಗೊಂಡಿದ್ದು. ಸದ್ಯ ಶಹಾಬಾದ ವ್ಯಾಪ್ತಿಯಲ್ಲಿ ಕೈಗೊಳ್ಳಲಿದ್ದೆವೆ ಎಂದು ತಿಳಿಸಿದರು.ಅಲ್ಲದೇ ಗ್ರಾಮೀಣ ಕುಡಿಯುವ ನೀರಿನ ಸರಬರಾಜು ಇಲಾಖೆಯ ಅಧಿಕಾರಿ ಗಂಗಾಧರ ಮಾತನಾಡಿ, ಹೊನಗುಂಟಾ ಗ್ರಾಮದ ಎಸ್ಸಿ ಏರಿಯಾದಲ್ಲಿ ನೀರು ಸರಬರಾಜು ಮಾಡುವ ಕಾರ್ಯ ಪೂರ್ಣಗೊಂಡಿದೆ. ಭಂಕೂರ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ  ಅನುದಾನ ಸಾಕಾಗುತ್ತಿಲ್ಲ.ಆದ್ದರಿಂದ 1.75 ಲಕ್ಷ ರೂ. ಅನುದಾನ ಒದಗಿಸುವಂತೆ ಪ್ರಸ್ತಾವನೆ ಕಳಿಸಲಾಗಿದೆ ಎಂದು ತಿಳಿಸಿದರು.

ಪಶು ಆಸ್ಪತ್ರೆಯ ವೈದ್ಯಾಧಿಕಾರಿ ನೀಲಕಂಠರಾವ ಪಾಟೀಲ ಮಾತನಾಡಿ, ನಮ್ಮ ಪಶು ಆಸ್ಪತ್ರೆಯ ವ್ಯಾಪ್ತಿಯಲ್ಲಿ ಸುಮಾರು 1207 ವಾರ್ಷಿಕ ಗುರಿಯನ್ನು ಹೊಂದಿದ್ದು, ಈಗಾಗಲೇ ನಾವು 97 ಶೇ ಕೃತಕ ಗರ್ಭಧಾರಣೆ ಮಾಡಲಾಗಿದೆ.ಕೊಕ್ಕರೆ ರೋಗ ಲಸಿಕೆ, ಕಾಲುಬಾಯಿ ರೋಗದ ಲಸಿಕೆ, ಗ್ರಾಮ ಸಭಾ ಸಂದರ್ಶನ,ಕಿಸಾನ ಸಂರ್ಕ ಸಭೆ ಸೇರಿದಂತೆ ಇತರ ಕಾರ್ಯಕ್ರಮಗಳು ಮಾಡಲಾಗಿದೆ ಎಂದು ಪ್ರಗತಿಯ ವರದಿ ತಿಳಿಸಿದರು.ಅಲ್ಲದೇ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಗಿರೀಶ ರಂಜೋಳಕರ ಪ್ರಗತಿಯ ವರದಿ ತಿಳಿಸಿದರು.

ನಂತರ ಅಂಗನವಾಡಿ ಕೇಂದ್ರಗಳಲ್ಲಿನ ಆಹಾರ ಪದಾರ್ಥಗಳು ಅರ್ಹ ಫಲಾನುಭವಿಗಳಿಗೆ ಸೇರುತ್ತಿಲ್ಲ. ಅಲ್ಲಿನ ಅಂಗನವಾಡಿ ಮೇಲ್ವಿಚಾರಕರು ಇತರ ಸಿಬ್ಬಂದಿಗಳ ಮನೆಗೆ ಹೋಗುತ್ತಿದೆ ಎಂಬ ದೂರುಗಳು ಬರುತ್ತಿದೆ.ಆದ್ದರಿಂದ ಫಲಾನುಭವಿಗಳಿಗೆ ಸರಿಯಾಗಿ ಮುಟ್ಟುವಂತೆ ಕ್ರಮಕೈಗೊಳ್ಳಬೇಕೆಂದು ಅಂಗನವಾಡಿ ಮೇಲ್ವಿಚಾರಿಕಿಯರಿಗೆ ತಿಳಿಸಿದರು.

ತಾಪಂ ಉಪಾಧ್ಯಕ್ಷೆ ವಿಜಯಲಕ್ಷ್ಮಿ ಸುರೇಶ ಚವ್ಹಾಣ, ತಾಪಂ ಸದಸ್ಯೆ ಮೇರಾಜಬೇಗಂ ಶೇರಲಿ,ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಣ ಶೃಂಗೇರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

emedia line

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

18 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago