ಅಕ್ರಮ ಮರಳು ಸಾಗಾಣಿಕೆ ತಡೆಯುವಲ್ಲಿ ಅಧಿಕಾರಿಗಳು ವಿಫಲ: ಮಲ್ಲಿಕಾರ್ಜುನ ಸತ್ಯಂಪೇಟೆ

0
114
  • ಬಸವರಾಜ ಸಿನ್ನೂರ

ಶಹಾಪುರ: ಯಾದಗಿರಿ ಜಿಲ್ಲೆಯ ಸುರಪುರ ಮತ್ತು ಶಹಾಪುರ ಕೃಷ್ಣಾ ನದಿಯಿಂದ ಅಕ್ರಮ ಮರಳು ಸಾಗಾಟ ರಾಜಾರೋಷದಿಂದ ನಡೆದಿದ್ದು ಇದನ್ನು ತಡೆಗಟ್ಟುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು  ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ರೈತ ಸಂಘದ ಮುಖಂಡರಾದ ಮಲ್ಲಿಕಾರ್ಜುನ ಸತ್ಯಂಪೇಟೆ ಆಕ್ರೋಶ ವ್ಯಕ್ತಪಡಿಸಿದರು.

ಹತ್ತಿಗೂಡುರ ಗ್ರಾಮದ ಅಂಬೇಡ್ಕರ್ ಸರ್ಕಲ್ ನಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ, ಮರಳು ಸಾಗಿಸುವ ಟಿಪ್ಪರ್ ರಸ್ತೆ ಮೇಲೆ ಅಡ್ಡಾದಿಡ್ಡಿ ಓಡಾಡುವುದರಿಂದ ಹಲವಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ ನಿನ್ನೆ ಕೂಡ ಅತ್ತಿಗೋಡು ಗ್ರಾಮದ ಬಸ್ ನಿಲ್ದಾಣದ ಎದುರುಗಡೆ ಮರಳು ಸಾಗಿಸುವ ಟಿಪ್ಪರ್ ಚಕ್ರದಡಿ ಮೃತಪಟ್ಟಿರುವ ವ್ಯಕ್ತಿ ಕೂಡ ಬಡ ಕೃಷಿ ಕೂಲಿ ಕಾರ್ಮಿಕನಾಗಿದ್ದು ಕೂಡಲೇ ಆತನ ಕುಟುಂಬಕ್ಕೆ ಸರ್ಕಾರದಿಂದ ೨೫ ಲಕ್ಷ ಹಾಗೂ ಗಾಯಾಳುಗೆ 5 ಲಕ್ಷ  ರೂಪಾಯಿ ಪರಿಹಾರ ನೀಡಬೇಕು ಎಂದು ತಹಸೀಲ್ದಾರರ  ಮೂಲಕ ಸರಕಾರಕ್ಕೆ ಮನವಿ ಮಾಡಿಕೊಂಡರು.

Contact Your\'s Advertisement; 9902492681

ನಿನ್ನೆ ಅಪಘಾತ  ನಡೆದ ಸ್ಥಳದಲ್ಲಿ ಸಾಮಾಜಿಕ ಕಾರ್ಯಕರ್ತ ಶರಣರೆಡ್ಡಿ ಹತ್ತಿಗೂಡುರು  ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತರಾಟೆ ತೆಗೆದುಕೊಂಡು ಅಕ್ರಮ ಮರಳು ಸಾಗಿಸುವಲ್ಲಿ ಪೊಲೀಸರು ಕೂಡ ವಿಫಲರಾಗಿದ್ದಾರೆ ಎಂದಾಗ ಈತನ ವಿರುದ್ಧ ಪೊಲೀಸರು ಸಿಟ್ಟಿಗೆದ್ದು ಬೇಜವಾಬ್ದಾರಿತನದಿಂದ ವರ್ತಿಸಿದ್ದಾರೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಮೃತನ ಕುಟುಂಬಸ್ಥರು ಸಾಮಾಜಿಕ ಕಾರ್ಯಕರ್ತರು ರೈತಪರ ಸಂಘಟನೆಗಳ ಮುಖಂಡರು ಹಾಗೂ ಗ್ರಾಮದ ನಾಗರಿಕರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here