ಎಸ್‌ಡಿಎ, ಎಫ್‌ಡಿಎ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲು ಆಗ್ರಹಿಸಿ ಪ್ರತಿಭಟನೆ

0
116

ಬೆಂಗಳೂರು: 2017 ರಲ್ಲಿ ನಡೆದ ಪ್ರಥಮ ದರ್ಜೆ, ದ್ವಿತೀಯ ದರ್ಜೆ ಸಹಾಯಕರ ಪರೀಕ್ಷೆಯಲ್ಲಿ 1812 ಮಂದಿ ಉತ್ತೀರ್ಣರಾಗಿದ್ದು, ಇದರಲ್ಲಿ ಕೆಲವರಿಗೆ ನೇಮಕಾತಿ ನೀಡಿ, ಮಿಕ್ಕವರಿಗೆ ಸರ್ಕಾರ ಮೋಸ ಮಾಡಿದೆ. ಈ ಕೂಡಲೇ ಮಿಕ್ಕ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಬಿಡಬೇಕು ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಉಪಾಧ್ಯಕ್ಷ ಸುರೇಶ್ ರಾಥೋಡ್ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು.

ನೊಂದ ಅಭ್ಯರ್ಥಿಗಳು ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ನಡೆಸುತ್ತಿರುವ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, ದೇವರು ಕೊಟ್ಟರು ಪೂಜಾರಿ ಕೊಡಲಿಲ್ಲ ಎನ್ನುವಂತಾಗಿದೆ ಅಭ್ಯರ್ಥಿಗಳ ಪರಿಸ್ಥಿತಿ, ಹಣಕಾಸು ಇಲಾಖೆ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡದಂತೆ ಇತರೇ ಇಲಾಖೆಗಳಿಗೆ ಆದೇಶ ನೀಡಿದ್ದರೂ ಸಹ ಕೆಲವು ಇಲಾಖೆಗಳು ಅಭ್ಯರ್ಥಿಗಳನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಿಕೊಂಡಿವೆ ಇದರ ಹಿಂದಿರುವ ಉದ್ದೇಶ ಏನು ಎಂದು ಪ್ರಶ್ನಿಸಿದರು.

Contact Your\'s Advertisement; 9902492681

ಮುಖ್ಯ ವಕ್ತಾರ ಶರತ್ ಖಾದ್ರಿ ಮಾತನಾಡಿ, ನೊಂದ ಅಭ್ಯರ್ಥಿಗಳ ಪರವಾಗಿ ಆಮ್ ಆದ್ಮಿ ಪಕ್ಷ ಸದಾ ಇರುತ್ತದೆ, ಪಿಯು ಉಪನ್ಯಾಸಕರಿಗೂ ನೇಮಕಾತಿ ಪತ್ರ ನೀಡುವಂತೆ ಆಗ್ರಹಿಸಿ ಎಎಪಿ ಜತೆಯಲ್ಲಿ ನಿಂತಿತ್ತು, ಈಗ ನಿಮ್ಮ ಜತೆಯೂ ಕಡೆ ತನಕ ಇರುತ್ತದೆ ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ 60 ಲಕ್ಷ ಉದ್ಯೋಗ ಸೃಷ್ಟಿಸುತ್ತೇನೆ ಎಂದು ಸುಳ್ಳು ಹೇಳುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪನವರೇ ಮೊದಲು ಈ 1800 ಮಂದಿಗೆ ಕೆಲಸ ಕೊಡಿ ವ್ಯಂಗ್ಯವಾಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here