ಶಹಾಬಾದ:ಕರ್ನಾಟಕ ದಲಿತ ನೌಕರರ ಒಕ್ಕೂಟದ ವತಿಯಿಂದ ನವೆಂಬರ್ 26 ರಂದು ಬೆಳಿಗ್ಗೆ 10-30 ಗಂಟೆಗೆ ನಗರದ ಅಂಬೇಡ್ಕರ್ ಪ್ರತಿಮೆಯ ಹತ್ತಿರ ಸಂವಿಧಾನ ಸಮರ್ಪಣ ದಿನಾಚರಣೆ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಉದ್ಘಾಟಿಸುವರು, ಮುಖ್ಯ ಅತಿಥಿಗಳಾಗಿ ದಸಂಸ ರಾಜ್ಯ ಸಂಘಟನಾ ಸಂಚಾಲಕ ಮಲ್ಲೇಶಿ ಸಜ್ಜನ್, ಮಾಜಿ ನಗರಸಭೆಯ ಅಧ್ಯಕ್ಷ ಗಿರೀಶ ಕಂಬಾನೂರ, ತಾಪಂ ಇಓ ಲಕ್ಷ್ಮಣ ಶೃಂಗೇರಿ, ಮುಖ್ಯ ಭಾಷಣಕಾರರಾಗಿ ಕಲಬುರಗಿ ಅಂಬೇಡ್ಕರ್ ಕಾಲೇಜಿನ ಉಪನ್ಯಾಸಕ ಡಾ.ಗಾಂಧೀಜಿ ಮಳಲಕೇರಿ ಆಗಮಿಸಲಿದ್ದಾರೆ. ಸಿದ್ರಾಮ ಉದಯಕರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.